ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡು ಪಂದ್ಯಗಳು ನಡೆದಿದ್ದು, ಮೂರನೇ ಪಂದ್ಯವು ಗುರುವಾರ, ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. ಮೂರನೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತನ್ನ ಹೆಸರಿನಲ್ಲಿ ಎರಡು ವಿಶೇಷ ದಾಖಲೆ ಬರೆಯುವ ಅವಕಾಶವನ್ನು ಹೊಂದಿದ್ದಾರೆ.
ಭಾರತದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮೂರನೇ ಟೆಸ್ಟ್‌ನಲ್ಲಿ 1 ವಿಕೆಟ್ ಪಡೆಯುವ ಮೂಲಕ 500 ಟೆಸ್ಟ್ ವಿಕೆಟ್‌ಗಳನ್ನು ಪೂರೈಸಲಿದ್ದಾರೆ. ಇದಲ್ಲದೇ ತವರು ನೆಲದಲ್ಲಿ ತಮ್ಮ ಹೆಸರಿನಲ್ಲಿ ಮತ್ತೊಂದು ವಿಶೇಷ ದಾಖಲೆ ಮಾಡಲಿದ್ದಾರೆ.

ಅಶ್ವಿನ್ ತವರು ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆಯಬಹುದು. ಪ್ರಸ್ತುತ ಈ ಪಟ್ಟಿಯಲ್ಲಿ ಮಾಜಿ ಅನುಭವಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ನೆಲದಲ್ಲಿ ಆಡಿದ ಟೆಸ್ಟ್‌ನಲ್ಲಿ ಕುಂಬ್ಳೆ ಒಟ್ಟು 350 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಶ್ವಿನ್ 346 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ರಾಜ್‌ಕೋಟ್‌ನಲ್ಲಿ ನಡೆಯಲಿರುವ ಟೆಸ್ಟ್‌ನಲ್ಲಿ ಅಶ್ವಿನ್ 5 ವಿಕೆಟ್ ಪಡೆದರೆ, ತವರಿನ ಟೆಸ್ಟ್‌ನಲ್ಲಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಆಗಲಿದ್ದಾರೆ.

ವಿಶಾಖಪಟ್ಟಣಂನಲ್ಲಿ ನಡೆದ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್‌ನಲ್ಲಿ, ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದರು. ಆದರೆ, ಭಾರತದ ಮಾಜಿ ಅನುಭವಿ ಸ್ಪಿನ್ನರ್ ಭಾಗವತ್ ಚಂದ್ರಶೇಖರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್‌ನಲ್ಲಿ ಚಂದ್ರಶೇಖರ್ ತಮ್ಮ ವೃತ್ತಿಜೀವನದಲ್ಲಿ 95 ವಿಕೆಟ್‌ಗಳನ್ನು ಪಡೆದಿದ್ದರು. ಇದೀಗ ಅಶ್ವಿನ್ 97 ವಿಕೆಟ್ ಪಡೆದಿದ್ದಾರೆ.
ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ ಆಡಿದ ಎರಡು ಟೆಸ್ಟ್‌ಗಳಲ್ಲಿ ಒಟ್ಟು 9 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಅಶ್ವಿನ್ 6 ವಿಕೆಟ್ ಪಡೆದಿದ್ದರು. ಇದಾದ ಬಳಿಕ ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ನರ್ 3 ವಿಕೆಟ್ ಪಡೆದರು.
ಟೆಸ್ಟ್ ಕ್ರಿಕೆಟ್‌ನಲ್ಲಿ ಅಶ್ವಿನ್ ಅವರ ಸಾಧನೆಯನ್ನು ನೋಡುವುದಾದರೆ, ಕೇರಂ ಸ್ಪೇಷಲಿಸ್ಟ್ ಅಶ್ವಿನ್ ಆಡಿದ 97 ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದಾರೆ. ಭಾರತದಲ್ಲಿ ಅಬ್ಬರಿಸುವ ಅಶ್ವಿನ್ ಎದುರಾಳಿಗೆ ಸ್ವಿಂಹ ಸ್ವಪ್ನರು. ತವರಿನಲ್ಲಿ ಆಡಿದ 57 ಪಂದ್ಯಗಳಲ್ಲಿ ಅಶ್ವಿನ್ 346 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರ ಸರಾಸರಿಯ 21.27 ಆಗಿದೆ.