ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs SA: ಟಿ20 ಮುಖಾಮುಖಿಯಲ್ಲಿ ಹೆಚ್ಚು ವಿಕೆಟ್ ಪಡೆದ 5 ಬೌಲರ್‌ಗಳ ಪಟ್ಟಿ; ಯಾವ ತಂಡ ಟಾಪ್?

Ravichandran Ashwin holds the most wicket taker record in India vs South Africa T20I history

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ಟೀಮ್ ಇಂಡಿಯಾ ಅಂತರರಾಷ್ಟ್ರೀಯ ಕ್ರಿಕೆಟ್‌ನತ್ತ ಮುಖಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಬ್ಲೂ ಬಾಯ್ಸ್ ತಮ್ಮ ಅಂತರರಾಷ್ಟ್ರೀಯ ಹಣಾಹಣಿಯನ್ನು ಮತ್ತೆ ಮುಂದುವರೆಸಲಿದ್ದಾರೆ. ಹೌದು, ದಕ್ಷಿಣ ಆಫ್ರಿಕಾ ಭಾರತ ಪ್ರವಾಸವನ್ನು ಕೈಗೊಂಡಿದ್ದು, ಐದು ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಮೊದಲಿಗೆ ಇತ್ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯ ಜೂನ್ 9ರ ಗುರುವಾರದಂದು ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ಸಂಜೆ 7 ಗಂಟೆಗೆ ಆರಂಭಗೊಳ್ಳಲಿದೆ.

ಇನ್ನು ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 17 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳು ನಡೆದಿದ್ದು, ಟೀಮ್ ಇಂಡಿಯಾ 9 ಪಂದ್ಯಗಳಲ್ಲಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 6 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 2 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿವೆ. ಹೀಗೆ ಇತ್ತಂಡಗಳ ಟಿ ಟ್ವೆಂಟಿ ಮುಖಾಮುಖಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಸ್ಪಷ್ಟ ಮೇಲುಗೈ ಸಾಧಿಸಿದ್ದು, ಹಿಡಿತವನ್ನು ಹೊಂದಿದೆ.

ಈತನನ್ನು ಎದುರಿಸುವುದೇ ಕಷ್ಟ; ಸರಣಿಗೂ ಮುನ್ನವೇ ಭಾರತದ ಆಟಗಾರನ ಬಗ್ಗೆ ಭಯಪಟ್ಟ ದ.ಆಫ್ರಿಕಾ ನಾಯಕ!ಈತನನ್ನು ಎದುರಿಸುವುದೇ ಕಷ್ಟ; ಸರಣಿಗೂ ಮುನ್ನವೇ ಭಾರತದ ಆಟಗಾರನ ಬಗ್ಗೆ ಭಯಪಟ್ಟ ದ.ಆಫ್ರಿಕಾ ನಾಯಕ!

ಇನ್ನು ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಜಸ್ಪ್ರಿತ್ ಬುಮ್ರಾ ವಿಶ್ರಾಂತಿ ಕಾರಣದಿಂದಾಗಿ ಈ ಸರಣಿಯಿಂದ ದೂರ ಉಳಿದಿದ್ದು, ಕೆಎಲ್ ರಾಹುಲ್ ನಾಯಕತ್ವದಡಿಯಲ್ಲಿ ತಂಡ ಕಣಕ್ಕಿಳಿಯಲಿದೆ. ಈ ಎರಡೂ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡದ ಬೌಲರ್ ಹೆಚ್ಚು ವಿಕೆಟ್ ಪಡೆದಿದ್ದಾರೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

IND vs SA ಟಿ20 ಮುಖಾಮುಖಿ: ಹೆಚ್ಚು ಪಂದ್ಯ ಗೆದ್ದಿರುವ ತಂಡ ಯಾವುದು? ಭಾರತಕ್ಕಿದೇ ತಲೆನೋವು!IND vs SA ಟಿ20 ಮುಖಾಮುಖಿ: ಹೆಚ್ಚು ಪಂದ್ಯ ಗೆದ್ದಿರುವ ತಂಡ ಯಾವುದು? ಭಾರತಕ್ಕಿದೇ ತಲೆನೋವು!

ಅತಿಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳು

ಅತಿಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳು

1. ರವಿಚಂದ್ರನ್ ಅಶ್ವಿನ್; ಇತ್ತಂಡಗಳ ನಡುವಿನ ಒಟ್ಟಾರೆ ಟಿ ಟ್ವೆಂಟಿ ಮುಖಾಮುಖಿ ಪಂದ್ಯಗಳಲ್ಲಿ ಒಟ್ಟು 10 ವಿಕೆಟ್ ಪಡೆದಿರುವ ರವಿಚಂದ್ರನ್ ಅಶ್ವಿನ್ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ

2. 8 ವಿಕೆಟ್ ಪಡೆದಿರುವ ಭುವನೇಶ್ವರ್ ಕುಮಾರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3. 7 ವಿಕೆಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಜೂನಿಯರ್ ದಾಲಾ ಈ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದಾರೆ.

4. 7 ವಿಕೆಟ್ ಪಡೆದಿರುವ ಕ್ರಿಸ್ ಮೊರಿಸ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

5. 6 ವಿಕೆಟ್ ಪಡೆದಿರುವ ಭಾರತದ ಜಹೀರ್ ಖಾನ್ ಐದನೇ ಸ್ಥಾನದಲ್ಲಿದ್ದಾರೆ.

ಟೀಮ್ ಇಂಡಿಯಾ

ಟೀಮ್ ಇಂಡಿಯಾ

ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ಉಪನಾಯಕ ), ವೆಂಕಟೇಶ್ ಅಯ್ಯರ್, ವೈ ಚಾಹಲ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್ , ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

KL Rahul ಬದಲಿಗೆ ನಾಯಕತ್ವ ವಹಿಸಿಕೊಂಡ Rishab Pant ಹೇಳಿದ್ದೇನು? | *Cricket | OneIndia Kannada
ದ.ಆಫ್ರಿಕಾ ತಂಡ

ದ.ಆಫ್ರಿಕಾ ತಂಡ

ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ತಬ್ರೈಜ್ ಶಂಬ್ಡರ್, ಟ್ರೈಸ್ಸೆ ಸ್ಟಬ್ಡರ್, ರಸ್ಸಿ ವಾನ್‌ಡರ್ ಡಸೆನ್ , ಮಾರ್ಕೊ ಜಾನ್ಸೆನ್.

Story first published: Thursday, June 9, 2022, 18:35 [IST]
Other articles published on Jun 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X