For Quick Alerts
ALLOW NOTIFICATIONS  
For Daily Alerts
 

RCB vs PBKS: ಇಲ್ಲಿದೆ ಆರ್‌ಸಿಬಿ, ಪಂಜಾಬ್‌ ನಡುವಿನ ಕಂಪ್ಲೀಟ್ ಅಂಕಿ ಅಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್‌ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆದ್ದು ಫೈನಲ್‌ಗೆ ಅರ್ಹತೆ ಪಡೆಯಲು ಆರ್‌ಸಿಬಿ ಪ್ಲ್ಯಾನ್ ಮಾಡಿಕೊಂಡಿದೆ. ಪಂಜಾಬ್ ಹಾಗೂ ಆರ್‌ಸಿಬಿ ತಂಡಗಳು ಪ್ರಸಕ್ತ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿವೆ. ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳು ನಡುವಿನ ಅಂಕಿ ಅಂಶಗಳು ಏನು ಹೇಳುತ್ತವೆ ಇಲ್ಲಿದೆ ಕಂಪ್ಲೀಟ್ ಮಾಹಿತಿ.

ಐಪಿಎಲ್‌ ಇತಿಹಾಸದಲ್ಲಿ ಅತಿ ದೊಡ್ಡ ಮೂರನೇ ಪಂದ್ಯವನ್ನು ಚೇಸ್ ಮಾಡಿದ ಆರ್‌ಸಿಬಿ 2 ಅಂಕವನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದು ಮೊದಲ ಕ್ವಾಲಿಫೈಯರ್ ಆಡಲಿದೆ. ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಪಂಜಾಬ್‌ ಸಹ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿತ್ತು. ಆರ್‌ಸಿಬಿ ಹಾಗೂ ಪಂಜಾಬ್‌ ತಂಡಗಳ ನಡುವಿನ ಮಹತ್ವದ ಅಂಕಿ ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ.

RCB and Punjab Kings Set for IPL Qualifier Showdown Key Stats and Player Insights


ಐಪಿಎಲ್‌ನಲ್ಲಿ ಎಷ್ಟು ಬಾರಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ?

ಒಟ್ಟಾರೆ ಐಪಿಎಲ್‌ನಲ್ಲಿ ಪಂಜಾಬ್‌ ಹಾಗೂ ಆರ್‌ಸಿಬಿ ತಂಡಗಳು 35 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಪಂಜಾಬ್‌ 18 ಪಂದ್ಯಗಳನ್ನು ಗೆದ್ದರೆ, ಆರ್‌ಸಿಬಿ 17 ಪಂದ್ಯವನ್ನುಗೆದ್ದಿದೆ.

ಪ್ರಸಕ್ತ ಐಪಿಎಲ್‌ನಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ?

ಪಂಜಾಬ್, ಆರ್‌ಸಿಬಿ ತಂಡಗಳು ಪ್ರಸಕ್ತ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿವೆ. ಅಲ್ಲದೆ ಎರಡೂ ತಂಡಗಳು 19 ಅಂಕಗಳನ್ನು ಕಲೆ ಹಾಕಿದ್ದು, ಅಂಕ ಪಟ್ಟಿಯಲ್ಲಿ ಮೊದಲೆರೆಡು ಸ್ಥಾನವನ್ನು ಪಡೆದುಕೊಂಡಿವೆ.

ಆರ್‌ಸಿಬಿ, ಪಂಜಾಬ್‌ ತಂಡಗಳ ನಡುವಣ ಫೈಟ್‌ನಲ್ಲಿ ಗರಿಷ್ಠ ಮೊತ್ತ ಎಷ್ಟು?

ಹಿಮಾಚಲ ಪ್ರದೇಶ ಕ್ರಿಕೆಟ್‌ ಮೈದಾನದಲ್ಲಿ 2024ರಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್‌ ವಿರುದ್ಧ 4 ವಿಕೆಟ್‌ ನಷ್ಟಕ್ಕೆ 241 ರನ್‌ ಗಳಿಸಿದ್ದು ದೊಡ್ಡ ಮೊತ್ತವಾಗಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 92 ರನ್‌ ಬಾರಿಸಿದ್ದರು.

ಪಂಜಾಬ್‌ ವಿರುದ್ಧ ವಿರಾಟ್‌ ಶತಕ ಸಾಧನೆ ಮಾಡಿದ್ದಾರಾ?

ಹೌದು.. 2016ರ ಐಪಿಎಲ್ ಆವೃತ್ತಿಯಲ್ಲಿ 50ನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 211 ರನ್‌ ಕಲೆ ಹಾಕಿತು. ಈ ವೇಳೆ ವಿರಾಟ್ ಕೊಹ್ಲಿ 50 ಎಸೆತಗಳಲ್ಲಿ 12 ಬೌಂಡರಿ, 8 ಸಿಕ್ಸರ್ ಸಹಾಯದಿಂದ 113 ರನ್‌ ಬಾರಿಸಿದ್ದರು.

ಪಂಜಾಬ್‌ ವಿರುದ್ಧ ವಿರಾಟ್ ಕೊಹ್ಲಿ ಎಷ್ಟು ರನ್ ಬಾರಿಸಿದ್ದಾರೆ?

ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಎಲ್ಲ ತಂಡಗಳ ವಿರುದ್ಧ ಅಮೋಘ ಪ್ರದರ್ಶನ ನೀಡಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧವೂ ವಿರಾಟ್‌ ಸ್ಥಿರ ಪ್ರದರ್ಶನ ನೀಡಿದ್ದು, ಆಡಿದ 32 ಪಂದ್ಯಗಳಲ್ಲಿ 1030 ರನ್‌ಗಳನ್ನು 35ರ ಸರಾಸರಿಯಲ್ಲಿ ಕಲೆ ಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳು ಸೇರಿವೆ.

ಶ್ರೇಯಸ್‌ ಅಯ್ಯರ್ ಆರ್‌ಸಿಬಿ ವಿರುದ್ಧ ಎಷ್ಟು ರನ್ ಬಾರಿಸಿದ್ದಾರೆ?

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಪಂಜಾಬ್ ನಾಯಕ ಸ್ಥಿರ ಪ್ರದರ್ಶನ ನೀಡಿದ್ದಾರೆ. ಶ್ರೇಯಸ್ ಅಯ್ಯರ್‌ ಒಟ್ಟಾರೆ ಐಪಿಎಲ್‌ನಲ್ಲಿ ಬೇರೆ ಬೇರೆ ತಂಡಗಳ ಪರ ಆಡುವಾಗ ಶ್ರೇಯಸ್‌ 463 ರನ್‌ ಸಿಡಿಸಿದ್ದಾರೆ.

ಅರ್ಷದೀಪ್ ಸಿಂಗ್ ಆರ್‌ಸಿಬಿ ಪರ ಪಡೆದ ವಿಕೆಟ್‌ ಎಷ್ಟು?

ಅರ್ಷದೀಪ್ ಸಿಂಗ್ ಆರ್‌ಸಿಬಿ ವಿರುದ್ಧ ಆಡಿದ 6 ಪಂದ್ಯಗಳಲ್ಲಿ 4 ವಿಕೆಟ್‌ ಕಬಳಿಸಿದ್ದಾರೆ.

ಆರ್‌ಸಿಬಿ ವಿರುದ್ಧ ಯುಜುವೇಂದ್ರ ಚಹಾಲ್ ಪ್ರದರ್ಶನ ಹೇಗಿದೆ?

ಆರ್‌ಸಿಬಿ ತಂಡದ ಮಾಜಿ ಆಟಗಾರ ಯುಜುವೇಂದ್ರ ಚಹಾಲ್‌ ಆರ್‌ಸಿಬಿ ವಿರುದ್ಧ 6 ವಿಕೆಟ್‌ ಪಡೆದಿದ್ದಾರೆ.

ಆರ್‌ಸಿಬಿ ವಿರುದ್ಧ ಮಾರ್ಕಸ್‌ ಸ್ಟೋಯ್ನಿಸ್‌ ಎಷ್ಟು ರನ್ ಕಲೆ ಹಾಕಿದ್ದಾರೆ?

ಒಟ್ಟಾರೆ ಐಪಿಎಲ್‌ನಲ್ಲಿ 13 ಪಂದ್ಯಗಳನ್ನು ಆರ್‌ಸಿಬಿ ವಿರುದ್ಧ ಬ್ಯಾಟ್ ಮಾಡಿರುವ ಸ್ಟೋಯ್ನಿಸ್ 275 ರನ್‌ ಸಿಡಿಸಿದ್ದಾರೆ.

Story first published: Wednesday, May 28, 2025, 15:05 [IST]
Other articles published on May 28, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+