ಐಪಿಎಲ್ 2023: ಮಿನಿ ಹರಾಜಿನ ಬಳಿಕ ಆರ್‌ಸಿಬಿ ಸಂಪೂರ್ಣ ತಂಡ ಹೇಗಿದೆ? ಇಲ್ಲಿದೆ ಮಾಹಿತಿ

ಐಪಿಎಲ್ 2023ರ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಆರ್‌ಸಿಬಿ ತನ್ನ 25 ಆಟಗಾರರ ಕೋಟಾವನ್ನು ಭರ್ತಿ ಮಾಡಿದೆ. ಈ ಮೂಲಕ ಮುಂದಿನ ಐಪಿಎಲ್ ಆವೃತ್ತಿಗೆ ಸಂಪೂರ್ಣವಾಗಿ ಸಿದ್ಧವಾಗಿದೆ. ತನ್ನಲ್ಲಿ ಉಳಿದಿದ್ದ 8.75 ಕೋಟಿ ಮೊತ್ತವನ್ನು ಆರ್‌ಸಿಬಿ ಚಾಣಾಕ್ಷತನದಿಂದ ಖರ್ಚು ಮಾಡಿದ್ದು ಪ್ರತಿಭಾನ್ವಿತ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದೆ.
ಕಡಿಮೆ ಮೊತ್ತದ ಪರ್ಸ್ ಹೊಂದಿದ್ದ ಕಾರಣ ಆರ್‌ಸಿಬಿ ದೊಡ್ಡ ಆಟಗಾರರನ್ನು ಸೇರ್ಪಡೆಗೊಳಿಸುವ ಯಾವುದೇ ನಿರೀಕ್ಷೆಯಿರಲಿಲ್ಲ. ಹಾಗಿದ್ದರೂ ಇಂಗ್ಲೆಂಡ್‌ನ ಸ್ಟಾರ್ ವೇಗಿ ರೀಸ್ ಟೋಪ್ಲೆ ಹಾಗೂ ವಿಲ್ ಜಾಕ್ಸ್ ಅವರನ್ನು ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ. ಉಳಿದಂತೆ ದೇಶೀಯ ಕ್ರಿಕೆಟ್‌ನ ಪ್ರತಿಭಾವಂತ ಆಟಗಾರರಿಗೆ ಮಣೆ ಹಾಕಿದೆ.

ಆರ್‌ಸಿಬಿ ಪಾಲಾದ ಆಟಗಾರರು ಯಾರ್ಯಾರು?
ಆರ್‌ಸಿಬಿ ಈ ಹರಾಜಿನಲ್ಲಿ 7 ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಈ ಮೂಲಕ 25 ಆಟಗಾರರ ಸ್ಥಾನವನ್ನು ಭರ್ತಿಗೊಳಿಸಿದೆ. ಇಬ್ಬರು ವಿದೇಶಿ ಆಟಗಾರರು ಆರ್‌ಸಿಬಿ ಪಾಲಾದರೆ ಉಳಿದ ಐವರು ದೇಶೀಯ ಆಟಗಾರರು ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಆರ್‌ಸಿಬಿ ತಂಡಕ್ಕೆ ಸೇರ್ಪಡೆಯಾಗಿರುವ ಆಟಗಾರರ ಪಟ್ಟಿ ಇಲ್ಲಿದೆ: ರೀಸ್ ಟೋಪ್ಲಿ (1.9 ಕೋಟಿ), ಹಿಮಾಂಶು ಶರ್ಮಾ (20 ಲಕ್ಷ), ವಿಲ್ ಜಾಕ್ಸ್ (3.2 ಕೋಟಿ), ಮನೋಜ್ ಭಾಂಡಗೆ (20 ಲಕ್ಷ), ರಾಜನ್ ಕುಮಾರ್ (70 ಲಕ್ಷ), ಅವಿನಾಶ್ ಸಿಂಗ್ (60 ಲಕ್ಷ), ಸೋನು ಯಾದವ್(20 ಲಕ್ಷ)

ರೀಟೈನ್ ಮಾಡಿಕೊಂಡಿರುವ ಆಟಗಾರರು
ಈ ಬಾರಿ ಹರಾಜಿಗೂ ಮುನ್ನ ಯಾವುದೇ ಪ್ರಮುಖ ಆಟಗಾರರನ್ನು ಬಿಡುಗಡೆಗೊಳಿಸಿರಲಿಲ್ಲ. ಆರ್‌ಸಿಬಿಯ ಮೊದಲ ಆದ್ಯತೆಯ ಆಡುವ XI ಬಳಗವನ್ನು ಉಳಿಸಿಕೊಂಡೇ ಹರಾಜಿನಲ್ಲಿ ಭಾಗಿಯಾಗಿತ್ತು.
ರೀಟೈನ್ ಮಾಡಿಕೊಂಡಿದ್ದ ಆಟಗಾರರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ರಜತ್ ಪಾಟಿದಾರ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಶಹಬಾಜ್ ಅಹಮದ್, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜೋಶ್ ಹೇಜಲ್‌ವುಡ್, ಕರಣ್ ಶರ್ಮಾ.

ಆರ್‌ಸಿಬಿ ಸಂಪೂರ್ಣ ಸ್ಕ್ವಾಡ್ ಹೀಗಿದೆ
ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ರಜತ್ ಪಾಟಿದಾರ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಶಹಬಾಜ್ ಅಹಮದ್, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜೋಶ್ ಹೇಜಲ್‌ವುಡ್, ಕರಣ್ ಶರ್ಮಾ, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications