ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊನೆಯ ಪಂದ್ಯದವರೆಗೂ ಆರ್‌ಸಿಬಿ ಆಟಗಾರನಾಗಿಯೇ ಮುಂದುವರಿಯುವೆ: ವಿರಾಟ್ ಕೊಹ್ಲಿ

RCB skipper Virat Kohli said i will be continue to be RCB player till I play my last ipl game

14ನೇ ಐಪಿಎಲ್ ಆವೃತ್ತಿಯ ಎರಡನೇ ಚರಣದ ಪಂದ್ಯಗಳು ಆರಂಭವಾಗುತ್ತಿದ್ದಂತೆಯೇ ಆರ್‌ಸಿಬಿ ತಂಡದ ಅಭಿಮಾನಿಗಳಿಗೆ ನಾಯಕ ವಿರಾಟ್ ಕೊಹ್ಲಿ ಆಘಾತ ನೀಡಿದ್ದಾರೆ. ಇತ್ತೀಚೆಗಷ್ಟೇ ಭಾರತ ಟಿ20 ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಘೋಷಿಸಿದ ವಿರಾಟ್ ಕೊಹ್ಲಿ ಈಗ ಐಪಿಎಲ್‌ನಲ್ಲಿ ಆರ್‌ಸಿಬಿ ತಮಡದ ನಾಯಕತ್ವದಿಂದಲೂ ಕೆಳಗಿಳಿಯುವ ಘೋಷಣೆ ಮಾಡಿದ್ದಾರೆ. ಆರ್‌ಸಿಬಿ ತಂಡದ ಸಾಮಾಜಿಕ ಜಾಲತಾಣ ಖಾತೆಯಲ್ಲಿ ವಿರಾಟ್ ಕೊಹ್ಲಿ ಈ ವಿಚಾರವಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ತಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುವುದಾಗಿಯೂ ತಿಳಿಸಿದ್ದಾರೆ.

ಆರ್‌ಸಿಬಿ ಮೇಲಿನ ಪ್ರೀತಿ ವ್ಯಕ್ತಪಡಿಸಿದ ಕೊಹ್ಲಿ: ಈ ಸಂದರ್ಭದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದರೂ ನಾನು ಆರ್‌ಸಿಬಿ ತಂಡದ ಆಟಗಾರನಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಅವರು ಆರ್‌ಸಿಬಿ ತಂಡದ ಮೇಲೆ ತಾವು ಹೊಂದಿರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನಲ್ಲಿ ಅಂತಿಮ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿಯೇ ಮುಂದುವರಿಯುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಟೀಮ್ ಇಂಡಿಯಾ ಮೆಂಟರ್ ಆಗಿ ಎಂಎಸ್ ಧೋನಿ ಆಯ್ಕೆ ಸರಿಯೇ?; ತುಟಿ ಬಿಚ್ಚಿದ ವಿರೇಂದ್ರ ಸೆಹ್ವಾಗ್ಟೀಮ್ ಇಂಡಿಯಾ ಮೆಂಟರ್ ಆಗಿ ಎಂಎಸ್ ಧೋನಿ ಆಯ್ಕೆ ಸರಿಯೇ?; ತುಟಿ ಬಿಚ್ಚಿದ ವಿರೇಂದ್ರ ಸೆಹ್ವಾಗ್

ನಾಯಕನಾಗಿ ಕೊನೆಯ ಆವೃತ್ತಿ: ಆರ್‌ಸಿಬಿ ಫ್ರಾಂಚೈಸಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ. ಇದರಲ್ಲಿ ಕೊಹ್ಲಿ ಈ ಆವೃತ್ತಿ ಆರ್‌ಸಿಬಿ ತಂಡದ ನಾಯಕನಾಗಿ ತನ್ನ ಕೊನೆಯ ಆವೃತ್ತಿ ಎಂದಿದ್ದಾರೆ. "ನಾಯಕನಾಗಿ ಇದು ನನ್ನ ಕೊನೆಯ ಆವೃತ್ತಿಯಾಗಿರಲಿದೆ. ನಾನು ಆರ್‌ಸಿಬಿ ತಂಡದ ಆಟಗಾರನಾಗಿ ನನ್ನ ಕೊನೆಯ ಐಪಿಎಲ್ ಪಂದ್ಯದವರೆಗೂ ಮುಂದುವರಿಯುತ್ತೇನೆ. ನನ್ನ ಮೇಲೆ ನಂಬಿಕೆಯಿಟ್ಟ ಹಾಗೂ ಬೆಂಬಲವನ್ನು ವ್ಯಕ್ತಪಡಿಸಿದ ಎಲ್ಲಾ ಆರ್‌ಸಿಬಿ ಅಭಿಮಾನಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಭಾರತ ಟಿ ಟ್ವೆಂಟಿ ನಾಯಕತ್ವಕ್ಕೆ ವಿದಾಯದ ನಂತರ ಆರ್‌ಸಿಬಿ ನಾಯಕತ್ವಕ್ಕೂ ಕೊಹ್ಲಿ ಗುಡ್‌ಬೈ!: ಶರ್ಮಾಭಾರತ ಟಿ ಟ್ವೆಂಟಿ ನಾಯಕತ್ವಕ್ಕೆ ವಿದಾಯದ ನಂತರ ಆರ್‌ಸಿಬಿ ನಾಯಕತ್ವಕ್ಕೂ ಕೊಹ್ಲಿ ಗುಡ್‌ಬೈ!: ಶರ್ಮಾ

2008ರಿಂದಲೂ ಆರ್‌ಸಿಬಿ ಆಟಗಾರ: ಐಪಿಎಲ್ ಆರಂಭಿಕ ಆವೃತ್ತಿ 2008ರಲ್ಲಿ ನಡೆದಿತ್ತು. ಅಂದು ವಿರಾಟ್ ಕೊಹ್ಲಿ ಆರ್‌ಸಿಬಿ ಆಟಗಾರನಾಗಿ ತಮ್ಮ ಐಪಿಎಲ್ ವೃತ್ತಿ ಜೀವನವನ್ನು ಆರಂಭಿಸಿದ್ದರು. ಅಂದಿನಿಂದ ಸತತವಾಗಿ 14ನೇ ಆವೃತ್ತಿಯವರೆಗೂ ವಿರಾಟ್ ಆರ್‌ಸಿಬಿ ತಂಡದ ಆಟಗಾರನಾಗಿ ಮುಂದುವರಿದಿದ್ದಾರೆ ವಿರಾಟ್ ಕೊಹ್ಲಿ. ಈ ಮೂಲಕ ಐಪಿಎಲ್‌ನಲ್ಲಿ ಆರಂಭಿಕ ಆವೃತ್ತಿಯಿಂದಲೂ ಒಂದೇ ತಂಡದ ಪರವಾಗಿ ಆಡಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ.

ಆರ್‌ಸಿಬಿ ನಾಯಕನಾಗಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಜವಾಬ್ಧಾರಿ ವಹಿಸಿಕೊಂಡಿದ್ದು 2011ರ ಆವೃತ್ತಿಯಲ್ಲಿ. ಆದರೆ ಪೂರ್ಣ ಪ್ರಮಾಣದಲ್ಲಿ ಆರ್‌ಸಿಬಿ ತಂಡದ ನಾಯಕನಾಗಿ 2013ರ ಆವೃತ್ತಿಯ ಬಳಿಕ ವಿರಾಟ್ ಕೊಹ್ಲಿಯನ್ನು ಆರ್‌ಸಿಬಿ ನೇಮಿಸಿತ್ತು. ಈವರೆಗೆ ಆರ್‌ಸಿಬಿ ತಂಡವನ್ನು 132 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಮುನ್ನಡೆಸಿದ್ದಾರೆ. ಇದರಲ್ಲಿ 60 ಪಂದ್ಯಗಳಲ್ಲಿ ಆರ್‌ಸಿಬಿ ಗೆದ್ದಿದ್ದರೆ 65 ಪಂದ್ಯಗಲ್ಲಿ ಸೋಲು ಕಂಡಿದೆ. 3 ಪಂದ್ಯಗಳು ಟೈ ಫಲಿತಾಂಶ ಪಡೆದಿದ್ದು ನಾಲ್ಕು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯವಾಗಿದೆ. 48.04ರಷ್ಟು ಗೆಲುವಿನ ಸರಾಸರಿಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ.

ಐಪಿಎಲ್‌ನಲ್ಲಿ ಆಟಗಾರನಾಗಿ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನ ನೀಡಲು ಯಶಸ್ವಿಯಾಗಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿಗೆ ಇದೆ. ಆದರೆ ಆರ್‌ಸಿಬಿ ತಂಡದ ನಾಯಕನಾಗಿ ಹೇಳಿಕೊಳ್ಳುವಂತಾ ಯಶಸ್ಸು ವಿರಾಟ್ ಕೊಹ್ಲಿಗೆ ದಕ್ಕಲಿಲ್ಲ. ಅತ್ಯುತ್ತಮ ಆಟಗಾರರ ತಂಡವನ್ನು ಹೊಂದಿದ್ದರು ಕೂಡ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್‌ಸಿಬಿ ಚಾಂಫಿಯನ್ ಪಟ್ಟಕ್ಕೇರಲು ಸಾಧ್ಯವಾಗಲಿಲ್ಲ. 2016ರಲ್ಲಿ ರನ್ನರ್‌ಅಪ್ ಆಗಿದ್ದು ವಿರಾಟ್ ಕೊಹ್ಲಿ ನಾಯತ್ವದಲ್ಲಿ ಆರ್‌ಸಿಬಿ ಸಾಧಿಸಿದ ಅತ್ಯುತ್ತಮ ಸಾಧನೆಯಾಗಿದೆ.

Story first published: Monday, September 20, 2021, 23:13 [IST]
Other articles published on Sep 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X