Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 10 ಟೂರ್ನಿಯಿಂದ ಕೆಎಲ್ ರಾಹುಲ್ ಕೂಡಾ ಔಟ್?

ಬೆಂಗಳೂರು, ಮಾರ್ಚ್ 31: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 10ನೇ ಆವೃತ್ತಿಯ ಪ್ರಾರಂಭಕ್ಕೂ ಮುನ್ನವೇ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಉಂಟಾಗಿದೆ. ಭುಜದ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಅವರು ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ.

ಐಪಿಎಲ್ 2017 : ಆರ್ ಸಿಬಿ ವೇಳಾಪಟ್ಟಿ | ಸಂಪೂರ್ಣ ವೇಳಾಪಟ್ಟಿ | ಯಾವ ತಂಡದಲ್ಲಿ ಯಾವ ಆಟಗಾರರು?

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ವೇಳೆ ಭುಜದ ನೋವಿಗೆ ಒಳಗಾಗಿದ್ದ ರಾಹುಲ್ ಅವ್ದರ್ರು ನೋವಿನಲ್ಲೇ ನಾಲ್ಕು ಟೆಸ್ಟ್ ಪಂದ್ಯಗಳನ್ನಾಡಿದ್ದರು. 6 ಅರ್ಧಶತಕ ಸಿಡಿಸಿ ದಾಖಲೆ ಬರೆದರು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್ ಗೆ ತೆರಳುತ್ತಿದ್ದಾರೆ.

KL Rahul ruled out of IPL 2017, to undergo shoulder surgery in England

ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿ ಅವರು ಕೂಡಾ ಭುಜದ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ ಚೇತರಿಕೆ ಕಂಡಿಲ್ಲ. ಹೀಗಾಗಿ ಕೆಲ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಆರ್ ಸಿಬಿಯ ವೇಗಿ ಮಿಚೆಲ್ ಸ್ಟಾರ್ಕ್ ಅವರು ಈಗಾಗಲೇ ಟೂರ್ನಿಯಿಂದ ಹೊರಗುಳಿದಿದ್ದಾರೆ. ಕಾಮೆಂಟೆಟರ್ ಹರ್ಷ ಭೋಗ್ಲೆ ಟ್ವೀಟ್ ನೋಡಿ:


24ವರ್ಷ ವಯಸ್ಸಿನ ಕರ್ನಾಟಕ ಮೂಲದ ಆಟಗಾರ ಕೆಎಲ್ ರಾಹುಲ್ ಅವರು ಐಪಿಎಲ್ 9ರಲ್ಲಿ ಆರ್ ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಎಬಿ ಡಿ ವಿಲಿಯರ್ಸ್ ನಂತರ ಮೂರನೇ ಅತ್ಯಧಿಕ ರನ್ ಅಗ್ಳಿಕೆ ಆಟಗಾರ ಎನಿಸಿಕೊಂಡಿದ್ದರು. 12 ಇನ್ನಿಂಗ್ಸ್ ಗಳಲ್ಲಿ 396ರನ್ ಗಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Story first published: Wednesday, January 3, 2018, 10:04 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+