For Quick Alerts
ALLOW NOTIFICATIONS  
For Daily Alerts
 

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ವಿರಾಟ್ ಕೊಹ್ಲಿ ನಾಯಕ? ರವಿಶಾಸ್ತ್ರಿ ಕೊಟ್ರು ಮಹತ್ವದ ಸುಳಿವು

ಸದ್ಯ ಭಾರತ ತಂಡದ ಪ್ರಮುಖ ಆಟಗಾರರು ಐಪಿಎಲ್‌ನಲ್ಲಿ ಬ್ಯಸಿಯಾಗಿದ್ದರೆ, ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗಾಗಿ ಸಜ್ಜಾಗುತ್ತಿದ್ದಾರೆ. ಮೇ 28ರಂದು ಐಪಿಎಲ್ ಫೈನಲ್ ನಡೆಯಲಿದ್ದು, ನಂತರ ಇಂಗ್ಲೆಂಡ್‌ಗೆ ಪ್ರಯಾಣ ಮಾಡಲಿದ್ದಾರೆ. ಜೂನ್ 7ರಂದು ಭಾರತ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಫೈನಲ್ ಪಂದ್ಯದಲ್ಲಿ ಎದುರಿಸಲಿದೆ.

ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯಾ 15 ಸದಸ್ಯರ ಬಳಗವನ್ನು ಹೆಸರಿಸಿವೆ. ಆಸ್ಟ್ರೇಲಿಯಾ ತಂಡವನ್ನು ಪ್ಯಾಟ್ ಕಮ್ಮಿನ್ಸ್ ಮುನ್ನಡೆಸಲಿದ್ದು ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಭಾರತ ತಂಡ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಪ್ರಮುಖ ಸಲಹೆ ನೀಡಿದ್ದಾರೆ. ಹೌದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ.

Ravi Shastri Suggests

ಅನಿರೀಕ್ಷಿತ ಪರಿಸ್ಥಿತಿ ಏನಾದರೂ ಎದುರಾದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ವಿರಾಟ್ ಕೊಹ್ಲಿಯನ್ನು ನಾಯಕತ್ವಕ್ಕೆ ಪರಿಗಣಿಸಬೇಕು ಎಂದು ರವಿಶಾಸ್ತ್ರಿ ಸಲಹೆ ನೀಡಿದ್ದಾರೆ. "ಪ್ರಮುಖ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಸಂಪೂರ್ಣವಾಗಿ ಫಿಟ್ ಆಗಿರಬೇಕು ಎಂದು ಬಯಸುತ್ತೇವೆ. ಒಂದು ವೇಳೆ ರೋಹಿತ್ ಫಿಟ್ ಆಗಿಲ್ಲದ ಸಂದರ್ಭಗಳಲ್ಲಿ, ನಾನು ಖಂಡಿತ ವಿರಾಟ್ ಕೊಹ್ಲಿ ಕಡೆಗೆ ನೋಡುತ್ತೇನೆ" ಎಂದು ಹೇಳಿದ್ದಾರೆ.

ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ

"ಒಮ್ಮೆ ರೋಹಿತ್ ಗಾಯಗೊಂಡರೆ, ಕೊಹ್ಲಿಯನ್ನು ಕೇಳಬಹುದು ಎಂದು ನಾನು ಭಾವಿಸಿದೆ. ರಾಹುಲ್ ದ್ರಾವಿಡ್ ಅದೇ ಕೆಲಸವನ್ನು ಮಾಡುತ್ತಿದ್ದಾನೆ ಎಂದು ನನಗೆ ಖಚಿತವಿಲ್ಲ, ನಾನು ಅವರೊಂದಿಗೆ ಮಾತನಾಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 2-1 ಮುನ್ನಡೆಯಲ್ಲಿರುವ ತಂಡದ ಭಾಗವಾಗಿರುವುದರಿಂದ ಕೊಹ್ಲಿ ಮುನ್ನಡೆಸಿದರೆ ಮಾತ್ರ ನ್ಯಾಯಯುತವಾಗಿರುವುದರಿಂದ ನಾನು ಮಂಡಳಿಗೆ ಶಿಫಾರಸು ಮಾಡಿದ್ದೇನೆ" ಎಂದು ರವಿಶಾಸ್ತ್ರಿ ಹೇಳಿದರು.

"ವಿರಾಟ್ ಕೊಹ್ಲಿ ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಕಳೆದ ವರ್ಷದಂತೆ ಅವರು ಕಾಣಿಸುತ್ತಿಲ್ಲ, ಸಾಕಷ್ಟು ಉತ್ಸಾಹದಲ್ಲಿ ಕಾಣುತ್ತಿದ್ದಾರೆ. ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೆಚ್ಚಿನ ಆತ್ಮವಿಶ್ವಾಸದಿಂದ ಆಡುತ್ತಿದ್ದಾರೆ. ಅವರು ಉತ್ತಮ ಗುಣಮಟ್ಟದ ಆಟಗಾರ" ಎಂದು ಹೇಳಿದರು.

ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡ ಕಂಡ ಯಶಸ್ವೀ ನಾಯಕ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿ ಅವರು ಹೆಚ್ಚಿನ ಪಂದ್ಯಗಳನ್ನು ಗೆಲ್ಲಿಸಿದ್ದಾರೆ. 2019-21ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ನಾಯಕರಾಗಿದ್ದರು, ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್ ಅವರ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಭಾರತ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

2014ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೆಲ್ಬೋರ್ನ್ ಟೆಸ್ಟ್ ನಂತರ ಧೋನಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ಬಳಿಕ ಕೊಹ್ಲಿ ಭಾರತದ ನಾಯಕರಾಗಿ ಅಧಿಕಾರ ವಹಿಸಿಕೊಂಡರು ಏಳು ವರ್ಷಗಳ ಕಾಲ ಯಶಸ್ವಿಯಾಗಿ ಭಾರತ ತಂಡವನ್ನು ಮುನ್ನಡೆಸಿದ ಅವರು 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿ ಬಳಿಕ ನಾಯಕತ್ವ ತ್ಯಜಿಸಿದ್ದರು. ಸದ್ಯ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಐಪಿಲ್‌ನಲ್ಲಿ ಉತ್ತಮವಾಗಿ ರನ್ ಗಳಿಸುತ್ತಿದ್ದಾರೆ.

Story first published: Friday, April 28, 2023, 23:04 [IST]
Other articles published on Apr 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+