WPL 2026: ಟಾಸ್ ಗೆದ್ದ RCB: ಬೌಲಿಂಗ್ ಆಯ್ಕೆ
ವಡೋದರಾ: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಮಹತ್ವದ ಘಟ್ಟಕ್ಕೆ ಬಂದು ನಿಂತಿದೆ. ಗುರುವಾರ ಲೀಗ್‌ನ 18ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಯುಪಿ ವಾರಿಯರ್ಸ್ ತಂಡಗಳು ಕಾದಾಟ ನಡೆಸಲಿವೆ. ಮಹತ್ವದ ಪಂದ್ಯದಲ್ಲಿ ಟಾಸ್ ಬೆಂಗಳೂರು ತಂಡದ ಪಾಲಾಗಿದೆ. ಸ್ಮೃತಿ ಪಡೆ, ಯುಪಿ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಮಂತ್ರಿಸಿದೆ.
ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುವ ಇರಾದೆ ಯುಪಿ ತಂಡದ್ದಾಗಿದೆ. ಇನ್ನು ಈ ಪಂದ್ಯದಲ್ಲಿ ಗೆದ್ದು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುವ ಕನಸನ್ನು ಸ್ಮೃತಿ ಮಂಧಾನ ಪಡೆ ಕಾಣುತ್ತಿದೆ.

ಆರ್‌ಸಿಬಿ ತಂಡ ಮಹತ್ವದ ಪಂದ್ಯಕ್ಕಾಗಿ ಒಂದು ಬದಲವಾಣೆಯನ್ನು ಮಾಡಿಕೊಂಡಿದೆ. ಮಧ್ಯಮ ಕ್ರಮಾಂಕದ ಆಟಗಾರ್ತಿ ಗೌತಮಿ ನಾಯಕ್ ಬದಲಿಗೆ ಪೂಜಾ ವಸ್ತ್ರಾಕರ್ ಅವರಿಗೆ ಸ್ಥಾನ ನೀಡಿದೆ. ಇನ್ನು ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಲೀಗ್‌ನಲ್ಲಿ ಆರ್‌ಸಿಬಿ ಅಮೋಘ ಪ್ರದರ್ಶನ ನೀಡಿದ್ದು ಆಡಿರುವ 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, 10 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ 12 ಅಂಕಗಳನ್ನು ಕಲೆ ಹಾಕಿ ನೇರವಾಗಿ ಫೈನಲ್ ಪ್ರವೇಶಿಸುವ ಕನಸು ಆರ್‌ಸಿಬಿ ತಂಡದ್ದಾಗಿದೆ.
ಗೆಲುವಿನ ಒತ್ತಡದಲ್ಲಿ ಮೆಗ್ ಲ್ಯಾನಿಂಗ್
ಯುಪಿ ವಾರಿಯರ್ಸ್ ತಂಡ ಸಹ ಗೆಲುವಿನ ಒತ್ತಡದಲ್ಲಿದೆ. ಲೀಗ್ ಹಂತದಲ್ಲಿ ಇನ್ನು ಎರಡು ಪಂದ್ಯಗಳನ್ನು ಆಡಲಿರುವ ಮೆಗ್ ಲ್ಯಾನಿಂಗ್ ಪಡೆ, ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಪ್ಲೇ ಆಫ್ ಪ್ರವೇಶಿಸುವ ಕನಸು ನನಸಾಗಲಿದೆ.
ಆರ್‌ಸಿಬಿ ತಂಡ: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಪೂಜಾ ವಸ್ತ್ರಾಕರ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಸಯಾಲಿ ಸತ್ಘರೆ, ಅರುಂಧತಿ ರೆಡ್ಡಿ, ಶ್ರೇಯಾಂಕ ಪಾಟೀಲ್, ಲಾರೆನ್ ಬೆಲ್
ಯುಪಿ ವಾರಿಯರ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಸಿಮ್ರಾನ್ ಶೇಖ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಹರ್ಲೀನ್ ಡಿಯೋಲ್, ಕ್ಲೋಯ್ ಟ್ರಯಾನ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್, ಆಶಾ ಸೋಭಾನಾ, ಶಿಖಾ ಪಾಂಡೆ, ಕ್ರಾಂತಿ ಗೌಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications