ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೆ ಫಾರ್ಮ್ ಇಲ್ಲದ ಆಟಗಾರರು ಲಯ ಕಂಡು ಕೊಳ್ಳಲು ದೇಶೀಯ ಟೂರ್ನಿಗಳಲ್ಲಿ ಆಡುತ್ತಿದ್ದಾರೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ಸ್ ರನ್ ಬರವನ್ನು ಮುಂದುವರೆಸಿದರೆ, ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಒಬ್ಬರು ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ತಮ್ಮನ್ನು ಪರಿಗಣಿಸುವಂತೆ ಟೀಮ್ ಮ್ಯಾನೇಜ್ಮೆಂಟ್‌ಗೆ ಸೂಚಿಸಿದ್ದಾರೆ.
ಗುರುವಾರದಿಂದ ದೇಶದಲ್ಲಿ ರಣಜಿ ಟ್ರೋಫಿಯ ಪಂದ್ಯಗಳು ಆರಂಭವಾಗಿವೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ರಿಷಭ್ ಪಂತ್, ಶುಭಮನ್ ಗಿಲ್ ತಮ್ಮ ತಮ್ಮ ರಾಜ್ಯಗಳ ಪರ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಆದರೆ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು, ಎದುರಾಳಿ ತಂಡಕ್ಕೆ ಪಂಚ್ ನೀಡಿದ್ದಾರೆ. ಈ ಮೂಲಕ ಪಾಕಿಸ್ತಾನ ಆಶ್ರಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ತಮಗೂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಸಿ ಗುಂಪಿನ ಪಂದ್ಯದಲ್ಲಿ ದೆಹಲಿ ಹಾಗೂ ಸೌರಾಷ್ಟ್ರ ತಂಡಗಳು ಕಾದಾಟ ನಡೆಸಿದವು. ಈ ವೇಳೆ ದೆಹಲಿ ತಂಡದ ಬ್ಯಾಟರ್‌ಗಳಿಗೆ ಕಾಡಿದ್ದು ಆಲ್‌ರೌಂಡರ್ ರವೀಂದ್ರ ಜಡೇಜಾ. ಟೀಮ್ ಇಂಡಿಯಾದ ಪರ ಆಡುವ ಜಡೇಜಾ, ರಣಜಿ ಟ್ರೋಫಿಯಲ್ಲೂ ಅಮೋಘ ಪ್ರದರ್ಶನ ನೀಡಿದರು. ಇವರು ದೆಹಲಿ ತಂಡದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಬರ ಅನುಭವಿಸಿದರು. ದೆಹಲಿ ತಂಡದ ಸನತ್ ಸಾಂಗ್ವಾನ್, ಯಶ್ ಧುಲ್, ಆಯುಷ್ ಬಡೋನಿ, ಹರ್ಷ್ ತ್ಯಾಗಿ, ನವದೀಪ್ ಸೈನಿ ಬ್ಯಾಟರ್‌ಗಳನ್ನು ಜಡ್ಡು ಪೆವಿಲಿಯನ್‌ಗೆ ಅಟ್ಟಿದರು.
ಆಸ್ಟ್ರೇಲಿಯಾ ಪ್ರವಾಸದಲ್ಲಿ ರವೀಂದ್ರ ಜಡೇಜಾ ಅವರಿಗೆ ಆಡುವ ಅವಕಾಶವು ಹೆಚ್ಚಾಗಿ ಸಿಕ್ಕಿರಲಿಲ್ಲ. ಆದರೆ ಈಗ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಇವರಿಗೆ ಸ್ಥಾನ ಪಡೆದಿದ್ದಾರೆ. ಆದರೆ ಇವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗುತ್ತದೋ ಇಲ್ಲವೋ ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೆ ರಣಜಿ ಟ್ರೋಫಿಯಲ್ಲಿ ನೀಡಿರುವ ಪ್ರದರ್ಶನ ಅವರನ್ನು ತಂಡದಲ್ಲಿ ಸ್ಥಾನ ನೀಡುವಂತೆ ಪ್ರೇರೆಪಿಸಿತು. ಇವರು ರಣಜಿ ಟ್ರೋಫಿಯಲ್ಲಿ ದೆಹಲಿ ವಿರುದ್ಧ 17.4 ಓವರ್‌ಗಳಲ್ಲಿ 66 ರನ್ ನೀಡಿ 5 ವಿಕೆಟ್ ಕಬಳಿಸಿದರು.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಸ್ಪಿನ್ ಬೌಲರ್ ರವೀಂದ್ರ ಜಡೇಜಾ ಈಗಾಗಲೇ ಭಾರತದ ಪರ 197 ಪಂದ್ಯಗಳನ್ನು ಆಡಿದ್ದು, 220 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಏಳು ಬಾರಿ 4 ವಿಕೆಟ್, 2 ಬಾರಿ ಐದು ವಿಕೆಟ್ ಪಡೆದು ಬೀಗಿದ್ದಾರೆ. ಇನ್ನು ಟೆಸ್ಟ್‌ನಲ್ಲೂ ಇವರು ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು 80 ಟೆಸ್ಟ್ ಪಂದ್ಯಗಳನ್ನು ಆಡಿದ್ದು 323 ವಿಕೆಟ್ ಕಬಳಿಸಿದ್ದಾರೆ. ಇವರು ಬ್ಯಾಟಿಂಗ್‌ನಲ್ಲೂ ತಂಡಕ್ಕೆ ನೆರವಾಗಬಲ್ಲ ಆಟಗಾರ. ಜಡ್ಡು 2756 ರನ್ ಸಿಡಿಸಿದ್ದಾರೆ. ಇದರಲ್ಲಿ 13 ಅರ್ಧಶತಕಗಳು ಸೇರಿವೆ.