Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ravichandran Ashwin: ಜಹೀರ್ ಖಾನ್ ದಾಖಲೆ ಮುರಿಯುವ ಕಡೆಗೆ ಟೆಸ್ಟ್ ಕ್ರಿಕೆಟ್‌ನ ರಾಜ

ಆಗಸ್ಟ್ 16 ಶುಕ್ರವಾರ, ರವಿಚಂದ್ರನ್ ಅಶ್ವಿನ್ ವಿಶ್ವದ ಅತ್ಯಂತ ಯಶಸ್ವಿ ಸ್ಪಿನ್ನರ್‌ಗಳಲ್ಲಿ ಒಬ್ಬರು. ಅವರ ಆಫ್-ಸ್ಪಿನ್ ಬೌಲಿಂಗ್ ಶೈಲಿ ಯಾವಾಗಲೂ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸಿದೆ. ಅಶ್ವಿನ್ ಬೌಲಿಂಗ್ ಜೊತೆಗೆ ಉತ್ತಮ ಬ್ಯಾಟರ್ ಕೂಡ ಆಗಿದ್ದು, ಭಾರತ ತಂಡವನ್ನು ಹಲವು ಬಾರಿ ಸಂಕಷ್ಟದ ಪರಿಸ್ಥಿತಿಯಿಂದ ಪಾರು ಮಾಡಿದ್ದಾರೆ.

ಇದೀಗ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಲಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Ravichandran Ashwin to break Zaheer Khan record in Test cricket

ಅಶ್ವಿನ್ ಯಾವಾಗಲೂ ದೇಶೀಯ ಪಿಚ್‌ಗಳಲ್ಲಿ ಮೇಲುಗೈ ಸಾಧಿಸಿದ್ದಾರೆ. ಹೀಗಾಗಿ ಬಾಂಗ್ಲಾದೇಶದ ಬ್ಯಾಟರ್‌ಗಳಿಗೆ ಅಶ್ವಿನ್ ಅವರ ಸ್ಪಿನ್ ಎದುರಿಸುವುದು ದೊಡ್ಡ ಸವಾಲಾಗಬಹುದು. ಇನ್ನೊಂದೆಡೆ ನಾಯಕ ರೋಹಿತ್ ಶರ್ಮಾ ಕೂಡ ಅಶ್ವಿನ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಹಲವು ದಾಖಲೆಗನ್ನು ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ. ಈ ದಾಖಲೆಗಳ ಬಗ್ಗೆ ಮಾಹಿತಿ ಇಲ್ಲಿದೆ.

ಜಹೀರ್ ಖಾನ್ ರೆಕಾರ್ಡ್ ಬ್ರೇಕ್?

ಭಾರತ ತಂಡದ ಮಾಜಿ ದಿಗ್ಗಜ ಬೌಲರ್ ಜಹೀರ್ ಖಾನ್ ಎಲ್ಲಾ ಮೂರು ಮಾದರಿ ಕ್ರಿಕೆಟ್‌ನಲ್ಲಿ ಸಾಕಷ್ಟ ದಾಖಲೆಯನ್ನು ಮಾಡಿದ್ದಾರೆ. ಈಗ ಅವರ ಈ ಒಂದು ದಾಖಲೆಯನ್ನು ಮುರಿಯುವ ಕಡೆಗೆ ಅಶ್ವಿನ್ ಸಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಜಹೀರ್ ಖಾನ್ 7 ಟೆಸ್ಟ್ ಪಂದ್ಯಗಳಲ್ಲಿ 31 ವಿಕೆಟ್ ಉರುಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ ಆಗಿದ್ದಾರೆ. ಅಶ್ವಿನ್ 6 ಟೆಸ್ಟ್ ಪಂದ್ಯಗಳಲ್ಲಿ 23 ವಿಕೆಟ್ ಪಡೆದಿದ್ದು, ಸದ್ಯ ಬಾಂಗ್ಲಾದೇಶದ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ ಎನಿಸಿಕೊಳ್ಳುವ ಸನಿಹದಲ್ಲಿದ್ದಾರೆ. ಆದರೆ ಇಶಾಂತ್ ಶರ್ಮಾ 7 ಪಂದ್ಯಗಳಲ್ಲಿ 25 ವಿಕೆಟ್ ಕಬಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಲಿಯಾನ್-ಕಮಿನ್ಸ್ ಹಿಂದಿಕ್ಕಲಿರುವ ಅಶ್ವಿನ್

2019ರಲ್ಲಿ ಆರಂಭವಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯೂಟಿಸಿ) ಅಶ್ವಿನ್ ಇದುವರೆಗೆ 35 ಪಂದ್ಯಗಳನ್ನು ಆಡಿದ್ದು, 174 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ನಾಥನ್ ಲಿಯಾನ್ 43 ಪಂದ್ಯಗಳಲ್ಲಿ 187 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದು, ಕಾಂಗೂರು ಪಡೆಯ ನಾಯಕ ಪ್ಯಾಟ್ ಕಮಿನ್ಸ್ 42 ಪಂದ್ಯಗಳಲ್ಲಿ 175 ವಿಕೆಟ್ ಕಬಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಅಶ್ವಿನ್ 2 ವಿಕೆಟ್ ಪಡೆದರೆ ಕಮ್ಮಿನ್ಸ್ ಗಿಂತ ಮುಂದೆ ಹೋಗಲಿದ್ದಾರೆ. ಲಿಯಾನ್ ಅವರನ್ನು ಹಿಂದಿಕ್ಕಲು ಅವರಿಗೆ 14 ವಿಕೆಟ್‌ಗಳ ಅವಶ್ಯಕವಿದೆ.

ಅಪಾಯದಲ್ಲಿ ವಾಲ್ಷ್‌ ದಾಖಲೆ

ಇದುವರೆಗೆ ಭಾರತ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿರುವ ಅಶ್ವಿನ್ 516 ವಿಕೆಟ್‌ಗಳೊಂದಿಗೆ 3309 ರನ್ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅವರು 9ನೇ ಸ್ಥಾನದಲ್ಲಿದ್ದಾರೆ. ಇದೀಗ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಂಟನೇ ಸ್ಥಾನಕ್ಕೇರುವ ಅವಕಾಶವಿದೆ.

ಬಾಂಗ್ಲಾದೇಶ ವಿರುದ್ಧ ಅವರು 4 ವಿಕೆಟ್ ಪಡೆದರೆ, ವೆಸ್ಟ್ ಇಂಡೀಸ್ ಮಾಜಿ ಬೌಲರ್ ಕರ್ಟ್ನಿ ವಾಲ್ಷ್ ಅವರನ್ನು ದಾಖಲೆಯನ್ನು ಮುರಿಯಲಿದ್ದಾರೆ. ವಾಲ್ಷ್ 132 ಪಂದ್ಯಗಳಲ್ಲಿ 519 ವಿಕೆಟ್ ಪಡೆದಿದ್ದಾರೆ.

Story first published: Friday, August 16, 2024, 15:05 [IST]
Other articles published on Aug 16, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+