India vs England 1st ODI: ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ವೇಗಿ, ಆರ್‌ಸಿಬಿ ಆಟಗಾರರನಿಗೂ ಅವಕಾಶ ಮಿಸ್?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಏಕದಿನ ಪಂದ್ಯಕ್ಕೆ ನಾಗ್ಪುರ ಮೈದಾನ ಸಿದ್ಧವಾಗಿದೆ. ಈ ಸರಣಿ ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸಲು ಉತ್ತಮ ವೇದಿಕೆ. ಈ ಸರಣಿಯಲ್ಲಿ ಸ್ಟಾರ್ ಆಟಗಾರರು ಅಖಾಡ ಪ್ರವೇಶಿಸಲಿದ್ದು, ರೋಚಕತೆ ಮನೆ ಮಾಡಿದೆ. ನಾಗ್ಪುರ್‌ದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಇಂಗ್ಲೆಂಡ್ ಚಿತ್ತ ನೆಟ್ಟಿದೆ. ಈಗಾಗಲೇ ಟಿ20 ಸರಣಿಯನ್ನು ಸೋತಿರುವ ಇಂಗ್ಲೆಂಡ್, ಈ ಸರಣಿಯಲ್ಲಿ ಭರ್ಜರಿ ಕಂ ಬ್ಯಾಕ್ ಮಾಡುವ ಪ್ಲ್ಯಾನ್ ಮಾಡಿಕೊಂಡಿದೆ.
ನಾಗ್ಪುರ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡದಲ್ಲಿ ಬದಲಾಣೆ ಗಾಳಿ ಬೀಸುವ ಸಾಧ್ಯತೆ ಇದೆ. ಸ್ಟಾರ್ ಆಟಗಾರರು ತಂಡಕ್ಕೆ ಸೇರಿದ್ದಂತೆ ಯುವ ಆಟಗಾರರು ಹಾಗೂ ಫಾರ್ಮ್‌ನಿಂದ ಪರದಾಡುತ್ತಿರುವ ಆಟಗಾರರು ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಇಂಗ್ಲೆಂಡ್ ತಂಡದಲ್ಲಿ ಜೋ ರೂಟ್ ಅವರಿಗೆ ಸ್ಥಾನ ನೀಡಲಾಗಿದೆ. ಭಾರತೀಯ ಪರಿಸ್ಥಿತಿಗಳಲ್ಲಿ ಜೋ ರೂಟ್ ಅಪಾಯಕಾರಿ ಬ್ಯಾಟರ್ ಎಂಬುದು ಸಾಬೀತಾಗಿದೆ. ಹೀಗಾಗಿ ಇವರಿಗೆ ತಂಡದಲ್ಲಿ ಸ್ಥಾನ ಲಭಿಸುವುದು ಪಕ್ಕಾ.

ಜೋ ರೂಟ್ ಸದ್ಯ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಮಾತ್ರ ಬ್ಯಾಟ್ ಮಾಡುತ್ತಿದ್ದು ಬಹು ದಿನಗಳ ಬಳಿಕ ಏಕದಿನ ಫಾರ್ಮೆಟ್‌ನಲ್ಲಿ ಬ್ಯಾಟ್ ಮಾಡಲಿದ್ದಾರೆ. ಭಾರತದ ವಿರುದ್ಧದ ಸರಣಿಯ ಬಳಿಕ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಇಂಗ್ಲೆಂಡ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು. ಇನ್ನು ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ಬೆನ್ ಡಕೆಟ್ ಕಾಣಿಸಿಕೊಳ್ಳಲಿದ್ದು, ಇವರ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ.
ಯಾರಿಗೆಲ್ಲಾ ಅವಕಾಶ?
ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಹ್ಯಾರಿ ಬ್ರೂಕ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು. ಇನ್ನು ನಾಯಕ ಜೋಸ್ ಬಟ್ಲರ್ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ, ಆರನೇ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಆಡಲಿದ್ದಾರೆ. ಬೌಲಿಂಗ್‌ನಲ್ಲಿ ಜೇಮಿ ಓವರ್‌ಟನ್, ಬ್ರೇಡನ್ ಕಾರ್ಸೆ, ಮಾರ್ಕ್ ವುಡ್ ಮತ್ತು ಗಸ್ ಅಟ್ಕಿನ್ಸನ್‌ಗೆ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಇನ್ನು ಸಾಕಿಬ್ ಮಹಮೂದ್ ಸಹ ತಮಗೆ ಸ್ಥಾನ ನೀಡುವಂತೆ ತಮ್ಮ ಪ್ರದರ್ಶನದ ಮೂಲಕ ಒತ್ತಾಯಿಸುತ್ತಲೇ ಇದ್ದಾರೆ.
ಯಾರು ಕಿಕ್‌ಔಟ್?
ಜೋಫ್ರಾ ಆರ್ಚರ್ ಟಿ20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರು ಏಕದಿನ ತಂಡದಿಂದ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ಟಿ20 ಸರಣಿಯಲ್ಲಿ ಆಡುವ ಅವಕಾಶವನ್ನು ಪಡೆದು ತಮ್ಮ ಕ್ಷಮತೆಗೆ ತಕ್ಕ ಆಡವನ್ನು ಆಡದ ಜಾಕಬ್ ಬೇತೆಲ್ ಸಹ ಬೆಂಚ್ ಕಾಯಬಹುದು.

ಟಿ20 ಸರಣಿಯಲ್ಲಿ ಕಂಡ ಸೋಲಿಗೆ ಸೇಡು ತೀರಿಸಿಕೊಳ್ಳಲು ಇಂಗ್ಲೆಂಡ್ ಪ್ಲ್ಯಾನ್ ಮಾಡಿಕೊಂಡಿದೆ. ಹೀಗಾಗಿಯೇ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಇಂಗ್ಲೆಂಡ್ ನಿರತವಾಗಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ರವಾಸಿ ತಂಡ ಪ್ಲ್ಯಾನ್ ಮಾಡಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications