For Quick Alerts
ALLOW NOTIFICATIONS  
For Daily Alerts
 

Glenn Maxwell Wedding: ಚೆನ್ನೈ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಆರ್‌ಸಿಬಿ ಸ್ಟಾರ್ ಮ್ಯಾಕ್ಸ್‌ವೆಲ್

RCB star Glenn Maxwell ties the knot with Indian origin girlfriend Vini Raman ahead of IPL 2022

ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮಾರ್ಚ್ 18ರಂದು ಚೆನ್ನೈ ಮೂಲದ ವಿನಿ ರಾಮನ್ ಜೊತೆ ವೈವಾಹಿದ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ಮಾರ್ಚ್ 27ರಂದು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ದೊಡ್ಡಮಟ್ಟದಲ್ಲಿ ವೈರಲ್ ಆಗಿತ್ತು. ಹಾಗೂ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ವಿವಾಹದ ತಮಿಳು ಆಮಂತ್ರಣ ಪತ್ರಿಕೆಯ ಚಿತ್ರವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಇದೀಗ ವಿನಿ ರಾಮನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ವಿವಾಹದ ಚಿತ್ರಗಳನ್ನು ಹಂಚಿಕೊಂಡಿದ್ದು, ವಿವಾಹ ಮಾರ್ಚ್ 18ರ ಶುಕ್ರವಾರದಂದೇ ನಡೆದಿದೆ ಎಂಬುದು ಬಹಿರಂಗವಾಗಿದೆ.

ಇನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ದೀರ್ಘಕಾಲದ ಗೆಳೆಯ ಮತ್ತು ಗೆಳತಿಯರಾಗಿದ್ದು 2020ರ ಫೆಬ್ರವರಿಯಲ್ಲಿಯೇ ನಿಶ್ಚಿತಾರ್ಥ ನಡೆದಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಇವರ ವಿವಾಹ ಸಾಕಷ್ಟು ಬಾರಿ ಮುಂದೂಡಿಕೆಯಾಗಿ ಇದೀಗ ಕೊನೆಗೂ ಇಬ್ಬರೂ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಈ ವಿವಾಹದ ಸಲುವಾಗಿ ಪಾಕಿಸ್ತಾನ ಪ್ರವಾಸಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ಗೈರಾಗಿದ್ದು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭದ ಪಂದ್ಯಗಳಿಗೂ ಅಲಭ್ಯರಾಗಲಿದ್ದಾರೆ ಎನ್ನಲಾಗುತ್ತಿತ್ತು. ಹೌದು, ಗ್ಲೆನ್ ಮ್ಯಾಕ್ಸ್‌ವೆಲ್ ಮಾರ್ಚ್ 27ರಂದು ಮದುವೆಯಾಗುವುದರಿಂದ ಮಾರ್ಚ್ 26ರಿಂದ ಆರಂಭವಾಗಲಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಇದೀಗ ಐಪಿಎಲ್ ಟೂರ್ನಿಯ ಆರಂಭಕ್ಕೆ ಇನ್ನೂ ಒಂದು ವಾರ ಬಾಕಿ ಇರುವಾಗಲೇ ಗ್ಲೆನ್ ಮ್ಯಾಕ್ಸ್‌ವೆಲ್ ವಿವಾಹ ಮುಕ್ತಾಯಗೊಂಡಿರುವುದರಿಂದ ಮ್ಯಾಕ್ಸ್‌ವೆಲ್ ಐಪಿಎಲ್ ಆರಂಭದ ಪಂದ್ಯಗಳಿಗೆ ಲಭ್ಯರಾಗಬಹುದು ಎನ್ನಲಾಗುತ್ತಿದೆ. ಮ್ಯಾಕ್ಸ್‌ವೆಲ್ ಎರಡು ದಿನಗಳ ನಂತರ ಭಾರತಕ್ಕೆ ಹಾರಿದರೂ ಐದು ದಿನಗಳ ಕ್ವಾರಂಟೈನ್ ನಿಯಮವನ್ನು ಅನುಸರಿಸಿ ಮಾರ್ಚ್ 27ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿದು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಬಹುದಾಗಿದೆ.

ಇನ್ನು ಐಪಿಎಲ್ ವಿಚಾರಕ್ಕೆ ಬಂದರೆ ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿಯ ಆಟಗಾರರ ರಿಟೆನ್ಷನ್ ಪ್ರಕ್ರಿಯೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿಯೇ ಉಳಿದುಕೊಂಡಿದ್ದರು. ಹಾಗೂ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕತ್ವದಿಂದ ಕೆಳಗಿಳಿದ ನಂತರ ಗ್ಲೆನ್ ಮ್ಯಾಕ್ಸ್‌ವೆಲ್ ಮುಂದಿನ ನಾಯಕನಾಗಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ, ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್‌ಗೆ ನಾಯಕತ್ವ ನೀಡಲಾಗಿದ್ದು, ಕಳೆದ ಬಾರಿಯ ಟೂರ್ನಿಯಂತೆ ಈ ಬಾರಿಯೂ ಸಹ ಗ್ಲೆನ್ ಮ್ಯಾಕ್ಸ್‌ವೆಲ್ ಓರ್ವ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ.

ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪ್ರವೇಶಿಸುವಲ್ಲಿ ಪ್ರಮಖ ಪಾತ್ರ ನಿರ್ವಹಿಸಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ 15 ಪಂದ್ಯಗಳನ್ನಾಡಿ 513 ರನ್ ಗಳಿಸಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು 2022 ಸ್ಕ್ವಾಡ್: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್ (ನಾಯಕ), ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫಾನ್ ರುದರ್‌ಫೋರ್ಡ್, ಜೇಸನ್ ಬೆಹ್ರೆಂಡ್, ಜೇಸನ್ ಬೆಹ್ರಾಯ್ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಲುವ್ನಿತ್ ಸಿಸೋಡಿಯಾ, ಸಿದ್ಧಾರ್ಥ್ ಕೌಲ್

Story first published: Saturday, March 19, 2022, 16:49 [IST]
Other articles published on Mar 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+