ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದ. ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಹಿನ್ನಡೆ; ಈ ಇಬ್ಬರು ಪ್ರಮುಖ ಆಟಗಾರರೇ ಅನುಮಾನ!

Ravindra Jadeja and Shubman Gill likely to miss South Africa Tour

ಇತ್ತೀಚೆಗಷ್ಟೇ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಜಯ ಸಾಧಿಸುವ ಮೂಲಕ ಎರಡೂ ಸರಣಿಗಳನ್ನು ಸಹ ವಶಕ್ಕೆ ಪಡೆದುಕೊಂಡಿತು.

ಕೇನ್ ವಿಲಿಯಮ್ಸನ್ ಅಭಿಮಾನಿಗಳಿಗೆ ಕಹಿಸುದ್ದಿ; ಕ್ರಿಕೆಟ್‍ನಿಂದ 2 ತಿಂಗಳು ದೂರ ಉಳಿಯಲಿದ್ದಾರೆ ಕೇನ್!ಕೇನ್ ವಿಲಿಯಮ್ಸನ್ ಅಭಿಮಾನಿಗಳಿಗೆ ಕಹಿಸುದ್ದಿ; ಕ್ರಿಕೆಟ್‍ನಿಂದ 2 ತಿಂಗಳು ದೂರ ಉಳಿಯಲಿದ್ದಾರೆ ಕೇನ್!

ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ಮೊದಲಿಗೆ ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು. ಹಾಗೂ ನಂತರ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದ ನ್ಯೂಜಿಲೆಂಡ್, ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಟೆಸ್ಟ್ ಸರಣಿಯನ್ನು ಕೂಡ ಕೈಚೆಲ್ಲಿತು. ಹೀಗೆ ನ್ಯೂಜಿಲೆಂಡ್ ವಿರುದ್ಧ ಎರಡೂ ಸರಣಿಗಳನ್ನು ಗೆದ್ದು ಯಶಸ್ಸಿನ ಅಲೆಯಲ್ಲಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿದ್ದು, 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳನ್ನು ಆಡಲಿದೆ.

ಭಾರತ ವಿರುದ್ಧದ ಟೆಸ್ಟ್ ಸರಣಿಗೆ 21 ಆಟಗಾರರ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ; ಯಾರಿಗೆಲ್ಲಾ ಸ್ಥಾನ?ಭಾರತ ವಿರುದ್ಧದ ಟೆಸ್ಟ್ ಸರಣಿಗೆ 21 ಆಟಗಾರರ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ; ಯಾರಿಗೆಲ್ಲಾ ಸ್ಥಾನ?

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗಲಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಅತ್ತ ಇತ್ತಂಡಗಳ ನಡುವಿನ ಟೆಸ್ಟ್ ಸರಣಿಗೆ ಈಗಾಗಲೇ ದಕ್ಷಿಣ ಆಫ್ರಿಕಾ 21 ಆಟಗಾರರ ತಂಡವನ್ನು ಘೋಷಣೆ ಮಾಡಿದ್ದು, ಬಿಸಿಸಿಐ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವನ್ನು ಪ್ರಕಟಿಸಬೇಕಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ತರಬೇತುದಾರ ರಾಹುಲ್ ದ್ರಾವಿಡ್ ಈಗಾಗಲೇ ಆಯ್ಕೆಗಾರರ ಜತೆ ಸಭೆಯನ್ನು ನಡೆಸಿದ್ದು ಇಂದು ತಂಡವನ್ನು ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆಯೇ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಈ ಕೆಳಕಂಡ ಪ್ರಮುಖ ಆಟಗಾರರು ಹೊರಗುಳಿಯಲಿದ್ದಾರೆ ಎಂಬ ಸುದ್ದಿಯೂ ಕೂಡ ಹೊರಬಿದ್ದಿದೆ.

ರವೀಂದ್ರ ಜಡೇಜಾ ಮತ್ತು ಶುಬ್ಮನ್ ಗಿಲ್ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದು ಅನುಮಾನ

ರವೀಂದ್ರ ಜಡೇಜಾ ಮತ್ತು ಶುಬ್ಮನ್ ಗಿಲ್ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದು ಅನುಮಾನ

ಟೀಮ್ ಇಂಡಿಯಾದ ಪ್ರಮುಖ ಆಲ್-ರೌಂಡರ್ ರವೀಂದ್ರ ಜಡೇಜಾ ಮತ್ತು ಆರಂಭಿಕ ಆಟಗಾರ ಶುಬ್ ಮನ್ ಗಿಲ್ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುವುದು ಅನುಮಾನ ಎನ್ನಲಾಗುತ್ತಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿರುವ ಪ್ರಕಾರ ರವೀಂದ್ರ ಜಡೇಜಾ ಮತ್ತು ಶುಬ್ ಮನ್ ಗಿಲ್ ಇಬ್ಬರೂ ಸಹ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಾಗುವುದಿಲ್ಲ ಎನ್ನಲಾಗಿದೆ.

ಜಡೇಜಾ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿಯೂ ಹೊರಗುಳಿದಿದ್ದರು

ಜಡೇಜಾ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿಯೂ ಹೊರಗುಳಿದಿದ್ದರು

ಬಲ ಮುಂದೋಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ತಪ್ಪಿಸಿಕೊಳ್ಳುವುದು ಮಾತ್ರವಲ್ಲದೇ ಇತ್ತೀಚೆಗಷ್ಟೇ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿಯೂ ಕೂಡ ಇದೇ ಗಾಯದ ಸಮಸ್ಯೆಯಿಂದ ಹೊರ ಬಿದ್ದಿದ್ದರು. ಹೌದು, ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ರವೀಂದ್ರ ಜಡೇಜಾ ನಂತರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.

ಟೀಮ್ ಇಂಡಿಯಾ ಆಟಗಾರರಿಗೆ ಕಾಡುತ್ತಿದೆ ಗಾಯದ ಸಮಸ್ಯೆ

ಟೀಮ್ ಇಂಡಿಯಾ ಆಟಗಾರರಿಗೆ ಕಾಡುತ್ತಿದೆ ಗಾಯದ ಸಮಸ್ಯೆ

ರವೀಂದ್ರ ಜಡೇಜಾ, ಶುಬ್ ಮನ್ ಗಿಲ್ ಮಾತ್ರವಲ್ಲದೇ ಅಕ್ಷರ್ ಪಟೇಲ್ ಹಾಗೂ ಇಶಾಂತ್ ಶರ್ಮಾ ಕೂಡ ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರವೀಂದ್ರ ಜಡೇಜಾ ಹಾಗೂ ಶುಬ್ ಮನ್ ಗಿಲ್ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುವುದರಲ್ಲಿ ಅನುಮಾನ ಮೂಡಿಸಿದ್ದರೆ, ಅಕ್ಷರ್ ಪಟೇಲ್ ಅವರನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕಳುಹಿಸಬೇಕಾ ಅಥವಾ ಇಲ್ಲವಾ ಎಂಬ ವಿಷಯವನ್ನು ಆಯ್ಕೆಗಾರರು ಅಕ್ಷರ್ ಪಟೇಲ್ ಅವರ ವೈದ್ಯಕೀಯ ಚಿಕಿತ್ಸೆಯ ನಂತರ ತೀರ್ಮಾನಿಸಲಿದ್ದಾರೆ.

South Africa ವಿರುದ್ಧದ ಸರಣಿಗೆ ಈ ಆಟಗಾರರು ಅನುಮಾನ | Oneindia Kannada

{document1}

Story first published: Wednesday, December 8, 2021, 13:19 [IST]
Other articles published on Dec 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X