Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

R Ashwin: ಇತಿಹಾಸ ಸೃಷ್ಟಿಸಲು ಅಶ್ವಿನ್‌ಗೆ ಬೇಕು 2 ವಿಕೆಟ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಕ್ಟೋಬರ್ 24 ರಿಂದ ಆರಂಭವಾಗಲಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 36 ವರ್ಷಗಳ ಬಳಿಕ ಟೀಮ್ ಇಂಡಿಯಾ ಸೋಲು ಕಂಡಿತ್ತು. ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಕಿವೀಸ್ ತಂಡ ಪುಣೆಯಲ್ಲಿಯೇ ಸರಣಿ ಗೆಲ್ಲುವತ್ತ ಕಣ್ಣಿಟ್ಟಿದೆ. ಮತ್ತೊಂದೆಡೆ, ಭಾರತವು ಪುನರಾಗಮನ ಮಾಡಲು ತಂಡದಲ್ಲಿ ಕೆಲವು ಬದಲಾವಣೆ ಮಾಡಲು ಮುಂದಾಗಿದೆ. ಪುಣೆಯಲ್ಲಿ ನಡೆಯುವ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಲು ರೋಹಿತ್ ಶರ್ಮಾ ಪಡೆ ಹೋರಾಡಲಿದೆ.

Ravichandran Ashwin needs 2 wickets to create history in World Test Championship

ಪುಣೆ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಲು ಸಜ್ಜಾಗಿದ್ದಾರೆ. ಅಶ್ವಿನ್ ಭಾರತ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಎರಡನೇ ಬೌಲರ್. ಪುಣೆಯಲ್ಲಿ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ನಲ್ಲಿ ವಿಶಿಷ್ಟ ದಾಖಲೆ ನಿರ್ಮಿಸುವತ್ತ ಅಶ್ವಿನ್ ಹೆಜ್ಜೆ ಇಟ್ಟಿದ್ದಾರೆ. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಅಂದುಕೊಂಡಂತೆ ಅಶ್ವಿನ್ ಅವರಿಗೆ ಯಶಸ್ಸು ಸಿಗಲಿಲ್ಲ. ಇದೀಗ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿರುವ ಪುಣೆ ಮೈದಾನದಲ್ಲಿ ಅಶ್ವಿನ್ ಇತಿಹಾಸ ಸೃಷ್ಟಿಸಲು ರೆಡಿಯಾಗಿದ್ದಾರೆ.

ನಂಬರ್-1 ಬೌಲರ್

ಇತ್ತೀಚೆಗೆ ಮುಕ್ತಾಯವಾದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ 2-0 ಅಂತರದಲ್ಲಿ ಗೆದ್ದಿತ್ತು. ಈ ಸರಣಿಯಲ್ಲಿ ಅಶ್ವಿನ್ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಸಿಕ್ಕಿತ್ತು. ಈಗ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅವರಿಗೆ ಕೇವಲ 2 ವಿಕೆಟ್‌ಗಳ ಅಗತ್ಯವಿದೆ. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ 11 ವಿಕೆಟ್ ಪಡೆದಿದ್ದಲ್ಲದೆ, ಶತಕವನ್ನೂ ಗಳಿಸಿದ್ದರು. ಮತ್ತೊಮ್ಮೆ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ತಮ್ಮ ಸ್ಪಿನ್ ಬೌಲಿಂಗ್‌ ಮ್ಯಾಜಿಕ್ ತೋರಿಸಲು ಹವಣಿಸುತ್ತಿದ್ದಾರೆ.

ಲಿಯಾನ್ ವಿರುದ್ಧ ಹೋರಾಟ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅಶ್ವಿನ್ ಇದುವರೆಗೆ 38 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 186 ವಿಕೆಟ್‌ಗಳನ್ನು ಪಡೆದಿದ್ದಾರೆ. ಮತ್ತೊಂದೆಡೆ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ 43 ಟೆಸ್ಟ್ ಪಂದ್ಯಗಳಲ್ಲಿ 187 ವಿಕೆಟ್‌ಗಳನ್ನು ಹೊಂದಿದ್ದಾರೆ. ಈಗ ಅಶ್ವಿನ್ ಅವರು ಲಿಯಾನ್ ದಾಖಲೆಯನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದು, ಪುಣೆ ಟೆಸ್ಟ್‌ನಲ್ಲಿ ಅಶ್ವಿನ್ ಕೇವಲ 2 ವಿಕೆಟ್ ಪಡೆದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ದಾಖಲೆಯನ್ನು ತಮ್ಮ ಹೆಸರಿನಲ್ಲಿಯೇ ಮಾಡಿಕೊಳ್ಳಲಿದ್ದಾರೆ.

ಡಬ್ಲ್ಯೂಟಿಸಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಟಾಪ್ ಬೌಲರ್

ನಾಥನ್ ಲಿಯಾನ್ (ಆಸ್ಟ್ರೇಲಿಯಾ) - 187 ವಿಕೆಟ್
ರವಿಚಂದ್ರನ್ ಅಶ್ವಿನ್ (ಭಾರತ) - 186 ವಿಕೆಟ್
ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ) - 175 ವಿಕೆಟ್
ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ) - 147 ವಿಕೆಟ್
ಸ್ಟುವರ್ಟ್ ಬ್ರಾಡ್ (ಇಂಗ್ಲೆಂಡ್) - 134 ವಿಕೆಟ್

Story first published: Wednesday, October 23, 2024, 8:14 [IST]
Other articles published on Oct 23, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+