For Quick Alerts
ALLOW NOTIFICATIONS  
For Daily Alerts
 

R Ashwin Retirement: ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ; 14 ವರ್ಷಗಳ ವೃತ್ತಿಜೀವನಕ್ಕೆ ತೆರೆ

ಟೀಮ್ ಇಂಡಿಯಾದ ಅನಭವಿ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸ್ಪಿನ್ ಮಾಂತ್ರಿಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಭಾರತದ ಪರ ಹಲವು ಸ್ಮರಣೀಯ ಇನ್ನಿಂಗ್ಸ್‌ಗಳಲ್ಲಿ ಅಮೋಘ ಬೌಲಿಂಗ್ ಪ್ರದರ್ಶಿಸಿದ ಅಶ್ವಿನ್ ಇನ್ನು ಐಪಿಎಲ್‌ನಲ್ಲಿ ಮಾತ್ರ ಬೌಲಿಂಗ್ ಮಾಡುವುದನ್ನು ಕಾಣಬಹುದು.

ಅಶ್ವಿನ್ ಈ ಮಹತ್ವದ ನಿರ್ಧಾರ ತೆಗೆದುಕೊಂಡಿರುವುದರ ಹಿಂದಿನ ಕಾರಣ ತಿಳಿದುಬಂದಿಲ್ಲ. ಬ್ರಿಸ್ಬೇನ್‌ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಸುದ್ದಿಗೆ ಜೀವ ಬಂದಿದೆ. ಅಶ್ವಿನ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳು ಶಾಕ್ ಆಗಿದ್ದಾರೆ.

Ravichandran Ashwin retires from international cricket

ಬ್ರಿಸ್ಬೇನ್ ಟೆಸ್ಟ್‌ ಪಂದ್ಯ ಕೊನೆಯ ದಿನದಂದು ವಿರಾಟ್ ಕೊಹ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ತಬ್ಬಿಕೊಂಡಿರುವುದು ಕಂಡುಬಂದಿತು. ಇದಾದ ನಂತರ ಇಬ್ಬರಲ್ಲಿ ಒಬ್ಬರು ನಿವೃತ್ತಿಯಾಗಲಿದ್ದಾರೆ ಎಂಬ ಊಹಾಪೋಹ ಹಬ್ಬಿತ್ತು. ಕೊಹ್ಲಿ ಮತ್ತು ಅಶ್ವಿನ್ ಜೊತೆಗಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಷ್ಟರಲ್ಲೇ ಅಶ್ವಿನ್ ತಮ್ಮ 14 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆಯುವ ನಿರ್ಧಾರವನ್ನು ಘೋಷಿಸಿದರು.

ಅಶ್ವಿನ್ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಆಡಿದ್ದರು. ನಂತರ ಅವರನ್ನು ಬ್ರಿಸ್ಪೇನ್ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿತ್ತು. ಟೀಮ್ ಇಂಡಿಯಾ ಪರ ಅಶ್ವಿನ್ ಹಲವು ಅದ್ಭುತ ಟೆಸ್ಟ್ ಸರಣಿಗಳ ಗೆಲುವಿನ ಪ್ರಮುಖ ಪಾತ್ರವಹಿಸಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಿ ನೆಲಗಳಲ್ಲಿಯೂ ಅಶ್ವಿನ್ ತಮ್ಮ ಸ್ಪಿನ್ ಬೌಲಿಂಗ್ ಜಾದೂ ತೋರಿಸಿದ್ದಾರೆ.

ಅಶ್ವಿನ್ ಟೆಸ್ಟ್ ದಾಖಲೆ

ಅಶ್ವಿನ್ ಭಾರತ ಪರ 2011 ರಿಂದ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಏಕಾಂಗಿಯಾಗಿ ಹಲವು ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 537 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದು, 37 ಬಾರಿ ಇನ್ನಿಂಗ್ಸ್‌ನಲ್ಲಿ 5 ಅಥವಾ ಹೆಚ್ಚಿನ ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಅಶ್ವಿನ್ ಟೆಸ್ಟ್‌ನಲ್ಲಿ 3503 ರನ್‌ಗಳನ್ನು ಕಲೆ ಹಾಕಿದ್ದಾರೆ. ಇದರಲ್ಲಿ ಅವರು 6 ಶತಕ ಮತ್ತು 14 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಏಕದಿನ-ಟಿ20ಯಲ್ಲೂ ಮಿಂಚು

ಅಶ್ವಿನ್‌ ಟೆಸ್ಟ್ ಮಾತ್ರವಲ್ಲದೆ, ಏಕದಿನ ಮತ್ತು ಟಿ20 ಮಾದರಿಯಲ್ಲಿಯೂ ಮಿಂಚಿದ್ದಾರೆ. ಈವರೆಗೆ ಅಶ್ವಿನ್ 116 ಏಕದಿನ ಪಂದ್ಯಗಳಲ್ಲಿ 707 ರನ್ ಗಳಿಸಿದ್ದು, ತಮ್ಮ ಹೆಸರಿನಲ್ಲಿ 156 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಅಶ್ವಿನ್ ಭಾರತ ಪರ 65 ಟಿ20 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು 72 ವಿಕೆಟ್ ಕಬಳಿಸಿದ್ದಾರೆ. 2011ರ ಏಕದಿನ ವಿಶ್ವಕಪ್ ಹಾಗೂ 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡದಲ್ಲಿ ಅಶ್ವಿನ್ ಇದ್ದರು.

Story first published: Wednesday, December 18, 2024, 11:49 [IST]
Other articles published on Dec 18, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+