IND vs AUS: ಆದಷ್ಟು ಬೇಗ ಆಸ್ಟ್ರೇಲಿಯಾಕ್ಕೆ ಭಾರತದ ಮ್ಯಾಚ್ ವಿನ್ನರ್ ಕಳುಹಿಸಿ; ರವಿಶಾಸ್ತ್ರಿ ಒತ್ತಾಯ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ಎರಡನೇ ದಿನದಾಟ ಮುಗಿದಿದ್ದು, ಬಳಿಕ ಟೀಮ್ ಇಂಡಿಯಾ ಹಿನ್ನಡೆಯಲ್ಲಿದೆ. ಎರಡನೇ ಇನಿಂಗ್ಸ್‌ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 128 ರನ್ ಕಲೆ ಹಾಕಿದ್ದು, ಇನ್ನೂ 29 ರನ್‌ಗಳ ಹಿನ್ನಡೆಯಲ್ಲಿದೆ. ಇದರ ಬೆನ್ನಲ್ಲೇ ಮಾಜಿ ಹೆಡ್ ಕೋಚ್ ರವಿಶಾಸ್ತ್ರಿ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಸಲಹೆ ನೀಡಿದ್ದಾರೆ. ಟೀಮ್ ಇಂಡಿಯಾದ ಮ್ಯಾಚ್ ವಿನ್ನರ್ ಅನ್ನು ಅದಷ್ಟು ಬೇಗ ಆಸ್ಟ್ರೇಲಿಯಾಕ್ಕೆ ಕಳುಹಿಸಲು ಒತ್ತಾಯಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿದೆ. ಆದರೆ, ಅಡಿಲೇಡ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲಿನ ಸುಳಿಗೆ ಸಿಲುಕಿದಂತೆ ಕಾಣುತ್ತಿದೆ. ಟೀಮ್ ಇಂಡಿಯಾ ಪರ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮಾತ್ರ ವಿಕೆಟ್ ಬೌಲರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮ್ಯಾಚ್ ವಿನ್ನರ್ ಅನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಲು ರವಿಶಾಸ್ತ್ರಿ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಾಮೆಂಟರಿ ಮಾಡುತ್ತಿರುವ ರವಿಶಾಸ್ತ್ರಿ ಅವರು ಜಸ್ಪ್ರೀತ್ ಬುಮ್ರಾ ಅವರ ಒತ್ತಡ ಕಡಿಮೆ ಮಾಡಬಲ್ಲ ಬೌಲರ್ ಅನ್ನು ಹೆಸರಿಸಿದ್ದಾರೆ. ಆ ಬೌಲರ್ ಬೇರೆ ಯಾರು ಅಲ್ಲ, ಮೊಹಮ್ಮದ್ ಶಮಿ. ಕಳೆದ ಒಂದು ವರ್ಷದಿಂದ ಶಮಿ ಗಾಯಗೊಂಡಿರುವ ಪರಿಣಾಮ ಟೀಮ್ ಇಂಡಿಯಾದಿಂದ ಹೊರಗುಳಿದ್ದಾರೆ. ಇದೀಗ ಗಾಯದಿಂದ ಚೇತರಿಸಿಕೊಂಡಿದ್ದು, ಭಾರತ ತಂಡಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ. ಇತ್ತ ಕಾಮೆಂಟರಿ ವೇಳೆ ರವಿಶಾಸ್ತ್ರಿ ಅವರು ಮೊಹಮ್ಮದ್ ಶಮಿ ಅವರ ಅನುಪಸ್ಥಿಯನ್ನು ನೆನಪಿಸಿಕೊಂಡಿದ್ದಾರೆ. 'ಮೊಹಮ್ಮದ್ ಶಮಿ ಅದಷ್ಟು ಬೇಗ ಇಲ್ಲಿಗೆ ಬಂದರೆ ಭಾರತಕ್ಕೆ ಉತ್ತಮವಾಗಿರುತ್ತದೆ. ಅವರು ಸಾಕಷ್ಟು ದೇಶೀಯ ಪಂದ್ಯಗಳನ್ನು ಆಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಬುಮ್ರಾ ಬೌಲಿಂಗ್ ಮಾಡುವಾಗ ಮತ್ತು ಉಳಿದ ಬೌಲರ್‌ಗಳು ಬೌಲಿಂಗ್ ಮಾಡುವಾಗ, ನೀವು ಎದುರಾಳಿ ತಂಡದ ಆಟಗಾರರ ಮೇಲೆ ಒತ್ತಡವನ್ನು ನೋಡಬಹುದು. ಬುಮ್ರಾ ಮೇಲೆ ಸಾಕಷ್ಟು ಒತ್ತಡವಿದೆ. ಗಾಯದಿಂದ ಚೇತರಿಸಿಕೊಂಡ ನಂತರ ಅನುಭವಿ ವೇಗದ ಬೌಲರ್ ಶಮಿಗೆ ಎಲ್ಲವೂ ಚೆನ್ನಾಗಿ ನಡೆಯುತ್ತಿದೆ. ಅವರು ದೇಶೀಯ ಟಿ20 ಟೂರ್ನಿಗಳಲ್ಲಿ ಬಂಗಾಳ ಪರ ಏಳು ಪಂದ್ಯಗಳನ್ನು ಆಡಿದ್ದಾರೆ. ಶಮಿ ಉತ್ತಮ ಬೌಲಿಂಗ್ ಪ್ರದರ್ಶನ ಮಾಡಿರುವುದು ಕಂಡು ಬಂದಿದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಧಿಕಾರಿಗಳು ಮತ್ತು ರಾಷ್ಟ್ರೀಯ ಆಯ್ಕೆಗಾರರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಅವರು ಟೀಮ್ ಇಂಡಿಯಾಕ್ಕೆ ಮರಳುತ್ತಿದ್ದಾರೆ ಎಂದು ಕಾಮೆಂಟರಿ ವೇಳೆ ರವಿಶಾಸ್ತ್ರಿ ತಿಳಿಸಿದ್ದಾರೆ.
ಶಮಿಗೆ ಅವಕಾಶ?
ಡಿಸೆಂಬರ್ 14 ರಿಂದ 18 ರವರೆಗೆ ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್‌ಗೆ ಶಮಿಯನ್ನು ಅದಷ್ಟು ಬೇಗ ಟೀಮ್ ಇಂಡಿಯಾಕ್ಕೆ ಸೇರಿಸಿಕೊಳ್ಳಿ. ಇಲ್ಲದಿದ್ದರೆ, ಶಮಿ ಖಂಡಿತವಾಗಿ ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಆಡಬಹುದು ಎಂದು ರವಿಶಾಸ್ತ್ರಿ ಭರವಸೆ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಶಮಿ ಯಶಸ್ವಿ ಪ್ರದರ್ಶನ ನೀಡಿದ್ದಾರೆ. ಅವರು 12 ಪಂದ್ಯಗಳಲ್ಲಿ 44 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲಿ ಅವರು ಆಸ್ಟ್ರೇಲಿಯಾದಲ್ಲಿ ಎಂಟು ಟೆಸ್ಟ್ ಪಂದ್ಯಗಳಲ್ಲಿ 31 ವಿಕೆಟ್‌ಗಳನ್ನು ಕಬಳಿಸಿರುವುದು ವಿಶೇಷ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications