RCB Unbox Event: ಆರ್‌ಸಿಬಿ ಪುರುಷರ ತಂಡದಿಂದ ಗೌರವ ಸ್ವೀಕರಿಸಿದ ಸ್ಮೃತಿ ಮಂಧಾನ ಪಡೆ
ಭಾನುವಾರ, ಮಾರ್ಚ್ 17ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿಯಿತು.
ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದಾಗ, ಆರ್‌ಸಿಬಿ ಫ್ರಾಂಚೈಸಿಗೆ ಇದು ನೆನಪಿಡುವ ಐತಿಹಾಸಿಕ ದಿನವಾಗಿದೆ.

ಇದೀಗ ಮುಂಬರುವ 2024ರ ಐಪಿಎಲ್‌ನ 17ನೇ ಋತುವಿನಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ಪುರುಷರ ತಂಡವು ತಮ್ಮ ಟ್ರೋಫಿ ಬರವನ್ನು ಕೊನೆಗೊಳಿಸಲು ಎದುರು ನೋಡುತ್ತಿದೆ.
2024ರ ಮಹಿಳಾ ಪ್ರೀಮಿಯರ್ ಲೀಗ್ ಟ್ರೋಫಿ ಗೆಲುವಿನ ನಂತರ, ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿತು.
ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಹುನಿರೀಕ್ಷಿತ ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಚಾಂಪಿಯನ್ ತಂಡ ಆಗಮಿಸುತ್ತಿದ್ದಂತೆಯೇ ಸ್ಟ್ಯಾಂಡ್‌ನಲ್ಲಿದ್ದ ಸಾವಿರಾರು ಅಭಿಮಾನಿಗಳು ಶಿಳ್ಳೆ, ಚಪ್ಪಾಳೆಗಳೊಂದಿಗೆ ಹರ್ಷೋದ್ಗಾರ ವ್ಯಕ್ತಪಡಿಸಿದರು.

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡವು ಪುರುಷರ ತಂಡದಿಂದ ಗೌರವ ರಕ್ಷೆಯನ್ನು ಸ್ವೀಕರಿಸಿತು.
2024ರ ಐಪಿಎಲ್ ಮೊದಲು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ಸಹ ಆಟಗಾರರು ಮತ್ತು ಆರ್‌ಸಿಬಿ ಸಿಬ್ಬಂದಿಯು ಸ್ಮೃತಿ ಮಂಧಾನ ನಾಯಕತ್ವದ ಮಹಿಳಾ ತಂಡಕ್ಕೆ ವಿಶೇಷ ಸೂಚಕವನ್ನು ನೀಡಿದರು.
ಸ್ಮೃತಿ ಮಂಧಾನ ಮತ್ತು ಸಹ ಆಟಗಾರ್ತಿಯರು 2024ರ ಡಬ್ಲ್ಯುಪಿಎಲ್ ಟ್ರೋಫಿಯೊಂದಿಗೆ ಕ್ರೀಡಾಂಗಣದ ಸುತ್ತಲೂ ಸುತ್ತಾಡಿ ತಂಡದ ಅಭಿಮಾನಿಗಳಿಗೆ ಅರ್ಪಿಸಿದರು.
2024ರ ಡಬ್ಲ್ಯುಪಿಎಲ್‌ನಲ್ಲಿ ಆರ್‌ಸಿಬಿ ಪ್ರಬಲವಾದ ಆಲ್‌ರೌಂಡ್ ಪ್ರದರ್ಶನವನ್ನು ನೀಡಿತು. ಟ್ರೋಫಿ, ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್, ಫೇರ್ ಪ್ಲೇ ಅವಾರ್ಡ್ ಮತ್ತು ಎಮಿರ್ಜಿಂಗ್ ಪ್ಲೇಯರ್ ಎಲ್ಲವನ್ನೂ ಒಂದೇ ಆವೃತ್ತಿಯಲ್ಲಿ ಗೆದ್ದ ಮೊದಲ ತಂಡವಾಯಿತು.
ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಆರೆಂಜ್ ಕ್ಯಾಪ್ ವಿಜೇತರಾಗಿದ್ದರೆ, ಶ್ರೇಯಾಂಕ ಪಾಟೀಲ್ ಪರ್ಪಲ್ ಕ್ಯಾಪ್ ವಿಜೇತರಾಗಿದ್ದಾರೆ. ಅಲ್ಲದೆ ಶ್ರೇಯಾಂಕಾ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರು.
RCB ಅನ್‌ಬಾಕ್ಸ್ ಈವೆಂಟ್ ಅನ್ನು ಎಲ್ಲಿ ವೀಕ್ಷಿಸಬೇಕು?
RCB ಅನ್‌ಬಾಕ್ಸ್ ಈವೆಂಟ್ ಅನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು YouTube ಚಾನಲ್‌ನಲ್ಲಿ ವೀಕ್ಷಿಸಬಹುದು. ಅಲ್ಲಿ ಈವೆಂಟ್ ಅನ್ನು ಲೈವ್ ಸ್ಟ್ರೀಮ್ ಮಾಡುತ್ತದೆ. ಅಲ್ಲದೆ, ಆರ್‌ಸಿಬಿ ತಂಡದ ಇತರ ಸಾಮಾಜಿಕ ಮಾಧ್ಯಮ ಖಾತೆಗಳು ಅಭಿಮಾನಿಗಳಿಗಾಗಿ ಈವೆಂಟ್ ಅನ್ನು ಲೈವ್ ಸ್ಟ್ರೀಮ್ ಮಾಡಲಿದೆ.
ಇನ್ನು 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರನ್ನು ಬದಲಾಯಿಸಲಿದೆ. Royal Challengers Bangalore ಬದಲಿಗೆ Royal Challengers Bengaluru ಹೆಸರಿನಲ್ಲಿ ಬದಲಾಯಿಸಬಹುದು. ಫ್ರಾಂಚೈಸಿ ಅದನ್ನು ಅನ್‌ಬಾಕ್ಸ್ ಈವೆಂಟ್‌ನಲ್ಲಿ ಘೋಷಿಸಬಹುದು.
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಮನರಂಜನಾ ಪ್ರದರ್ಶನ ನೀಡುವವರು ಯಾರು?
ಅಲನ್ ವಾಕರ್, ರಘು ದೀಕ್ಷಿತ್, ನೀತಿ ಮೋಹನ್ ಬ್ರೋಧಾ, ವಿ ಜೋರ್ಡಿಂಡಿಯನ್, ಬರ್ಫಿ ಕಚ್ಚೇರಿ
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಯಾವ ಸೆಲೆಬ್ರಿಟಿಗಳು ಹಾಜರಾಗಲಿದ್ದಾರೆ?
ರಿಷಬ್ ಶೆಟ್ಟಿ, ಅಶ್ವಿನಿ ಪುನೀತ್, ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ರಶ್ಮಿಕಾ ಮಂದಣ್ಣ, ಸ್ಮೃತಿ ಮಂಧಾನ ಮತ್ತು ಮಹಿಳಾ ತಂಡ, ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಮತ್ತು ಆರ್‌ಸಿಬಿ ಪುರುಷರ ತಂಡ.
2024ರ ಐಪಿಎಲ್‌ಗೆ ಆರ್‌ಸಿಬಿ ಪೂರ್ಣ ತಂಡ:
ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೊರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ಡಾಗರ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications