Champions Trophy: ಭಾರತ-ಬಾಂಗ್ಲಾದೇಶ ಪಂದ್ಯದಲ್ಲಿ ರವೀಂದ್ರ ಜಡೇಜಾ ಇತಿಹಾಸ
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ ನಡುವೆ ದುಬೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ನಾಯಕ ನಜ್ಮುಲ್ ಹಸನ್ ಶಾಂತೋ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದರು. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಅದ್ಭುತ ಬೌಲಿಂಗ್ ದಾಳಿ ನಡೆಸುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡಿದ್ದಾರೆ.
ರವೀಂದ್ರ ಜಡೇಜಾ ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ಮೈದಾನಕ್ಕೆ ಇಳಿದ ತಕ್ಷಣ ಭಾರತ ಪರ 200 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ ಆಟಗಾರರ ಕ್ಲಬ್‌ಗೆ ಸೇರಿದ್ದಾರೆ. ಭಾರತ ಪರ 200 ಏಕದಿನ ಪಂದ್ಯಗಳನ್ನು ಆಡಿದ 15ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರಿಗಿಂತ ಮೊದಲು, ಭಾರತಕ್ಕಾಗಿ 14 ಆಟಗಾರರು ಈ ಸಾಧನೆ ಮಾಡಿದ್ದಾರೆ.

ಭಾರತ ತಂಡಕ್ಕೆ ರವೀಂದ್ರ ಜಡೇಜಾ ಮೂರು ಮಾದರಿ ಕ್ರಿಕೆಟ್‌ನಲ್ಲಿಯೂ ಪ್ರಮುಖ ಆಟಗಾರನಾಗಿದ್ದಾರೆ. 2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಜಡೇಜಾ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜಡೇಜಾ ಭಾರತ ಪರ 200 ಏಕದಿನ ಪಂದ್ಯಗಳಲ್ಲಿ 4.86 ಎಕಾನಮಿಯಲ್ಲಿ 226 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರು ತಮ್ಮ ಏಕದಿನ ವೃತ್ತಿಜೀವನದಲ್ಲಿ ಎರಡು ಬಾರಿ ಐದು ವಿಕೆಟ್ ಗೊಂಚಲು ಪಡೆದಿದ್ದಾರೆ.
ರವೀಂದ್ರ ಜಡೇಜಾ ಬೌಲಿಂಗ್ ಮಾತ್ರವಲ್ಲದೆ, ಬ್ಯಾಟಿಂಗ್‌ನಲ್ಲಿಯೂ ಕಮಾಲ್ ಮಾಡಿದ್ದಾರೆ. ಅವರು ಬ್ಯಾಟಿಂಗ್‌ನಲ್ಲಿ 13 ಅರ್ಧಶತಕಗಳ ಮೂಲಕ 2779 ರನ್‌ಗಳನ್ನು ಗಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಜಡೇಜಾಗೆ 2 ಓವರ್‌ಗಳನ್ನು ಮಾಡಿದ್ದು, ಒಂದು ವಿಕೆಟ್ ಪಡೆದಿಲ್ಲ.
ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ಕೀಪರ್) , ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಬಾಂಗ್ಲಾದೇಶ: ತಂಜಿದ್ ಹಸನ್ , ಸೌಮ್ಯ ಸರ್ಕಾರ್ , ನಜ್ಮುಲ್ ಹೊಸೈನ್ ಶಾಂತೋ (ನಾಯಕ) , ತೌಹಿದ್ ಹೃದಯೋಯ್ , ಮುಶ್ಫಿಕರ್ ರಹೀಮ್ (ವಿಕೆಟ್‌ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಜಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications