IPL 2025 RCB: ಬಣ್ಣ ಬದಲಿಸುತ್ತಾ ಆರ್‌ಸಿಬಿ
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಐಪಿಎಲ್ 2025ರ ಉದ್ಘಾಟನಾ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಧರಿಸಲಿರುವ ಹೊಸ ಜೆರ್ಸಿಯ ವಿನ್ಯಾಸವನ್ನು ಅನಾವರಣಗೊಳಿಸಲಾಗುತ್ತಿದೆ. ಈ ಬಗ್ಗೆ ಆರ್‌ಸಿಬಿ ಫ್ರಾಂಚೈಸಿ ಮಾಹಿತಿ ಹಂಚಿಕೊಂಡಿದೆ.
ಐಪಿಎಲ್ 2025ರ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ರಜತ್ ಪಾಟಿದಾರ್ ಅವರನ್ನು ಹೊಸ ನಾಯಕನಾಗಿ ಆಯ್ಕೆ ಮಾಡಿದೆ. ಇದೀಗ ನೂತನ ಜೆರ್ಸಿ ಧರಿಸಿರುವ ನಾಯಕ ರಜತ್ ಪಾಟಿದಾರ್ ಅವರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಹಂಚಿಕೊಂಡಿದೆ. ಇದರೊಂದಿಗೆ ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೂ ಮುನ್ನವೇ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

ಐಪಿಎಲ್ 2025ರಲ್ಲಿ ಆರ್‌ಸಿಬಿ ಆಟಗಾರರು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಆಟಗಾರರು ಕಡು ನೀಲಿ ಮತ್ತು ಕೆಂಪು ಬಣ್ಣ ಮಿಶ್ರಿತ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಳೆಯ ಜೆರ್ಸಿ ಕಲರ್ ಬ್ಲ್ಯಾಕ್-ರೆಡ್‌ಗೆ ಮರಳಿದೆ. ಹೊಸ ಜೆರ್ಸಿಯ ವಿನ್ಯಾಸ ಆರ್‌ಸಿಬಿ ಅಭಿಮಾನಿಗಳ ಮೆಚ್ಚಿಗೆ ಗಳಿಸಿದೆ.
ಕೊಹ್ಲಿ 18 ವರ್ಷ
ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‌ಸಿಬಿ ಜೊತೆ 18 ವರ್ಷಗಳ ಸುದೀರ್ಘ ಪ್ರಯಾಣವನ್ನು ಪೂರ್ಣಗೊಳಿಸಿದ್ದಾರೆ. 2008ರ ಐಪಿಎಲ್‌ನ ಮೊದಲ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿಯನ್ನು ಆರ್‌ಸಿಬಿ 12 ಲಕ್ಷ ರೂ.ಗೆ ಖರೀದಿಸಿತು. ಅಂದಿನಿಂದ ಅವರು ಆರ್‌ಸಿಬಿ ಜೊತೆ ಸಂಬಂಧ ಹೊಂದಿದ್ದಾರೆ. ಇಂದು ಅವರ ವೇತನ 21 ಕೋಟಿ ರೂ.ಗೆ ಏರಿಕೆಯಾಗಿದೆ. ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದು, 252 ಪಂದ್ಯಗಳಲ್ಲಿ 8004 ರನ್ ಗಳಿಸಿದ್ದಾರೆ. ಈ ವೇಳೆ ಅವರು 8 ಶತಕಗಳು ಮತ್ತು 55 ಅರ್ಧಶತಕಗಳನ್ನು ಗಳಿಸಿದ್ದಾರೆ.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲ್ ಸಾಲ್ಟ್ (ವಿಕೆಟ್‌ಕೀಪರ್), ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಜೋಶ್ ಹೇಜಲ್ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications