ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಎಂಎಸ್ ಧೋನಿ ಹಿಂದಿಕ್ಕಿ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ

Ravindra Jadeja surpasses MS Dhoni, registers unique batting record to his name

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 161 ರನ್‌ಗಳ ಸವಾಲಿನ ಮೊತ್ತವನ್ನು ಪೆರಿಸುವಲ್ಲಿ ಯಶಸ್ವಿಯಾಗಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಮೊದಲ ಟಿ20 ಪಂದ್ಯದಲ್ಲಿ ಸಂಪೂರ್ಣವಾಗಿ ವಿಫಲರಾದರು. ಆರಂಬಿಕ ಆಟಗಾರ ಕೆಎಲ್ ರಾಹುಲ್ ಅರ್ಧ ಶತಕವನ್ನು ಸಿಡಿಸಿ ಸ್ವಲ್ಪ ಚೇತರಿಕೆಯನ್ನು ನೀಡುವಲ್ಲಿ ಯಶಸ್ವಿಯಾದರು.

ಇನ್ನಿಂಗ್ಸ್ನ ಅಂತ್ಯದಲ್ಲಿ ರವೀಂದ್ರ ಜಡೇಜಾ ಮಿಂಚುಹರಿಸುವಲ್ಲಿ ಯಶಸ್ವಿಯಾದರು. ಅಂತಿಮ ಏಕದಿನ ಪಂದ್ಯದಲ್ಲಿ ನೀಡಿದ ಶ್ರೇಷ್ಠ ಪ್ರದರ್ಶನವನ್ನು ಟಿ20ಯಲ್ಲೂ ಜಡೇಜಾ ಮುಂದುವರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಭಾರತ 161 ರನ್ ಗಳಿಸಲು ಕಾರಣರಾದರು.

ಭಾರತ vs ಆಸ್ಟ್ರೇಲಿಯಾ ಟ20ಐ: ಹೆಡ್‌ ಟು ಹೆಡ್ ದಾಖಲೆ ಹಾಗೂ ಪ್ರಮುಖ ಅಂಕಿಅಂಶಗಳುಭಾರತ vs ಆಸ್ಟ್ರೇಲಿಯಾ ಟ20ಐ: ಹೆಡ್‌ ಟು ಹೆಡ್ ದಾಖಲೆ ಹಾಗೂ ಪ್ರಮುಖ ಅಂಕಿಅಂಶಗಳು

23 ಎಸೆತಗಳನ್ನು ಎದುರಿಸಿದ ಜಡೇಜಾ 44 ರನ್ ಗಳಿಸಿತಂಡಕ್ಕೆ ಆಸರೆಯಾದರು. ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡಿತ್ತು. ಈ ಪ್ರದರ್ಶನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸವಾಲಿನ ಮೊತ್ತ ಪೇರಿಸಲು ಕಾರಣವಾಯಿತು.

ಈ ಭರ್ಜರಿ ಪ್ರದರ್ಶನದಿಂದಾಗಿ ಜಡೇಜಾ ಮಾಜಿ ನಾಯಕ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. 7 ಅಥವಾ ಅದಕ್ಕೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅತಿ ಹೆಚ್ಚಿನ ರನ್ ದಾಖಲಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಎಂಎಸ್ ಧೋನಿ 2012ರಲ್ಲಿ ಇಂಗ್ಲೆಂಡ್ ವಿರುದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ 18 ಎಸೆತಗಳಿಂದ 38 ರನ್ ಗಳಿಸಿದ್ದು ದಾಖಲೆಯಾಗಿತ್ತು.

Story first published: Friday, December 4, 2020, 16:29 [IST]
Other articles published on Dec 4, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X