ಆರ್‌ಸಿಬಿ ಅಭಿಮಾನಿಗಳಿಗೆ ಖುಷಿಯೋ ಖುಷಿ : ಕೊಹ್ಲಿ ಪಡೆ ಪ್ಲೇ ಆಫ್‌ಗೆ ಎಂಟ್ರಿ

ಅಂತೂ ಇಂತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೂರು ವರ್ಷಗಳ ಬಳಿಕ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಐಪಿಎಲ್ 2020ರ ಟೂರ್ನಿಯ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಕೊಹ್ಲಿ ಪಡೆ ಕಳೆದ ಕೆಲವು ಪಂದ್ಯಗಳಲ್ಲಿ ಗುಣಮಟ್ಟದ ಆಟ ಪ್ರದರ್ಶಿಸುವಲ್ಲಿ ವಿಫಲಗೊಂಡಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಸೋತರೂ ನೆಟ್ ರನ್‌ರೇಟ್ ಆಧಾರದಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ.
14 ಪಂದ್ಯಗಳಲ್ಲಿ 7 ಗೆಲುವು ಮತ್ತು 7 ಸೋಲು ಕಂಡಿರುವ ಆರ್‌ಸಿಬಿ 14 ಪಾಯಿಂಟ್ಸ್ ಹಾಗೂ ನೆಟ್ ರನ್ ರೇಟ್ -0.172 ಆಧಾರದ ಮೇಲೆ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 152ರನ್‌ಗಳಿಸಿ ಡಿಫೆಂಡ್ ಮಾಡಿಕೊಳ್ಳಲಾಗದೆ ಆರ್‌ಸಿಬಿ ಪಂದ್ಯ ಸೋತರೂ, ಕೆಕೆಆರ್ ತಂಡಕ್ಕಿಂತ ಕೊಂಚ ಉತ್ತಮ ನೆಟ್ ರನ್‌ರೇಟ್ ಹೊಂದಿರುವ ಪರಿಣಾಮ ಡೆಲ್ಲಿ ಜೊತೆಗೆ ಪ್ಲೇ ಆಫ್ ಪ್ರವೇಶಿಸಿದೆ. ಆದರೆ ಸದ್ಯ ಮೂರನೇ ಸ್ಥಾನದಲ್ಲಿರುವ ಕೊಹ್ಲಿ ಪಡೆ ಮುಂದಿನ ಪಂದ್ಯದಲ್ಲಿ ಹೈದ್ರಾಬಾದ್-ಮುಂಬೈ ಫಲಿತಾಂಶದ ಮೇಲೆ ಮೂರು ಅಥವಾ ನಾಲ್ಕನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧ ಹೈದ್ರಾಬಾದ್ ಗೆದ್ದರೂ, ಸೋತರೂ ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಇಲ್ಲವೇ ಕೆಕೆಆರ್ ತಂಡವನ್ನು ಎದುರಿಸಬೇಕಾಗುತ್ತದೆ. ಆ ಪಂದ್ಯದಲ್ಲಿ ಗೆದ್ದರಷ್ಟೇ ಎರಡನೇ ಕ್ವಾಲಿಫೈಯರ್‌ನಲ್ಲಿ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡದೆದುರು ಆಡಲು ಅವಕಾಶ ಸಿಗಲಿದೆ.
ಒಟ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಶುಭ ಸುದ್ದಿ ಸಿಕ್ಕಿದ್ದು, ಈ ಬಾರಿ ಕಪ್ ನಮ್ದೆ ಎಂದು ಆರ್‌ಸಿಬಿಯನ್ನು ಬೆಂಬಲಿಸಲು ಈ ಸೀಸನ್‌ನಲ್ಲಿ ಮತ್ತಷ್ಟು ಅವಕಾಶ ಸಿಕ್ಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications