Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬಾಂಗ್ಲಾದೇಶ ಪ್ರವಾಸಕ್ಕೂ ರವೀಂದ್ರ ಜಡೇಜಾ ಭಾಗಿಯಾಗುವುದು ಅನುಮಾನ: ವರದಿ

Ravindra jadeja

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಮುಗಿದ ಬಳಿಕ ಟೀಂ ಇಂಡಿಯಾ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸದಲ್ಲೂ ಆಲ್‌ರೌಂಡರ್ ರವೀಂದ್ರ ಜಡೇಜಾ ಭಾಗಿಯಾಗುವುದು ಅನುಮಾನ ಎನ್ನಲಾಗಿದೆ. ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಸರಣಿಗಾಗಿ ಬಾಂಗ್ಲಾಕ್ಕೆ ಹಾರಲಿದೆ.

ಏಷ್ಯಾಕಪ್‌ನಲ್ಲಿ ಸ್ವತಃ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾದ ಜಡೇಜಾ, ವಿಶ್ವಕಪ್‌ನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡರು. ಆದ್ರೆ ಇದೀಗ ಜಡ್ಡು ಇನ್ನೂ ಚೇತರಿಸಿಕೊಳ್ಳದ ಕಾರಣದಿಂದಾಗಿ ಡಿಸೆಂಬರ್‌ನಲ್ಲಿ ಭಾರತ ಕೈಗೊಳ್ಳಲಿರುವ ಬಾಂಗ್ಲಾ ಪ್ರವಾಸದಲ್ಲಿ ಭಾಗಿಯಾಗುವುದು ಅನುಮಾನವಾಗಿದೆ.

ಡಿಸೆಂಬರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮೂರು ಏಕದಿನ ಪಂದ್ಯಗಳು ಮತ್ತು ಎರಡು ಟೆಸ್ಟ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಜಡೇಜಾ ಏಕದಿನ ಮತ್ತು ಟೆಸ್ಟ್ ಸರಣಿಗೆ ಆಯ್ಕೆ ಆಗಬಹುದು ಎಂದು ಅಂದಾಜಿಸಲಾಗಿತ್ತು.

ವರದಿ ಪ್ರಕಾರ ರವೀಂದ್ರ ಜಡೇಜಾ ಚೇತರಿಸಿಕೊಳ್ಳುವ ಪ್ರಕ್ರಿಯೆಯು ಮುಕ್ತಾಯಗೊಂಡಿಲ್ಲ. ಹೀಗಾಗಿ ಆತನು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳುವುದಿಲ್ಲ. ಮುಂದಿನ ತಿಂಗಳಲ್ಲಿ 34ನೇ ವರ್ಷಕ್ಕೆ ಕಾಲಿಡಲಿರುವ ಆಲ್‌ರೌಂಡರ್ ಏಷ್ಯಾಕಪ್ 2022ರಲ್ಲಿ ಆಶ್ಚರ್ಯಕರ ರೀತಿಯಲ್ಲಿ ಕೆಟ್ಟ ಇಂಜ್ಯುರಿಗೆ ತುತ್ತಾದರು. ಜಡೇಜಾ ಕೊನೆಯದಾಗಿ ಆಗಸ್ಟ್‌ 31ರಂದು ಹಾಂಕಾಂಗ್ ವಿರುದ್ಧ ತನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನಾಡಿದರು.

''ಮಿಸ್ಟರ್ ರವೀಂದ್ರ ಜಡೇಜಾ ಅಲಭ್ಯತೆಯು ಅವರ ಫಿಟ್ನೆಸ್ ಮೇಲೆ ಅವಲಂಬಿತಗೊಂಡಿರುತ್ತದೆ'' ಎಂದು ಬಿಸಿಸಿಐ ಅಕ್ಟೋಬರ್ 31ರಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು.

ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ವಿಶ್ರಾಂತಿ ಪಡೆದಿರುವ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಇದಕ್ಕೂ ಮುನ್ನ ಈಗಾಗಲೇ 1-0 ಅಂತರದಲ್ಲಿ ಟಿ20 ಸರಣಿ ಗೆದ್ದಿರುವ ಭಾರತ, ಶಿಖರ್ ಧವನ್ ನಾಯಕತ್ವದಲ್ಲಿ ಏಕದಿನ ಸರಣಿಯಲ್ಲಿ ಮುನ್ನಡೆಯಲಿದೆ.

Story first published: Tuesday, November 22, 2022, 23:35 [IST]
Other articles published on Nov 22, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+