RCB vs GT IPL 2025: ಗುಜರಾತ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಮಾಡುವುದು ಯಾರು? ಇಲ್ಲಿದೆ RCB ಪ್ಲೇಯಿಂಗ್ ಇಲೆವೆನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಸಾಲಿನಲ್ಲಿ ಭರ್ಜರಿ ಫಾರ್ಮ್‌ನಲ್ಲಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದೆ. 18ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಆರ್‌ಸಿಬಿ ತವರಿನಲ್ಲಿ ಬುಧವಾರ ಪಂದ್ಯವನ್ನು ಆಡಲಿದೆ. ತವರಿನ ಅಭಿಮಾನಿಗಳಿಗೆ ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನ ಗೀಫ್ಟ್ ನೀಡಲು ಸಜ್ಜಾಗಿದೆ. ಹಾಗಿದ್ದಾರೆ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಆರ್‌ಸಿಬಿ ಈ ಬಾರಿ ಅಭಿಮಾನಿಗಳು ಹುಚ್ಚೆದ್ದು ಕುಣೆಯುವಂತಹ ಪ್ರದರ್ಶನ ನೀಡಿದೆ. ಈ ವೇಳೆ ತಂಡದ ಸಂಘಟಿತ ಆಟ ಅಭಿಮಾನಿಗಳ ಮನ ಗೆದ್ದಿದೆ. ಕೆಕೆಆರ್ ವಿರುದ್ಧ ಚೇಸ್ ಮಾಡಿ ಗೆದ್ದಿದ್ದ ಆರ್‌ಸಿಬಿ, ಸಿಎಸ್‌ಕೆ ವಿರುದ್ಧ ರನ್‌ಗಳನ್ನು ಡಿಫೇಂಡ್ ಮಾಡಿಕೊಂಡು ಸೈ ಎನಿಸಿದೆ. ಈಗ ಮೂರನೇ ಪಂದ್ಯಕ್ಕಾಗಿ ಎಲ್ಲ ಸಿದ್ಧತೆಗಳು ನಡೆದಿವೆ. ಮೂರನೇ ಪಂದ್ಯಕ್ಕಾಗಿ ಏನೆಲ್ಲಾ ಬದಲಾವಣೆಗಳನ್ನು ನೋಡಬಹುದು ಎಂಬ ಬಗ್ಗೆ ವರದಿ ಇಲ್ಲಿದೆ.

ಆರ್‌ಸಿಬಿ ಆರಂಭಿಕರಾದ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇವರು ಸ್ಥಿರ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಧಾರವಾಗುವ ಪ್ಲೇಯರ್ಸ್. ಬ್ಯಾಟಿಂಗ್ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಚಿನ್ನಸ್ವಾಮಿ ಅಂಗಳದಲ್ಲಿ ಈ ಇಬ್ಬರೂ ಆಟಗಾರರು ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಮಧ್ಯಮ ಕ್ರಮಂಕಾದಲ್ಲಿ ದೇವದತ್ ಪಡಿಕ್ಕಲ್ ತಂಡ ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ. ಅಂದಾಗ ದೊಡ್ಡ ಮೊತ್ತ ಆಸೆ ಫಲಿಸುತ್ತದೆ.
ಇಂಪ್ಯಾಕ್ಟ್ ಪ್ಲೇಯರ್ ಯಾರು?
ರಜತ್ ಪಟಿದಾರ್ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಭರವಸೆ ಮೂಡಿಸಿದ್ದಾರೆ. ಇನ್ನು ದೊಡ್ಡ ಮೊತ್ತ ನೀಡಿ ತಂಡಕ್ಕೆ ಸೇರಿಸಿಕೊಂಡಿರುವ ಜಿತೇಶ್ ಶರ್ಮಾ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಬಗ್ಗೆ ಅಭಿಮಾನಿಗಳಲ್ಲಿ ಬೇಸರವಿದೆ. ಇನ್ನು ಇವರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕಿದೆ. ಇನ್ನು ಆಲ್‌ರೌಂಡರ್‌ಗಳಾದ ಲಿಯಾಮ್ ಲಿವಿಂಗ್ ಸ್ಟೋನ್ ಹಾಗೂ ಕೃನಾಲ್ ಪಾಂಡ್ಯ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವದು ಪಕ್ಕಾ.

ವೇಗದ ಬೌಲರ್‌ಗಳಾಗಿ ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಭುವನೇಶ್ವರ್ ಕುಮಾರ್ ಎದುರಾಳಿ ಬ್ಯಾಟರ್‌ಗಳಿಗೆ ಕಾಡಬಲ್ಲರು. ಇನ್ನು ಅಭಿಮಾನಿಗಳ ದೊಡ್ಡ ಪ್ರಶ್ನೆ ಕೃನಾಲ್ ಪಾಂಡ್ಯಗೆ ಸಾಥ್ ನೀಡುವುದು ಯಾರು? ಸುಯೇಶ್ ಶರ್ಮಾ ಲೆಗ್ ಸ್ಪಿನ್ ಬೌಲಿಂಗ್ ಮಾಡುತ್ತಿದ್ದು ಮ್ಯಾನೇಜ್ಮೆಂಟ್ ಇವರಿಗೆ ಆದ್ಯತೆ ನೀಡುವ ಚಾನ್ಸ್ ಹೆಚ್ಚಿದೆ. ಆದರೆ ಸ್ವಪ್ನಿಲ್ ಸಿಂಗ್ ಕಳೆದ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ಚೇತೋಹಾರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಈ ಇಬ್ಬರಲ್ಲಿ ಯಾರಿಗೆ ಸ್ಥಾನ ಎಂಬುದು ದೊಡ್ಡ ಪ್ರಶ್ನೆಯಾಗಿದೆ.
ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications