ಐಸಿಸಿ ಟೆಸ್ಟ್ ಶ್ರೇಯಾಂಕ: ಮೊದಲೆರಡು ಸ್ಥಾನದಲ್ಲಿ ಜಡೇಜ, ಅಶ್ವಿನ್
ನವದೆಹಲಿ, ಜುಲೈ 10 : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಸೋಮವಾರ ಟೆಸ್ಟ್ ಕ್ರಿಕೆಟ್ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೌಲಿಂಗ್ ಶ್ರೇಯಾಂಕದಲ್ಲಿ ಭಾರತೀಯ ಸ್ಪಿನರ್ ಗಳಾದ ರವೀಂದ್ರ ಜಡೇಜ ಹಾಗೂ ಆರ್. ಅಶ್ವಿನ್ ಮೊದಲೆರಡು ಸ್ಥಾನದಲ್ಲಿದ್ದಾರೆ. 898 ಅಂಕದೊಂದಿಗೆ ಜಡೇಜ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಇನ್ನು 865 ಅಂಕ ಹೊಂದಿರುವ ಆರ್.ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.

ಈ ಹಿಂದೆ ಕ್ರಮವಾಗಿ ಈ ಇಬ್ಬರು ಸ್ಪಿನ್ನರ್ ಗಳು ಕ್ರಮವಾಗೊ ಅಗ್ರಸ್ಥಾನವನ್ನು ಹಂಚಿಕೊಂಡಿದ್ದರು. ಬಳಿಕ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದರು. ಇದೀಗ ಮತ್ತೆ ಮೊದಲೆರಡು ಸ್ಥಾನಕ್ಕೇರಿದ್ದಾರೆ.
ಅಷ್ಟೇ ಅಲ್ಲದೆ ಆಲ್ ರೌಂಡರ್ ಶ್ರೇಯಾಂಕ ಪಟ್ಟಿಯಲ್ಲಿ ಜಡೇಜ ಹಾಗೂ ಅಶ್ವಿನ್ ಎರಡು ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ಬ್ಯಾಟ್ಸ್ ಮನ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಚೇತೇಶ್ವರ್ ಪೂಜಾರ ಹಾಗೂ ನಾಯಕ ವಿರಾಟ್ ಕೊಹ್ಲಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ 9ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಆಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications