IND vs AUS: ಆಸ್ಟ್ರೇಲಿಯಾ ವಿರುದ್ಧ ಈ ಸಾಧನೆ ಮಾಡಿದ 2ನೇ ಭಾರತೀಯ ಬೌಲರ್ ಎನಿಸಿದ ಆರ್ ಅಶ್ವಿನ್

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು (ಶುಕ್ರವಾರ, ಫೆಬ್ರವರಿ 17) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಪ್ರಾರಂಭವಾಗಿದ್ದು, ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಮಧ್ಯಾಹ್ನದ ಚಹಾ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡ 56 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿದೆ. ಪೀಟರ್ ಹ್ಯಾಂಡ್ಸ್‌ಕಾಂಬ್ 36 ರನ್ ಮತ್ತು ಪ್ಯಾಟ್ ಕಮ್ಮಿನ್ಸ್ 23 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಮೊದಲ ಟೆಸ್ಟ್‌ನಂತೆ ಎರಡನೇ ಟೆಸ್ಟ್ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಬಲವನ್ನು ಮುರಿದ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸದ್ಯ ಪ್ರಮುಖ 3 ವಿಕೆಟ್ ಪಡೆದಿದ್ದಾರೆ.
ಮಾರ್ನಸ್ ಲ್ಯಾಬುಶ್ಚಾಗ್ನೆ ಮತ್ತು ಸ್ಟೀವನ್ ಸ್ಮಿತ್ ಅವರನ್ನು ಒಂದೇ ಓವರ್‌ನಲ್ಲಿ ಔಟ್ ಮಾಡಿದ ರವಿಚಂದ್ರನ್ ಅಶ್ವಿನ್ ಎದುರಾಳಿ ತಂಡಕ್ಕೆ ದೊಡ್ಡ ಆಘಾತ ನೀಡಿದರು. ನಂತರ 47ನೇ ಓವರ್‌ನ ಕೊನೆಯ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಅವರ ವಿಕೆಟ್ ಪಡೆಯುತ್ತಿದ್ದಂತೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪ್ರಮುಖ ಮೈಲಿಗಲ್ಲು ಸ್ಥಾಪಿಸಿದರು.

ಅನಿಲ್ ಕುಂಬ್ಳೆ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 100 ವಿಕೆಟ್
ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದೇ ತಂಡದ ವಿರುದ್ಧ 100 ಮತ್ತು ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೆರಳೆಣಿಕೆಯ ಬೌಲರ್‌ಗಳ ಪಟ್ಟಿಗೆ ಸೇರಿದರು.
ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಅನಿಲ್ ಕುಂಬ್ಳೆ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 100 ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು. ಕನ್ನಡಿಗ ಅನಿಲ್ ಕುಂಬ್ಳೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಪರವಾಗಿ 111 ವಿಕೆಟ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.
ಅಷ್ಟೇ ಅಲ್ಲದೇ, ರವಿಚಂದ್ರನ್ ಅಶ್ವಿನ್ ಇದೀಗ ಒಟ್ಟಾರೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಗಳಿಸಿದ ಬೌಲರ್‌ಗಳೆನಿಸಿದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದೇ ತಂಡದ ವಿರುದ್ಧ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿ
ಶೇನ್ ವಾರ್ನ್: 195 ವಿಕೆಟ್ ಇಂಗ್ಲೆಂಡ್ ವಿರುದ್ಧ
ಡೆನ್ನಿಸ್ ಲಿಲ್ಲೆ: 167 ವಿಕೆಟ್ ಇಂಗ್ಲೆಂಡ್ ವಿರುದ್ಧ
ಕರ್ಟ್ಲಿ ಆಂಬ್ರೋಸ್: 164 ವಿಕೆಟ್ ಇಂಗ್ಲೆಂಡ್ ವಿರುದ್ಧ
ಗ್ಲೆನ್ ಮೆಕ್‌ಗ್ರಾತ್: 157 ವಿಕೆಟ್ ಇಂಗ್ಲೆಂಡ್ ವಿರುದ್ಧ
ಇಯಾನ್ ಬೋಥಮ್: 148 ವಿಕೆಟ್ ಇಂಗ್ಲೆಂಡ್ ಆಸ್ಟ್ರೇಲಿಯಾ

ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದ 8ನೇ ಭಾರತೀಯ
ಇನ್ನು ದೆಹಲಿಯಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡುವ ಮೂಲಕ ಆಲ್‌ರೌಂಡರ್ ರವೀಂದ್ರ ಜಡೇಜಾ 250 ವಿಕೆಟ್‌ಗಳ ಹೆಗ್ಗುರುತನ್ನು ತಲುಪಿದರು. ಇದರೊಂದಿಗೆ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳನ್ನು ಉರುಳಿಸಿದ 8ನೇ ಭಾರತೀಯ ಬೌಲರ್ ಎನಿಸಿಕೊಂಡರು.
ಇದಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್ ಹಾಗೂ 2500 ರನ್ ಗಳಿಸಿದ 4ನೇ ಭಾರತೀಯ ಎಂಬ ಹೆಗ್ಗಳಿಕೆಗೂ ರವೀಂದ್ರ ಜಡೇಜಾ ಪಾತ್ರರಾದರು. ಇದಕ್ಕೂ ಮುನ್ನ ಕಪಿಲ್ ದೇವ್, ರವಿಚಂದ್ರನ್ ಅಶ್ವಿನ್ ಮತ್ತು ಅನಿಲ್ ಕುಂಬ್ಳೆ ಕೂಡ ಈ ಸಾಧನೆ ಮಾಡಿದ್ದಾರೆ. ರವೀಂದ್ರ ಜಡೇಜಾ 250 ಟೆಸ್ಟ್ ವಿಕೆಟ್ ಮತ್ತು 2500 ಟೆಸ್ಟ್ ರನ್‌ಗಳನ್ನು ಗಳಿಸಿದ ಅತ್ಯಂತ ವೇಗದ ಭಾರತೀಯ ಆಟಗಾರ ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ಎರಡನೇ ವೇಗದ ಆಟಗಾರರೆನಿಸಿಕೊಂಡರು.

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ಗಳು
ಅನಿಲ್ ಕುಂಬ್ಳೆ: 619 ವಿಕೆಟ್
ರವಿಚಂದ್ರನ್ ಅಶ್ವಿನ್: 460 ವಿಕೆಟ್
ಕಪಿಲ್ ದೇವ್: 434 ವಿಕೆಟ್
ಹರ್ಭಜನ್ ಸಿಂಗ್: 417 ವಿಕೆಟ್
ಜಹೀರ್ ಖಾನ್: 311 ವಿಕೆಟ್
ಇಶಾಂತ್ ಶರ್ಮಾ: 311 ವಿಕೆಟ್
ಬಿಶನ್ ಸಿಂಗ್ ಬೇಡಿ: 266 ವಿಕೆಟ್
ರವೀಂದ್ರ ಜಡೇಜಾ: 250 ವಿಕೆಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications