Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಚಾಂಪಿಯನ್ ಪಟ್ಟ ಅಲಂಕರಿಸಿದ RCB ಪಡೆದ ಬಹುಮಾನ ಮೊತ್ತ ಎಷ್ಟು?

ವಡೋದರಾ: ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ್ದ ಸವಾಲಿನ ಗುರಿಯನ್ನು ನಿರಾಯಾಸವಾಗಿ ಮುಟ್ಟಿದ ಆರ್‌ಸಿಬಿ ಇತಿಹಾಸ ನಿರ್ಮಿಸಿದೆ. ಮಹಿಳಾ ಪ್ರೀಮಿಯರ್ ಲೀಗ್‌ ಆರ್‌ಸಿಬಿ ಎರಡನೇ ಬಾರಿಗೆ ಟ್ರೋಫಿ ಎತ್ತಿ ಇತಿಹಾಸ ನಿರ್ಮಿಸಿದೆ. ಫೈನಲ್‌ ಪಂದ್ಯದ ಒತ್ತಡವನ್ನೇ ಪಡೆಯದ ಬ್ಯಾಟ್ ಮಾಡಿದ ಆರ್‌ಸಿಬಿ ಆರ್ಭಟಿಸಿದೆ. ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಆರ್‌ಸಿಬಿ ತಂಡಕ್ಕೆ ಲಭಿಸಿರುವ ಮೊತ್ತ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಆರು ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಆಕರ್ಷಕ ಟ್ರೋಫಿಯೊಂದಿಗೆ 6 ಕೋಟಿ ರೂ. ಬಹುಮಾನವನ್ನು ಪಡೆಯಲಿದ್ದಾರೆ. ಇನ್ನು ಫೈನಲ್‌ ಪಂದ್ಯದಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಕೋಟಿ ರೂ. ಹಣವನ್ನು ಪಡೆಯಲಿದೆ.

RCB

ಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಲಿಜೇಲ್‌ ಲಿ (37) ಹಾಗೂ ಶಫಾಲಿ ವರ್ಮಾ (20) ಜೋಡಿ 49 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಇನ್ನು ಮಹತ್ವದ ಪಂದ್ಯದಲ್ಲಿ ಡೆಲ್ಲಿ ತಂಡದ ನಾಯಕಿ ಜೆಮಿಮಾ ಹಾಗೂ ಲಾರಾ ವೋಲ್ವಾರ್ಡ್ ಜೋಡಿ ಸಹ ತಂಡ ಅಂದುಕೊಂಡಿದ್ದ ಮೊತ್ತವನ್ನು ಕಲೆ ಹಾಕುವಲ್ಲಿ ಶ್ರಮಿಸಿತು. ಜೆಮಿಮಾ 57, ಲಾರಾ ವೋಲ್ವಾರ್ಡ್ ಅಜೇಯ 44, ಚೆನ್ಲಿ ಹೆನ್ರಿ ಅಜೇಯ 35 ರನ್‌ ಸಿಡಿಸಿದರು. ಅಂತಿಮವಾಗಿ ಡೆಲ್ಲಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 203 ರನ್ ಸವಾಲಿನ ಮೊತ್ತವನ್ನು ಪೇರಿಸಿತು.

ಸ್ಮೃತಿ, ಜಾರ್ಜಿಯಾ ಆರ್ಭಟ

ಸವಾಲಿನ ಮೊತ್ತವನ್ನು ಹಿಂಬಾಲಿಸಿದ ಆರ್‌ಸಿಬಿ ತಂಡದ ಆರಂಭ ಕಳಪೆಯಾಗಿತ್ತು. ಸ್ಫೋಟಕ ಆಟಗಾರ್ತಿ ಗ್ರೇಸ್‌ ಹ್ಯಾರಿಸ್‌ ಅವರಿಗೆ ಖೆಡ್ಡಾ ತೋಡಿ ಪಂದ್ಯದ ಮೇಲೆ ಹಿಡಿತ ಸಾಧಿಸುವ ಆಸೆಯನ್ನು ಡೆಲ್ಲಿ ಹೊಂದಿತ್ತು. ಆದರೆ ಎರಡನೇ ವಿಕೆಟ್‌ಗೆ ನಾಯಕಿ ಸ್ಮೃತಿ ಮಂಧಾನ ಅವರನ್ನು ಸೇರಿಕೊಂಡ ಜಾರ್ಜಿಯಾ ವೋಲ್‌ ಅವರು ತಂಡಕ್ಕೆ ಭರ್ಜರಿ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾದರು. ಅಲ್ಲದೆ ಆರ್‌ಸಿಬಿ ಪರ ಈ ಜೋಡಿ 150ಕ್ಕೂ ಹೆಚ್ಚು ರನ್‌ ಕಲೆ ಹಾಕಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿತು. ಸ್ಮೃತಿ 87, ಜಾರ್ಜಿಯಾ ವೋಲ್‌ 79 ರನ್ ಬಾರಿಸಿ ಜಯದಲ್ಲಿ ಮಿಂಚಿದರು. ಅಂತಿಮವಾಗಿ ಆರ್‌ಸಿಬಿ 19.4 ಓವರ್‌ಗಳಲ್ಲಿ 4 ವಿಕೆಟ್‌ಗಳಿಂದ 204 ರನ್‌ ಸೇರಿಸಿ ಜಯ ಸಾಧಿಸಿತು.

---------

ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್‌' ವೆಬ್‌ಸೈಟ್‌ನಲ್ಲಿದೆ

ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್‌ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್‌ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್‌, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್‌, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್‌, 'ಮೈಖೇಲ್' ವೆಬ್‌ಸೈಟ್ ಬೆಸ್ಟ್‌.

ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್‌ ಫಾಲೊ ಮಾಡಿ.

Story first published: Friday, February 6, 2026, 0:28 [IST]
Other articles published on Feb 6, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+