ಆರ್‌ಸಿಬಿ ಆಟಗಾರರಿಂದ ರಾಜ್ಯೋತ್ಸವದ ಶುಭಾಶಯ ಕೇಳೋದೇ ಖುಷಿ: ವಿಡಿಯೋ

ಬೆಂಗಳೂರು: ನವೆಂಬರ್ 1ರ ಭಾನುವಾರ ಕರ್ನಾಟಕದಲ್ಲಿ 65ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿನ ಕರ್ನಾಟಕದ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಹೇಳಿದ್ದಾರೆ. ಆಟಗಾರರ ಶುಭಾಶಯ ಕೇಳೋದೇ ಖುಷಿ ಅನ್ನಿಸುತ್ತದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್, ನಾಯಕ ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್, ಶಹಬಾಝ್ ಅಹ್ಮದ್, ವೇಗಿ ಡೇಲ್ ಸ್ಟೇನ್, ಉಮೇಶ್ ಯಾದವ್, ಶಿವಂ ದೂಬೆ, ಸ್ಪಿನ್ನರ್ ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಪವನ್ ದೇಶಪಾಂಡೆ ಕನ್ನಡಿಗರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಆರ್‌ಸಿಬಿ ಆಟಗಾರರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿರುವ ವಿಡಿಯೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಟ್ವಿಟರ್ ಖಾತೆ, ಫೇಸ್ಬುಕ್ ಖಾತೆಗಳಲ್ಲಿ ಹಾಕಿಕೊಂಡಿದೆ. ವಿಡಿಯೋ ಜೊತೆಗೆ 'ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು' ಎಂದು ಬರೆದುಕೊಂಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯುತ್ತಿರುವ 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಉತ್ತಮ ಸ್ಥಾನದಲ್ಲಿದೆ. ಸದ್ಯ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ಶನಿವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 5 ವಿಕೆಟ್‌ಗಳ ಸೋಲನುಭವಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications