ಒಂದು ಸಿಕ್ಸರ್ ಬಾರಿಸುತ್ತಲೇ ಎಲೈಟ್ ಕ್ಲಬ್ ಸೇರಲಿರುವ ವಿರಾಟ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಸ್ಟಾರ್ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಇವರಿಗೆ ಯುವ ಆಟಗಾರರು ಸಹ ಜಿದ್ದಿನ ಪೈಪೋಟಿ ನೀಡುತ್ತಿದ್ದಾರೆ. ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುವ ಹೆಸರು ವಿರಾಟ್ ಕೊಹ್ಲಿ. ಈ ಆವೃತ್ತಿಯ ಐಪಿಎಲ್‌ನಲ್ಲಿ ವಿರಾಟ್ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಇವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.
19ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ವೇಳೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಬ್ಬರದ ಪ್ರದರ್ಶನ ನೀಡುತ್ತಿದ್ದು, ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದಾರೆ. ಇವರು ಈ ಆವೃತ್ತಿಯ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇವರು ಆಡಿದ 5 ಪಂದ್ಯಗಳಲ್ಲಿ 57ರ ಸರಾಸರಿಯಲ್ಲಿ 228 ರನ್ ಕಲೆ ಹಾಕಿದ್ದಾರೆ. ಈ ವೇಳೆ ಇವರ ಸ್ಟ್ರೈಕ್ ರೇಟ್ 158 ಆಗಿದೆ. ಇವರು 19ನೇ ಆವೃತ್ತಿಯಲ್ಲಿ 25 ಬೌಂಡರಿ, 8 ಸಿಕ್ಸರ್ ಸಿಡಿಸಿದ್ದಾರೆ. ಇವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದೊಡ್ಡ ದಾಖಲೆ ಬರೆಯುವ ಕನಸಿನಲ್ಲಿದ್ದಾರೆ.

ಒಂದು ಸಿಕ್ಸರ್ ಬಾರಿಸುತ್ತಲೇ ದಾಖಲೆ
ಭಾನುವಾರ ಮಧ್ಯಾಹ್ನ 3.30ಕ್ಕೆ ಆರ್‌ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕೆ ಇಳಿಯಲಿದೆ. ಈ ವೇಳೆ ವಿರಾಟ್ ಕೊಹ್ಲಿ ಒಂದು ಸಿಕ್ಸರ್ ಬಾರಿಸಿದ್ದೇ ಆದಲ್ಲಿ ವಿಶೇಷ ಕ್ಲಬ್‌ಗೆ ಎಂಟ್ರಿ ನೀಡಬಹುದು. ಇವರು ಐಪಿಎಲ್ 271 ಪಂದ್ಯಗಳನ್ನು ಆಡಿದ್ದು, 299 ಸಿಕ್ಸರ್ ಸಿಡಿಸಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಒಂದು ಸಿಕ್ಸರ್ ಬಾರಿಸುತ್ತಲೇ ವಿರಾಟ್ ದೊಡ್ಡ ದಾಖಲೆ ಬರೆಯಲಿದ್ದಾರೆ.
ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ವಿರಾಟ್ ಒಂದು ಸಿಕ್ಸರ್ ಬಾರಿಸುತ್ತಲೇ ಐಪಿಎಲ್‌ನಲ್ಲಿ 300ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ದೈತ್ಯ ಆಟಗಾರ ಕ್ರಿಸ್ ಗೇಲ್ ಇದ್ದಾರೆ. ಇವರು ಆಡಿದ 142 ಪಂದ್ಯಗಳಲ್ಲಿ 357 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದಾರೆ. ಇವರು ಆಡಿದ 276 ಪಂದ್ಯಗಳಲ್ಲಿ 310 ಸಿಕ್ಸರ್ ಬಾರಿಸಿದ್ದಾರೆ. ಡೆಲ್ಲಿ ವಿರುದ್ಧ ವಿರಾಟ್ ಒಂದು ಸಿಕ್ಸರ್ ಬಾರಿಸುತ್ತಲೇ ಎಲೈಟ್ ಕ್ಲಬ್‌ಗೆ ಎಂಟ್ರಿ ನೀಡಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications