ಭಾರತ vs ಇಂಗ್ಲೆಂಡ್: ಟೆಸ್ಟ್ ಕ್ರಿಕೆಟ್‌ನಲ್ಲಿ ರವಿಂದ್ರ ಜಡೇಜಾ ದಾಖಲೆ

ನ್ಯಾಟಿಂಗ್‌ಹ್ಯಾಮ್: ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಇಂಗ್ಲೆಂಡ್‌ನ ನ್ಯಾಟಿಂಗ್‌ಹ್ಯಾಮ್ ನಲ್ಲಿರುವ ಟ್ರೆಂಟ್‌ಬ್ರಿಡ್ಜ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 2000 ರನ್, 220 ವಿಕೆಟ್ ಗಡಿ ದಾಟಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಭಾರತದ ಮೊದಲನೇ ಇನ್ನಿಂಗ್ಸ್‌ನಲ್ಲಿ ಜಡ್ಡು ಈ ಸಾಧನೆ ಮಾಡಿದ್ದಾರೆ.
7ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ರವೀಂದ್ರ ಜಡೇಜಾ 25+ ರನ್ ಗಳಿಸುವುದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 2000+ ರನ್ ಸಾಧನೆ ಮಾಡಿದ್ದಾರೆ. 53ನೇ ಟೆಸ್ಟ್ ಪಂದ್ಯದಲ್ಲಿ ಜಡೇಜಾ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮೊದಲನೇ ಇನ್ನಿಂಗ್ಸ್‌ಗೂ ಮೊದಲೇ ಜಡೇಜಾ 220+ ವಿಕೆಟ್ ದಾಖಲೆ ಮಾಡಿದ್ದರು.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಕಡಿಮೆ ರನ್
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ಆರಂಭಿಕ ಇನ್ನಿಂಗ್ಸ್‌ನಲ್ಲಿ ಕಡಿಮೆ ರನ್ ಕಲೆಹಾಕಿ ಹಿನ್ನಡೆ ಅನುಭವಿಸಿದೆ. ರೋರಿ ಬರ್ನ್ಸ್ 0, ಡೊಮಿನಿಕ್ ಸಿಬ್ಲಿ 18, ಝ್ಯಾಕ್ ಕ್ರಾಲೆ 27, ಜೋ ರೂಟ್ 64, ಜಾನಿ ಬೈರ್‌ಸ್ಟೊ 29, ಡೇನಿಯಲ್ ಲಾರೆನ್ಸ್ 0, ಜೋಸ್ ಬಟ್ಲರ್ 0, ಸ್ಯಾಮ್ ಕರ್ರನ್ 27, ಒಲ್ಲಿ ರಾಬಿನ್ಸನ್ 0, ಸ್ಟುವರ್ಟ್ ಬ್ರಾಡ್ 4, ಜೇಮ್ಸ್ ಆ್ಯಡರ್ಸನ್ 1ರನ್‌ನೊಂದಿಗೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 65.4 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 183 ರನ್ ಗಳಿಸಿತ್ತು. ಆಂಗ್ಲ ಇನ್ನಿಂಗ್ಸ್ ವೇಳೆ ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ 4, ಮೊಹಮ್ಮದ್ ಶಮಿ 3, ಶಾರ್ದೂಲ್ ಠಾಕೂರ್ 2, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದರು.

ಕೈಕೊಟ್ಟ ಭಾರತೀಯ ಬ್ಯಾಟ್ಸ್‌ಮನ್‌ಗಳು
ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ವಿಫಲರಾದಾಗ ಭಾರತೀಯ ಬ್ಯಾಟ್ಸ್‌ಮನ್‌ಗಳಾದರೂ ಉತ್ತಮ ಪ್ರದರ್ಶನ ನೀಡಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಮುನ್ನಡೆ ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಭಾರತೀಯ ಬ್ಯಾಟ್ಸ್‌ಮನ್‌ಗಳೂ ಯಾರೂ ಮಿಂಚಲಿಲ್ಲ. ಕ್ರೀಸಿಗಂಟಿನಿಂತು ಗಮನ ಸೆಳೆದವರು ಒಬ್ಬರೇ, ಅದು ಕೆಎಲ್ ರಾಹುಲ್. ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ 75+ ರನ್ ಕೊಡುಗೆ ನೀಡಿದ್ದಾರೆ. ಇನ್ನು ರೋಹಿತ್ ಶರ್ಮಾ 36, ಚೇತೇಶ್ವರ ಪೂಜಾರ 4, ವಿರಾಟ್ ಕೊಹ್ಲಿ 0, ಅಜಿಂಕ್ಯ ರಹಾನೆ 5, ರಿಷಭ್ ಪಂತ್ 25, ರವೀಂದ್ರ ಜಡೇಜಾ 27+ ರನ್ ಬಾರಿಸಿದ್ದರು. 66 ಓವರ್ ಮುಕ್ತಾಯದ ವೇಳೆಗೆ ಭಾರತ 5 ವಿಕೆಟ್ ಕಳೆದು 191 ರನ್ ಗಳಿಸಿ 8 ರನ್ ಮುನ್ನಡೆಯಲ್ಲಿತ್ತು.

ಇತ್ತಂಡಗಳ ಪ್ಲೇಯಿಂಗ್ XI
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾವ್ಲಿ, ಜೋ ರೂಟ್ (ಸಿ), ಜಾನಿ ಬೈರ್‌ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್ (wk), ಸ್ಯಾಮ್ ಕುರ್ರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.
ಬೆಂಚ್: ಮಾರ್ಕ್ ವುಡ್, ಕ್ರೇಗ್ ಓವರ್ಟನ್, ಜ್ಯಾಕ್ ಲೀಚ್, ಡೊಮಿನಿಕ್ ಬೆಸ್, ಒಲ್ಲಿ ಪೋಪ್, ಹಸೀಬ್ ಹಮೀದ್.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬೂಮ್ರಾ.
ಬೆಂಚ್: ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಅಕ್ಸರ್ ಪಟೇಲ್, ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಹನುಮ ವಿಹಾರಿ, ಅಭಿಮನ್ಯು ಈಶ್ವರನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications