RCB vs CSK IPL 2025: 17 ವರ್ಷಗಳ ಬಳಿಕ ಚೆನ್ನೈನಲ್ಲಿ ಆರ್‌ಸಿಬಿಗೆ ಜಯ: ಹೊಸ ಅಧ್ಯಾಯ ಆರಂಭ
ಚೆನ್ನೈನ ಎಂ ಎ ಚಿದಂಬರಂ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತಿಹಾಸ ನಿರ್ಮಿಸಿದೆ. ಸಂಘಟಿತ ಆಟದ ಪ್ರದರ್ಶನ ನಿಡಿದ ಬೆಂಗಳೂರು ತಂಡ 17 ವರ್ಷಗಳ ಬಳಿಕ ಚೆನ್ನೈನಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಆರ್‌ಸಿಬಿ ಆಡಿದ ಎರಡೂ ಪಂದ್ಯಗಳನ್ನು ಆಡಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 196 ರನ್ ಸಿಡಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 146 ರನ್ ಸೇರಿಸಿ ಸೋಲು ಕಂಡಿತು. ಈ ಗೆಲುವಿನ ಮೂಲಕ ಆರ್‌ಸಿಬಿ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡದ ಆರಂಭ ಉತ್ತಮವಾಗಿತ್ತು. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಮೊದಲ ವಿಕೆಟ್‌ಗೆ 5 ಓವರ್‌ಗಳಲ್ಲಿ 45 ರನ್ ಸಿಡಿಸಿದರು. 16 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 32 ರನ್ ಬಾರಿಸಿ ಔಟ್ ಆದರು. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ 14 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 27 ರನ್ ಬಾರಿಸಿ ಔಟ್ ಆದರು. ಆರಂಭಿಕ ವಿರಾಟ್ ಕೊಹ್ಲಿ 31 ರನ್‌ಗಳಿಗೆ ಆಟ ಮುಗಿಸಿದರು.
ರಜತ್ ಅರ್ಧಶತಕ
ಮಧ್ಯಮ ಕ್ರಮಾಂಕದಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದ ರಜತ್ ಪಟಿದಾರ್ ಅಬ್ಬರಿಸಿದರು. ಇವರು 32 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 51 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಕೆಳ ಕ್ರಮಾಂಕದಲ್ಲಿ ಟೀಮ್ ಡೇವಿಡ್ 8 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ ಸಹಾಯದಿಂದ 22 ರನ್ ಬಾರಿಸಿ ಔಟ್ ಆದರು.
ಚೆನ್ನೈ ತಂಡದ ಪರ ನೂರ್ ಅಹ್ಮದ್ 3, ಮತೀಶ್ ತೀಕ್ಷಣ್ 2 ವಿಕೆಟ್ ಕಬಳಿಸಿದರು.
ಕಳಪೆ ಆರಂಭ
ಆರ್‌ಸಿಬಿ ನೀಡಿದ 197 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಚೆನ್ನೈ ತಂಡದ ಆರಂಭ ಕಳಪೆ ಯಾಗಿತ್ತು. ಆರಂಭಿಕ ರಾಹುಲ್ ತ್ರಿಪಾಠಿ (5), ನಾಯಕ ರುತುರಾಜ್ ಗಾಯಕ್ವಾಡ್ (0) ಜವಾಬ್ದಾರಿಯುತ ಆಟವನ್ನು ಆಡುವಲ್ಲಿ ವಿಫಲರಾದರು. ಇವರಿಬ್ಬರೂ ಜೋಶ್ ಹ್ಯಾಜಲ್ ವುಡ್ ತೋಡಿದ ಖೆಡ್ಡಾಗೆ ಬಲಿಯಾದರು. ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ ಮ್ಯಾಜಿಕ್ ಮಾಡಲಿಲ್ಲ. ಇವರಿಗೆ ಭುವನೇಶ್ವರ್ ಕುಮಾರ್ ಖೆಡ್ಡಾ ತೋಡಿದರು.
ಆಲ್‌ರೌಂಡರ್ ಸ್ಯಾಮ್ ಕರನ್ (8), ಶಿವಂ ದುಬೆ (19) ಒತ್ತಡವನ್ನು ಮೆಟ್ಟಿ ನಿಂತು ಬ್ಯಾಟ್ ಮಾಡಲಿಲ್ಲ. ಆರಂಭಿಕರಾದ ರಚಿನ್ ರವೀಂದ್ರ 31 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ 41 ರನ್ ಬಾರಿಸಿ ಔಟ್ ಆದರು.ಮಧ್ಯಮ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ 25, ಆರ್ ಅಶ್ವಿನ್ 11, ಎಂ ಎಸ್ ಧೋನಿ ಅಜೇಯ 30 ರನ್ ಸಿಡಿಸಿದರು.
ಆರ್‌ಸಿಬಿ ಪರ ಜೋಶ್ ಹ್ಯಾಜಲ್‌ವುಡ್ 3, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್ ತಲಾ 2 ವಿಕೆಟ್ ಕಬಳಿಸಿದರು. ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications