Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಚೇತರಿಕೆಯ ಹಾದಿಯಲ್ಲಿ ಜಡೇಜಾ: ತರಬೇತಿಯ ವಿಡಿಯೋ ಹಂಚಿಕೊಂಡ ಆಲ್‌ರೌಂಡರ್

Ravindra Jadeja Shares Video Ahead Of Test Series and says Recovery Going Well

ಟೀಮ್ ಇಂಡಿಯಾದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದು ಗಾಯದಿಂದ ಉತ್ತಮವಾಗಿ ಚೇತರಿಕೆ ಹೊಂದಿತ್ತಿರುವುದಾಗಿ ಬರೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಜಡೇಜಾ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅದಾದ ಬಳಿಕ ಜಡೇಜಾ ಅವರ ತಲೆಗೆ ಚೆಂಡು ಬಡಿದಿತ್ತು. ಈ ಹಿನ್ನೆಲೆಯಲ್ಲಿ ಟಿ20 ಸರಣಿಯಿಂದ ಜಡೇಜಾ ಹೊರಗೂಳಿದಿದ್ದರು. ಟೆಸ್ಟ್ ಸರಣಿಯಲ್ಲಿ ಜಡೇಜಾ ಲಭ್ಯತೆಯ ಬಗ್ಗೆ ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಜಡೇಜಾ ಅಂತಿಮ ಓವರ್‌ನಲ್ಲಿ ಜಡೇಜಾ ತಲೆಗೆ ಆಸಿಸ್ ವೇಗಿಯ ಚೆಂಡು ಬಡಿದಿತ್ತು. ಆಗ ಜಡೇಜಾ ಬ್ಯಾಟಿಂಗ್ ಮುಂದುವರಿಸಿದ್ದರು. ಆಗ ಬ್ಯಾಟಿಂಗ್ ಮುಂದುವರಿಸಿದ್ದರು ಜಡೇಜಾ. ಆದರೆ ಭಾರತದ ಇನ್ನಿಂಗ್ಸ್ ಮುಕ್ತಾಯದ ಬಳಿಕ ಜಡೇಜಾ ಕಣಕ್ಕಿಳಿಯದೆ ಕನ್‌ಕುಶನ್ ಸಬ್‌ಸ್ಟಿಟ್ಯೂಟ್ ಆಗಿ ಯುಜುವೇಂದ್ರ ಚಾಹಲ್ ಕಣಕ್ಕಿಳಿದಿದ್ದರು. ಅದಾದ ಬಳಿಕ ಚುಟುಕು ಸರಣಿಯಿಂದ ಹೊರಬಿದ್ದ ಜಡೇಜಾ ಬದಲಿಗೆ ಶಾರ್ದೂಲ್ ಟಾಕೂರ್ ಅವಕಾಶ ಪಡೆದರು.

ಇದೀಗ ರವೀಂದ್ರ ಜಡೇಜಾ ಟೆಸ್ಟ್ ಸರಣಿಗೆ ಪೂರ್ವಭಾವಿಯಾಗಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಉತ್ತಮ ರೀತಿಯಲ್ಲಿ ಚೇತರಿಕೆ ಕಾಣುತ್ತಿದ್ದೇನೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯಕ್ಕೆ ಮುನ್ನ ಜಡೇಜಾ ಸಿದ್ದತೆಗಳನ್ನು ನಡೆಸುತ್ತಿದ್ದಾರೆ.

ಮೊದಲ ಟೆಸ್ಟ್ ಪಂದ್ಯ ಅಡಿಲೇಡ್‌ನಲ್ಲಿ ಡಿಸೆಂಬರ್ 17ರಿಂದ ನಡೆಯಲಿದೆ. ಅಹರ್ನಿಶಿಯಾಗಿ ನಡೆಯಲಿರುವ ಈ ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Story first published: Monday, December 14, 2020, 13:56 [IST]
Other articles published on Dec 14, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+