WPL 2026: ಈ ಬಾರಿ ಕಪ್ ನಮ್ದೇ ಎಂದು RCB ಮತ್ತೊಮ್ಮೆ ಹೇಳಲು ಒಂದೇ ಹೆಜ್ಜೆ
ಭರವಸೆಯ ಆಟಗಾರ್ತಿ ನಾಡಿನ್ ಡಿ ಕ್ಲರ್ಕ್ ಹಾಗೂ ಗ್ರೇಸ್ ಹ್ಯಾರಿಸ್ ಅವರ ಭರ್ಜರಿ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್‌ಗೆ ಅರ್ಹತೆ ಪಡೆದಿದೆ. ಗುರುವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ, ಯುಪಿ ವಾರಿಯರ್ಸ್ ವಿರುದ್ಧ ಅಮೋಘ ಆಟದ ಪ್ರದರ್ಶನ ನೀಡಿ ಪೂರ್ಣ ಅಂಕವನ್ನು ಕಲೆ ಹಾಕಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಖಾತ್ರಿ ಪಡಿಸಿಕೊಂಡಿತು.
ಆರ್‌ಸಿಬಿ ತಂಡಕ್ಕೆ ಈ ಪಂದ್ಯ ಮಹತ್ವದಾಗಿತ್ತು. ಈಗಾಗಲೇ ಆರ್‌ಸಿಬಿ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿತ್ತು. ಆದರೆ ಲೀಗ್ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಸೋಲನ್ನು ಕಂಡಿದ್ದ ಆರ್‌ಸಿಬಿ, ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿತ್ತು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ಸ್ಥಿರ ಪ್ರದರ್ಶನವನ್ನು ನೀಡಿ ಅಬ್ಬರಿಸಿತು. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ 6ನೇ ಗೆಲುವು ದಾಖಲಿಸಿ 12 ಅಂಕಗಳನ್ನು ಕಲೆ ಹಾಕಿ, ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಿತು. ಯುಪಿ ವಾರಿಯರ್ಸ್ ಪ್ಲೇ ಆಫ್ ಹಾದಿ ದುರ್ಗಮವಾಗಿದೆ.

144 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡದ ಆರಂಭಿಕ ಆಟಗಾರ್ತಿಯರು ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಗ್ರೇಸ್ ಹ್ಯಾರಿಸ್ ಆರಂಭದಿಂದಲೂ ಆರ್ಭಟ ನಡೆಸಿದರು. ಇವರು ಕ್ರಾಂತಿ ಗೌಡ ಎಸೆದ ಮೂರನೇ ಓವರ್‌ನಲ್ಲಿ ಬ್ಯಾಕ್ ಟು ಬ್ಯಾಕ್ 5 ಬೌಂಡರಿ ಬಾರಿಸಿದರು. ಈ ಜೋಡಿ ಪವರ್ ಪ್ಲೇನಲ್ಲಿ 63 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಧಾರವಾಯಿತು. ಸ್ಮೃತಿ ಹಾಗೂ ಗ್ರೇಸ್ ಹ್ಯಾರಿಸ್ ಅವರನ್ನು ಕಟ್ಟಿ ಹಾಕುವಲ್ಲಿ ಯುಪಿ ಬೌಲರ್‌ಗಳು ವಿಫಲರಾದರು.
ಗ್ರೇಸ್ ಹ್ಯಾರಿಸ್, ಸ್ಮೃತಿ ಅರ್ಧಶತಕ
ಮೊದಲ ವಿಕೆಟ್‌ಗೆ ಗ್ರೇಸ್ ಹ್ಯಾರಿಸ್ ಜೋಡಿ 9.1 ಓವರ್‌ಗಳಲ್ಲಿ 120 ರನ್ ಜೊತೆಯಾಟದ ಕಾಣಿಕೆ ನೀಡಿತು. ಕೇವಲ 37 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್ ಬಾರಿಸಿದ್ದ ಗ್ರೇಸ್ ಹ್ಯಾರಿಸ್ 75 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ನಾಯಕಿ ಸ್ಮೃತಿ ಮಂಧಾನ ಅವರು ಮನಮೋಹಕ ಬ್ಯಾಟಿಂಗ್ ನಡೆಸಿದರು. ಇವರು 27 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 54 ರನ್ ಬಾರಿಸಿ ಅಬ್ಬರಿಸಿದರು. ಅಂತಿಮವಾಗಿ ಆರ್‌ಸಿಬಿ 13.1 ಓವರ್‌ಗಳಲ್ಲಿ 2 ವಿಕೆಟ್‌ಗೆ 147 ರನ್ ಸಿಡಿಸಿ ಜಯ ಸಾಧಿಸಿತು.
ದೀಪ್ತಿ ಶರ್ಮಾ ಅರ್ಧಶತಕ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡದ ಆರಂಭ ಭರ್ಜರಿಯಾಗಿತ್ತು. ಲೀಗ್‌ನಲ್ಲಿ ಮೊದಲ ಬಾರಿಗೆ ಆರಂಭಿಕರಾಗಿ ಕಣಕ್ಕೆ ಇಳಿದ ದೀಪ್ತಿ ಶರ್ಮಾ ಹಾಗೂ ನಾಯಕಿ ಮೆಗ್ ಲ್ಯಾನಿಂಗ್ ಜೋಡಿ ತಂಡದ ಪರ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಆರ್‌ಸಿಬಿ ಬೌಲರ್‌ಗಳು ಆರಂಭದಲ್ಲಿ ವಿಫಲರಾದರು. ಈ ಜೋಡಿ ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 74 ರನ್ ಸಿಡಿಸಿದರು. ಈ ವೇಳೆ ಮೆಗ್ ಲ್ಯಾನಿಂಗ್ 44 ರನ್ ಬಾರಿಸಿ ಮುನ್ನುಗ್ಗುತ್ತಿದ್ದಾಗ ನಾಡಿನ್ ಡಿ ಕ್ಲರ್ಕ್ ತೋಡಿದ ಖೆಡ್ಡಾಗೆ ಬಲಿಯಾದರು.
ಮಧ್ಯಮ ಕ್ರಮಾಂಕದಲ್ಲಿ ಹರ್ಲಿನ್ ಡಿಯೋಲ್ (14), ಸಿಮ್ರಾನ್ ಶೇಖ್ (10) ಅವರನ್ನು ಬಿಟ್ಟರೆ ಉಳಿದ ಬ್ಯಾಟರ್‌ಗಳು ನಿರಾಸೆ ಅನುಭವಿಸಿದರು. ಆರಂಭಿಕ ಆಟಗಾರ್ತಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ 55 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಯುಪಿ ವಾರಿಯರ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 143 ರನ್ ಸಿಡಿಸಿತು.
ಆರ್‌ಸಿಬಿ ತಂಡದ ಪರ ನಾಡಿನ್ ಡಿ ಕ್ಲಾರ್ಕ್ 4, ಗ್ರೇಸ್ ಹ್ಯಾರಿಸ್ 2 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications