IND vs ENG: ಎನ್‌ಸಿಎ ತಲುಪಿದ ರವೀಂದ್ರ ಜಡೇಜಾ: ಇಂಗ್ಲೆಂಡ್ ವಿರುದ್ಧದ ಪೂರ್ತಿ ಟೆಸ್ಟ್ ಸರಣಿಯಿಂದ ಔಟ್?
ಟೀಮ್ ಇಂಡಿಯಾಕ್ಕೆ ಎರಡನೇ ಟೆಸ್ಟ್ ಆರಂಭಕ್ಕೂ ಮುನ್ನವೇ ಪೆಟ್ಟು ಬಿದ್ದಿದೆ. ಈಗ ಸಂಪೂರ್ಣ ಸರಣಿಗೆ ಟೀಮ್ ಇಂಡಿಯಾಗೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಗಾಯಕ್ಕೆ ತುತ್ತಾಗಿದ್ದು, ಭಾರತ ತಂಡಕ್ಕೆ ನುಂಗಲಾಗದ ಬಿಸಿ ತುಪ್ಪವಾಗಿದೆ.
ಹೈದರಾಬಾದ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ರವೀಂದ್ರ ಜಡೇಜಾ ಗಾಯಗೊಂಡಿದ್ದರು. ಗಾಯಗೊಂಡರುವ ಜಡೇಜಾ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಭಾರತದ ಆಲ್‌ರೌಂಡರ್ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಹೇಳಿತ್ತು. ಗಾಯದ ನಂತರ, ಜಡೇಜಾ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ತಲುಪಿದರು. ನಂತರ ಅವರು ಸಂಪೂರ್ಣ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

ಒಂದು ವೇಳೆ ಜಡೇಜಾ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಸರಣಿಯಿಂದ ಹೊರನಡೆದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ. ವಿಶೇಷವಾಗಿ ಭಾರತೀಯ ಪಿಚ್‌ಗಳಲ್ಲಿ, ಜಡೇಜಾ ತಂಡದ ಪ್ರಮುಖ ಅಸ್ತ್ರ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಜಡೇಜಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದರು. ಈ ಮೂಲಕ ತಂಡದಲ್ಲಿ ಅವರ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಸಾರಿ ಹೇಳಿದ್ದರು. ಬೌಲಿಂಗ್ ಮಾಡುವಾಗ, ಅವರು ಒಟ್ಟು 5 ವಿಕೆಟ್ ಪಡೆದರೆ, ನಂತರ ಬ್ಯಾಟಿಂಗ್ ಮಾಡುವಾಗ, ಅವರು ಮೊದಲ ಇನ್ನಿಂಗ್ಸ್‌ನಲ್ಲಿ 87 ರನ್ ಗಳಿಸಿದರು.
ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು, ಅದರಲ್ಲಿ ಒಂದು ಪಂದ್ಯ ಈಗಾಗಲೇ ನಡೆದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಇಂಗ್ಲೆಂಡ್ ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಜಡೇಜಾ ಅನುಪಸ್ಥಿತಿಯಿಂದ ಟೀಂ ಇಂಡಿಯಾ ಚಿಂತೆಯನ್ನು ದ್ವಿಗುಣ ಗೊಳಿಸಿದೆ. ಆದರೆ, ಈಗ ಜಡೇಜಾ ಎರಡನೇ ಟೆಸ್ಟ್‌ನಿಂದ ಹೊರಗುಳಿದಿರುವ ಬಗ್ಗೆ ಮಾತ್ರ ಅಪ್‌ಡೇಟ್ ಬಂದಿದೆ. ಮೂರನೇ ಟೆಸ್ಟ್‌ನಿಂದ ಅವರು ಟೀಂ ಇಂಡಿಯಾದ ಭಾಗವಾಗಿ ಉಳಿಯುತ್ತಾರೋ ಇಲ್ಲವೋ ಎಂಬುದು ಈಗ ಕುತೂಹಲಕಾರಿಯಾಗಿದೆ.

ಇಬ್ಬರು ಯುವಕರಿಗೆ ಅವಕಾಶ
ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಬದಲಿಗೆ ಬಿಸಿಸಿಐ ವಾಷಿಂಗ್ಟನ್ ಸುಂದರ್, ಸರ್ಫರಾಜ್ ಖಾನ್ ಮತ್ತು ಸೌರಭ್ ಕುಮಾರ್ ಅವರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡಿದೆ. ಈ ಪೈಕಿ ಸರ್ಫರಾಜ್ ಖಾನ್ ಮತ್ತು ಸೌರಭ್ ಕುಮಾರ್ ಇನ್ನೂ ಒಂದೇ ಒಂದು ಟೆಸ್ಟ್ ಆಡಿಲ್ಲ. ಹೌದು, ಸುಂದರ್ ಗೆ ಅನುಭವ ಇರುವುದು ನಿಜ. ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಇನ್ನೂ ಟೆಸ್ಟ್‌ಗೆ ಪದಾರ್ಪಣೆ ಮಾಡಿಲ್ಲ. ರಜತ್ ಪಾಟಿದಾರ್ ಹೈದರಾಬಾದ್‌ನ ತಂಡದೊಂದಿಗೆ ಸಂಬಂಧ ಹೊಂದಿದ್ದಾರೆ. ಆರ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಅವರೊಂದಿಗೆ ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರಿಗೆ ಸ್ಥಾನ ನೀಡುವುದು ಒಂದು ಯೋಜನೆಯಾಗಿದೆ. ಕೆಎಲ್ ರಾಹುಲ್ ಬದಲಿಗೆ ರಜತ್ ಪಾಟಿದಾರ್ ಮೈದನಾಕ್ಕೆ ಎಂಟ್ರಿ ನೀಡಬಹುದು. ಹೀಗಾಗಿ ಉಳಿದ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಅಗತ್ಯವಿಲ್ಲ.
ಹೈದರಾಬಾದ್‌ನಲ್ಲಿ ಸೋಲು
ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 28 ರನ್‌ಗಳಿಂದ ಸೋಲನುಭವಿಸಿತ್ತು. ಹೈದರಾಬಾದ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾಕ್ಕೆ ಇಂಗ್ಲೆಂಡ್ ಸ್ಪಿನ್ನರ್‌ಗಳು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದಾರೆ. ಪಂದ್ಯದಲ್ಲಿ 231 ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 202 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಅವಧಿಯಲ್ಲಿ ಇಂಗ್ಲೆಂಡ್ ಸ್ಪಿನ್ನರ್ ಟಾಮ್ ಹಾರ್ಟ್ಲಿ 7 ವಿಕೆಟ್ ಪಡೆದು ಜಯದಲ್ಲಿ ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications