Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿಸಲು ಅಶ್ವಿನ್ ಕೇವಲ ಒಂದು ಹೆಜ್ಜೆ ದೂರ

ಬಹುನಿರೀಕ್ಷಿತ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯದ ಟೆಸ್ಟ್ ಸರಣಿಯೂ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ಸೃಷ್ಟಿಸಲಿದ್ದಾರೆ.

ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಕೇವಲ ಸೃಷ್ಟಿಸಲು ಒಂದು ಹೆಜ್ಜೆ ದೂರದಲ್ಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯೂಟಿಸಿ) ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಆಗಿರುವ ಅಶ್ವಿನ್, ಈ ಟೂರ್ನಿಯಲ್ಲಿ ನಂಬರ್-1 ಆಗುವ ಹೊಸ್ತಿಲಲ್ಲಿ ನಿಂತಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಲು ಅವರಿಗೆ ಉತ್ತಮ ಅವಕಾಶವಿದೆ.

Ravichandran Ashwin just one step away from creating history in World Test Championship

ಅಶ್ವಿನ್‌ಗೆ ನಂಬರ್-1 ಆಗುವ ಅವಕಾಶ

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಹೆಚ್ಚು ಬಾರಿ ಈ ಸಾಧನೆ ಮಾಡಿದ ಬೌಲರ್ ಆಗಲಿದ್ದಾರೆ. ಪ್ರಸ್ತುತ ಅವರು ಆಸ್ಟ್ರೇಲಿಯಾದ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಅವರೊಂದಿಗೆ ಸರಿಸಮಾನರಾಗಿದ್ದಾರೆ. ಈ ಇಬ್ಬರೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 10 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಈಗ ಅಶ್ವಿನ್ ನಂಬರ್-1 ಆಗಲು ಒಮ್ಮೆ ಮಾತ್ರ 5 ವಿಕೆಟ್ ಕಬಳಿಸಬೇಕು. ಡಬ್ಲ್ಯೂಟಿಸಿ ಇತಿಹಾಸದಲ್ಲಿಅತಿ ಹೆಚ್ಚು ವಿಕೆಟ್ ಉರುಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಅಶ್ವಿನ್ (174 ವಿಕೆಟ್‌) ಮೂರನೇ ಸ್ಥಾನದಲ್ಲಿದ್ದಾರೆ.

150 ವಿಕೆಟ್ ಪಡೆದ ಮೊದಲ ಬೌಲರ್

ಡಬ್ಲ್ಯೂಟಿಸಿ ಇತಿಹಾಸದಲ್ಲಿ 150 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಅಶ್ವಿನ್. ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್ 150ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳಾಗಿದ್ದಾರೆ. ಆದರೆ, ಅಶ್ವಿನ್ ಅತ್ಯಂತ ವೇಗವಾಗಿ 150 ವಿಕೆಟ್‌ಗಳ ಗಡಿ ಮುಟ್ಟಿದ ಬೌಲರ್ ಎಂಬ ದಾಖಲೆಯನ್ನು ಹೊಂದಿದ್ದಾರೆ. ಅವರು ಕೇವಲ 58 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಈ ದಾಖಲೆಗಳನ್ನು ಹೊರೆತುಪಡಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಶ್ವಿನ್ 200 ವಿಕೆಟ್ ಪಡೆದ ಸಾಧನೆ ಮಾಡುವ ಗುರಿ ಇಟ್ಟುಕೊಂಡಿದ್ದಾರೆ. ಇದುವರೆಗೆ 174 ವಿಕೆಟ್ ಪಡೆದಿರುವ ಅಶ್ವಿನ್ ಇನ್ನೂ 26 ಬ್ಯಾಟರ್‌ಗಳಿಗೆ ಪೆವಿಲಿಯನ್ ತೋರಿಸುವ ನಿರೀಕ್ಷೆಯಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು 200 ವಿಕೆಟ್‌ಗಳ ಸಂಖ್ಯೆಯನ್ನು ಮುಟ್ಟಬಹುದು. ಆದರೆ, ಇದಕ್ಕಾಗಿ ಅವರು ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಬೇಕಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಯಾವುದೇ ಬೌಲರ್‌ಗೆ 200 ವಿಕೆಟ್‌ಗಳ ಗಡಿ ಮುಟ್ಟಲು ಸಾಧ್ಯವಾಗಿಲ್ಲ. ಲಿಯಾನ್ (187) ಮತ್ತು ಕಮ್ಮಿನ್ಸ್ (175) ಕೂಡ ಹಿಂದುಳಿದಿದ್ದಾರೆ. ಒಂದು ವೇಳೆ
ಅಶ್ವಿನ್ 200 ವಿಕೆಟ್‌ಗಳನ್ನು ಪೂರೈಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ. ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 110 ವಿಕೆಟ್ ಪಡೆದು ಬಹಳ ಹಿಂದೆ ಉಳಿದಿದ್ದಾರೆ.

Story first published: Tuesday, September 10, 2024, 18:15 [IST]
Other articles published on Sep 10, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+