ಜಸ್ಪ್ರಿತ್ ಬುಮ್ರಾಗೆ ನಾಯಕತ್ವ ನೀಡುವ ಬಗ್ಗೆ ರವಿ ಶಾಸ್ತ್ರಿ ದೊಡ್ಡ ಹೇಳಿಕೆ
ಇನ್ನೇನು ಕೆಲವೇ ದಿನಗಳಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಬೇಕಿದೆ. ಈ ವೇಳೆ ಭಾರತ ತಂಡದ ನಾಯಕರು ಯಾರು ಆಗುತ್ತಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ವೇಳೆ ಹಲವು ಮಾಜಿ ಆಟಗಾರರು ತಮ್ಮ ತಮ್ಮ ಅನಿಸಿಕೆ ವ್ಯಕ್ತ ಪಡಿಸುತ್ತಿದ್ದಾರೆ. ಇದೇ ಸಾಲಿಗೆ ಈಗ ರವಿ ಶಾಸ್ತ್ರಿ ಸಹ ಸೇರಿಕೊಂಡಿದ್ದಾರೆ. ಇವರು ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ವೇಳೆ ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ವೇಳೆ ಎಲ್ಲರ ಕಣ್ಣುಗಳು ಶುಭಮನ್ ಗಿಲ್ ಅವರ ಮೇಲೆ ನೆಟ್ಟಿವೆ. ಆದರೆ ಇನ್ನು ಹಲವು ಆಟಗಾರರು ಜಸ್ಪ್ರಿತ್ ಬುಮ್ರಾ, ಕೆಎಲ್ ರಾಹುಲ್, ರಿಷಭ್ ಪಂತ್ ಅವರತ್ತ ಬೊಟ್ಟು ಮಾಡುತ್ತಿದ್ದಾರೆ.

ಐಸಿಸಿ ರಿವ್ಯೂನಲ್ಲಿ ಮಾತನಾಡಿದ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ತಮ್ಮ ಅನಿಸಿಕೆ ನೀಡಿದ್ದಾರೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರನ್ನು ತಂಡದ ನಾಯಕರಾಗಿ ನೇಮಿಸುವುದ ನನ್ನ ಆಯ್ಕೆ ಅಲ್ಲ. ಒಂದು ವೇಳೆ ಇವರಿಗೆ ಪಟ್ಟವನ್ನು ಕಟ್ಟಿದ್ದೇ ಆದಲ್ಲಿ ಇವರಲ್ಲಿರುವ ಬೆಸ್ಟ್ ಬೌಲರ್‌ನ್ನು ನೀವು ಕಳೆದುಕೊಳ್ಳಲಿದ್ದೀರಿ ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.
ಟೀಮ್ ಇಂಡಿಯಾದ ನಾಯಕರ ಬಗ್ಗೆ ಕೇಳಲಾದ ಪ್ರಶ್ನೆಗೆ ರವಿ ಶಾಸ್ತ್ರಿ, ಆಯ್ಕೆದಾರರು ಭಾರತದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡಬೇಕಾಗುತ್ತದೆ. ಇದೇ ವೇಳೆ ಜಸ್ಪ್ರಿತ್ ಬುಮ್ರಾ ಅವರಿಗೆ ನಾಯಕತ್ವದ ಹೊಣೆ ನೀಡಬಾರದು ಎಂದು ತಿಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಜಸ್ಪ್ರಿತ್ ಬುಮ್ರಾ ಅವರು ನಾಯಕರಾಗಿ ತಂಡವನ್ನು ಮುನ್ನಡೆಸಿದ ರೀತಿಯನ್ನು ನೋಡಿದಾಗ ನನಗೂ ಇವರಿಗೆ ನಾಯಕತ್ವ ನೀಡಬೇಕು ಎಂದು ಅನಿಸಿತು. ಆದರೆ ಇಗ ಅನಿಸುತ್ತಿದೆ ಇವರಿಗೆ ನಾಯಕತ್ವ ನೀಡುವುದು ಸರಿಯಲ್ಲ ಎಂದು ಅನಿಸುತ್ತಿದೆ ಎಂದಿದ್ದಾರೆ.
ಜಸ್ಪ್ರಿತ್ ಬುಮ್ರಾ ಏಕೆ ಒಳ್ಳೆಯ ಆಯ್ಕೆಯಲ್ಲ?
ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಬುಮ್ರಾ ತಂಡವನ್ನು ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಸಿಡ್ನಿ ಟೆಸ್ಟ್ ಪಂದ್ಯದಲ್ಲೂ ಬುಮ್ರಾ ತಂಡವನ್ನು ಮುನ್ನಡೆಸಿದರು. ಈ ವೇಳೆ ಇವರು ಗಾಯದ ಸಮಸ್ಯೆಗೆ ಒಳಗಾಗಿದ್ದರು. ಇದರಿಂದ ಇವರು ಮೂರು ತಿಂಗಳು ಕಾಲ ಮೈದಾನದಿಂದ ದೂರ ಉಳಿಯಬೇಕಾಯಿತು ಎಂದು ರವಿ ಶಾಸ್ತ್ರಿ ತಿಳಿಸಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿತು. ಅಲ್ಲದೆ ಇವರ ಅನುಪಸ್ಥಿತಿಯಲ್ಲೂ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಪ್ರಶ್ನೆಗಳಿಗೆ ಈ ತಿಂಗಳ ಕೊನೆಯಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications