R Ashwin: ತವರಿನಲ್ಲಿ ಅಶ್ವಿನ್ ನಿರ್ಮಿಸಿದ ದಾಖಲೆಗಳು ಯವವು?
ಟೀಮ್ ಇಂಡಿಯಾ ನಿರೀಕ್ಷೆಯಂತೆ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 280 ರನ್‌ಗಳಿಂದ ಜಯ ಸಾಧಿಸಿದೆ. ಈ ಜಯದ ಮೂಲಕ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯವನ್ನು ಗೆದ್ದು ಬೀಗಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ ಸ್ಥಾನವನ್ನು ಭದ್ರ ಪಡಿಸಿಕೊಂಡಿದೆ. ಈ ಜಯದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅಮೋಘ ಸಾಧಾನೆ ತೋರಿದ್ದರಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರವಿಚಂದ್ರನ್ ಅಶ್ವಿನ್ ಅವರು ಮೊದಲ ಇನ್ನಿಂಗ್ಸ್‌ನಲ್ಲಿ 133 ಎಸೆತಗಳಲ್ಲಿ 113 ರನ್‌ಗಳ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಇವರ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಬಾರಿಸಿದರು. ಮೊದಲ ಇನಿಂಗ್ಸ್‌ನಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಬಾಂಗ್ಲಾ ಬ್ಯಾಟರ್‌ಗಳನ್ನು ಕಾಡಿದರು. ಅಲ್ಲದೆ ಆರು ವಿಕೆಟ್ ಪಡೆದು ವಿಶೇಷ ಸಾಧನೆ ಮಾಡಿದರು.

ಶತಕ + ಐದು ವಿಕೆಟ್
ರವಿ ಅಶ್ವಿನ್ ಟೆಸ್ಟ್‌ನಲ್ಲಿ ಶತಕ ಸಿಡಿಸುವುದನ್ನು ಹೊರತುಪಡಿಸಿ 5 ವಿಕೆಟ್ ಪಡೆದಿದ್ದು ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ನಾಲ್ಕನೇ ಬಾರಿ ಆಗಿದೆ. ರವಿ ಅಶ್ವಿನ್ ಒಂದೇ ಟೆಸ್ಟ್‌ನಲ್ಲಿ ಶತಕ ಮತ್ತು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಮಾಜಿ ಆಲ್‌ರೌಂಡರ್ ಇಯಾನ್ ಬೋಥಮ್ ಮೊದಲ ಸ್ಥಾನದಲ್ಲಿದ್ದಾರೆ.
ಇಯಾನ್ ಬೋಥಮ್ 5 ಬಾರಿ ಈ ಸಾಧನೆ ಮಾಡಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಸ್ಪಿನ್ ಮಾಂತ್ರಿಕ ಅಶ್ವಿನ್ ಅವರು ಸ್ಥಾನ ಪಡೆದಿದ್ದಾರೆ. ಉಳಿದಂತೆ ವೆಸ್ಟ್ ಇಂಡೀಸ್‌ನ ಮಾಜಿ ದಿಗ್ಗಜ ಗ್ಯಾರಿ ಸೋಬರ್ಸ್, ಪಾಕಿಸ್ತಾನದ ಮುಷ್ತಾಕ್ ಮೊಹಮ್ಮದ್, ದಕ್ಷಿಣ ಆಫ್ರಿಕಾದ ಜಾಕ್ವೆಸ್ ಕಾಲಿಸ್, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಮತ್ತು ಭಾರತದ ರವೀಂದ್ರ ಜಡೇಜಾ ತಲಾ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ.
ವಾರ್ನ್ ದಾಖಲೆ ಸರಿಗಟ್ಟಿದ ಅಶ್ವಿನ್
ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆರ್ ಅಶ್ವಿನ್ 6 ವಿಕೆಟ್ ಪಡೆದರು. ಇದೀಗ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 522 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು. ಇದೀಗ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 750 ವಿಕೆಟ್ ಪಡೆದಿದ್ದಾರೆ. ಆರ್ ಅಶ್ವಿನ್ ಭಾರತದ ಪರ ಅತಿ ಹೆಚ್ಚು 5 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ ಭಾರತ ಪರ 37 ಬಾರಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಈ ಟೆಸ್ಟ್ ಕ್ರಿಕೆಟ್‌ನಲ್ಲಿ ಅಶ್ವಿನ್ ಐದು ವಿಕೆಟ್ ಪಡೆಯುತ್ತಿದ್ದಂತೆ ಟೆಸ್ಟ್ ಕ್ರಿಕೆಟ್‌ನಲ್ಲಿ 37ನೇ ಬಾರಿ ಸಾಧನೆ ಮಾಡಿದರು. ಅಲ್ಲದೆ ಗ್ರೇಟ್ ಲೆಗ್ ಸ್ಪಿನ್ ಬೌಲರ್ ಶೇನ್ ವಾರ್ನ್ ಅವರ ದಾಖಲೆ ಸರಿಗಟ್ಟಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications