ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ರೋಹಿತ್, ಅಶ್ವಿನ್ ಇಲ್ಲ

ಪರ್ತ್, ಡಿಸೆಂಬರ್ 13: ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಅಡಿಲೇಡ್ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಭಾರತ 1-0ರಿಂದ ಮುನ್ನಡೆ ಪಡೆದುಕೊಂಡಿದೆ. ಪರ್ತ್ ನಲ್ಲಿ ನಡೆಯಲಿರುವ ಪಂದ್ಯಕ್ಕೆ ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ.
ಗಾಯಾಳುವಾಗಿರುವ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ರೋಹಿತ್ ಶರ್ಮ ಅವರನ್ನು ತಂಡಕ್ಕೆ ಆಯ್ಕೆ ಮಾಡಿಲ್ಲ. ಅಶ್ವಿನ್ ಅವರು ಕಿಬ್ಬೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ರೋಹಿತ್ ಅವರಿಗೆ ಬೆನ್ನುನೋವು ಕಾಡುತ್ತಿದೆ. ಇವರಿಬ್ಬರ ಬದಲಿಗೆ ಆಲ್ ರೌಂಡರ್ ಹನುಮ ವಿಹಾರಿ, ವೇಗಿ ಉಮೇಶ್ ಯಾದವ್ ತಂಡವನ್ನು ಸೇರಿದ್ದಾರೆ. ರವೀಂದ್ರ ಜಡೇಜ ಅವರು ಸ್ಪಿನ್ ವಿಭಾಗವನ್ನು ಮುನ್ನಡೆಸಬೇಕಿದೆ.
ಟೀಂ ಇಂಡಿಯಾ : ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ(ಉಪ ನಾಯಕ), ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಇಶಾಂತ್ ಶರ್ಮ, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications