RCB Captain IPL 2022: ಕೊನೆಗೂ ನಾಯಕನ ಹೆಸರು ಬಹಿರಂಗಪಡಿಸಿದ ಆರ್‌ಸಿಬಿ; ಈತನೇ ಹೊಸ ಸಾರಥಿ!

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಇದೇ ತಿಂಗಳ 26ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಟೂರ್ನಿಗೆ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಇತ್ತ ಹಲವು ತಂಡದ ಆಟಗಾರರು ಮತ್ತು ತರಬೇತುದಾರರು ಅಭ್ಯಾಸಗಳನ್ನು ಆರಂಭಿಸಲು ಕ್ಯಾಂಪ್ ಸೇರಿಕೊಳ್ಳುತ್ತಿದ್ದರೆ, ಅತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾತ್ರ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಇಲ್ಲಿಯವರೆಗೂ ಘೋಷಿಸಿಯೇ ಇರಲಿಲ್ಲ.
ಮೊದಲಿಗೆ ಈ ಬಾರಿಯ ರಿಟೆನ್ಷನ್ ಪ್ರಕ್ರಿಯೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ರಿಟೈನ್ ಆದ ಗ್ಲೆನ್ ಮ್ಯಾಕ್ಸ್‌ವೆಲ್ ಹೆಗಲಿಗೆ ನಾಯಕತ್ವವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹಾಕಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ನಂತರ ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿದ ಫಾಫ್ ಡು ಪ್ಲೆಸಿಸ್ ಪಾಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ಸಿಗಲಿದೆ ಎಂಬ ಮಾತುಗಳು ಕೂಡ ಕೇಳಿಬಂದಿದ್ದವು. ಹೀಗೆ ಸಾಕಷ್ಟು ಹೆಸರುಗಳು ಹರಿದಾಡುತ್ತಿದ್ದರೂ ತನ್ನ ನಾಯಕ ಯಾರೆಂಬುದು ಬಿಟ್ಟುಕೊಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇಂದು ( ಮಾರ್ಚ್ 12 ) ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನ ಮ್ಯೂಸಿಯಂ ಕ್ರಾಸ್ ರಸ್ತೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ತನ್ನ ಮುಂದಿನ ನಾಯಕ ಯಾರೆಂಬುದನ್ನು ಬಹಿರಂಗಪಡಿಸಿದೆ.

ಈತನೇ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮುಂದಿನ ನಾಯಕ
ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತೆಕ್ಕೆಗೆ ಬಿದ್ದ ಫಾಫ್ ಡು ಪ್ಲೆಸಿಸ್ ಹೆಗಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ತಂಡದ ನಾಯಕತ್ವವನ್ನು ವಹಿಸಿದೆ. ಸದ್ಯ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್ ಬಾಕ್ಸ್ ಕಾರ್ಯಕ್ರಮದಲ್ಲಿ ಫಾಫ್ ಡು ಪ್ಲೆಸಿಸ್ ಭಾಗವಹಿಸಿದ್ದು, ನೂತನ ನಾಯಕ ಎಂದು ಫ್ರಾಂಚೈಸಿ ಘೋಷಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಜೇಸನ್ ಬೆಹ್ರೆನ್‌ಡಾರ್ಫ್, ಚಾಮಾ ಮಿಲಿಂದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಮಾಹಿ ಶೆಪಾಲ್ ಅಹ್ಮದ್ ರುದರ್‌ಫೋರ್ಡ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ವೇಳಾಪಟ್ಟಿ
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೀಗ್ ಹಂತದ ವೇಳಾ ಪಟ್ಟಿ ಈ ಕೆಳಕಂಡಂತಿದೆ
27 ಮಾರ್ಚ್ 2022 - 7.30 pm- ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
30 ಮಾರ್ಚ್ 2022 - 7.30 pm -ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್
5 ಏಪ್ರಿಲ್ 2022 - 7.30 pm - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
9 ಏಪ್ರಿಲ್ 2022 - 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
12 ಏಪ್ರಿಲ್ 2022- 7.30 pm- ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
16 ಏಪ್ರಿಲ್ 2022-7.30 pm- ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
19 ಏಪ್ರಿಲ್ 2022 - 7.30 pm- ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
23 ಏಪ್ರಿಲ್ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್
26 ಏಪ್ರಿಲ್ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್
30 ಏಪ್ರಿಲ್ 2022- 3.30 pm- ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
4 ಮೇ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್
8 ಮೇ 2022- ಮಧ್ಯಾಹ್ನ 3.30- ಸನ್ ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
13 ಮೇ 2022- 7.30 pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್
19 ಮೇ 2022- 7.30pm- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications