ICC rankings: ಜೇಸನ್ ಹೋಲ್ಡರ್ ಕೆಳಗಿಳಿಸಿ ಅಗ್ರಸ್ಥಾನಕ್ಕೇರಿದ ರವಿಂದ್ರ ಜಡೇಜಾ

ಸೌಥಾಂಪ್ಟನ್: ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ಸಾಧನೆ ತೋರಿದ್ದಾರೆ. ಟೆಸ್ಟ್ ಆಲ್ ರೌಂಡರ್ ರ್‍ಯಾಂಕಿಂಗ್‌ಗಳಲ್ಲಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಜೇಸನ್ ಹೋಲ್ಡರ್ ಕೆಳಗಿಳಿಸಿರುವ ಜಡೇಜಾ ನಂ. 1 ಸ್ಥಾನಕ್ಕೇರಿದಿದ್ದಾರೆ.
ಜೂನ್ 23ರ ಬುಧವಾರ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಆಲ್ ರೌಂಡರ್‌ಗಳಲ್ಲಿ ರವೀಂದ್ರ ಜಡೇಜಾ ಅಗ್ರ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. 386 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ಜಡೇಜಾ ಮೊದಲ ಸ್ಥಾನದಲ್ಲಿದ್ದರೆ, ವಿಂಡೀಸ್‌ನ ಜೇಸನ್ ಹೋಲ್ಡರ್ (384), ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ (377) ಅನಂತರದ ಸ್ಥಾನಗಳಲ್ಲಿದ್ದಾರೆ.
4ನೇ ಸ್ಥಾನದಲ್ಲಿ ಭಾರತ ಆರ್ ಅಶ್ವಿನ್, 5ನೇ ಸ್ಥಾನದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, 6ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್, 7ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್, 8ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್, 9ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಕಾಲಿನ್ ಡಿ ಗ್ರ್ಯಾಂಡ್ ಹೋಮ್, 10ನೇ ಸ್ಥಾನದಲ್ಲಿ ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್ ಇದ್ದಾರೆ.
ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್, ಆಸ್ಟ್ರೇಲಿಯಾದ ಮಾರ್ನಸ್ ಲ್ಯಬುಶೇನ್ ಆರಂಭಿಕ ಮೂರು ಸ್ಥಾನಗಳಲ್ಲಿದ್ದಾರೆ. ಬೌಲಿಂಗ್ ರ್‍ಯಾಂಕಿಗ್‌ನಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್, ಭಾರತದ ಆರ್ ಅಶ್ವಿನ್, ನ್ಯೂಜಿಲೆಂಡ್‌ನ ಟಿಮ್ ಸೌಥೀ ಆರಂಭಿಕ 3 ಸ್ಥಾನಗಳಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications