Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS: ಚಾಂಪಿಯನ್ಸ್ ಟ್ರೋಫಿಯಲ್ಲಿ ದಾಖಲೆ ಸೃಷ್ಟಿಸಿದ ರವೀಂದ್ರ ಜಡೇಜಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ ಇತಿಹಾಸ ಸೃಷ್ಟಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಜಡೇಜಾ ಅದ್ಭುತ ಬೌಲಿಂಗ್ ಮಾಡುವ ಮೂಲಕ ದೊಡ್ಡ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ 2 ವಿಕೆಟ್ ಪಡೆದು ಮಿಂಚಿದ್ದಾರೆ. ಜಡೇಜಾ 23ನೇ ಓವರ್‌ನ ಮೂರನೇ ಎಸೆತದಲ್ಲಿ 29 ರನ್‌ ಗಳಿಸಿ ಮಾರ್ನಸ್ ಲ್ಯಾಬುಶೇನ್ ಅವರನ್ನು ಎಲ್‌ಬಿಡಬ್ಲ್ಯೂ ಮಾಡುವ ಮೂಲಕ ಔಟ್ ಮಾಡಿದರು. ಇದಾದ ನಂತರ, ಜಡೇಜಾ 27ನೇ ಓವರ್‌ನ ಕೊನೆಯ ಎಸೆತದಲ್ಲಿ ಜೋಶ್ ಇಂಗ್ಲಿಸ್ (11) ವಿಕೆಟ್ ಉರುಳಿಸಿದರು. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಜಡೇಜಾ ಹೊಸ ದಾಖಲೆ ಸೃಷ್ಟಿಸಿದ್ದಾರೆ.

Ravindra Jadeja sets record for most wickets in Champions Trophy

ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ 18 ವಿಕೆಟ್‌ಗಳನ್ನು ಪಡೆದಿದ್ದರು. ಈಗ ಎರಡು ವಿಕೆಟ್ ಪಡೆಯುವ ಮೂಲಕ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದ ಜಂಟಿ 7ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಜಡೇಜಾ ದಕ್ಷಿಣ ಆಫ್ರಿಕಾದ ಮಾಜಿ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ರವೀಂದ್ರ ಜಡೇಜಾ 14 ಪಂದ್ಯಗಳಲ್ಲಿ 4.82 ರ ಎಕಾನಮಿಯೊಂದಿಗೆ ಒಟ್ಟು 20 ವಿಕೆಟ್‌ಗಳನ್ನು ಪಡೆದಿದ್ದಾರೆ. ಜಾಕ್ವೆಸ್ ಕಾಲಿಸ್ 17 ಪಂದ್ಯಗಳಲ್ಲಿ 20 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಟೀಮ್ ಇಂಡಿಯಾ ಬೌಲರ್‌ಗಳು ಆಸ್ಟ್ರೇಲಿಯಾಕ್ಕೆ ಆಘಾತ ನೀಡಿದರು. ಆಸ್ಟ್ರೇಲಿಯಾ ತಂಡ 49.3 ಓವರ್‌ಗಳಲ್ಲಿ 10 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿ ಮಿಂಚಿದರೆ, ವರುಣ್ ಚಕ್ರವರ್ತಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಸರ್ ಪಟೇಲ್ ತಲಾ ಒಂದು ವಿಕೆಟ್ ಉರುಳಿಸಿದರು.

Story first published: Tuesday, March 4, 2025, 20:57 [IST]
Other articles published on Mar 4, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+