ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸಿಎಸ್‌ಕೆ vs ಆರ್‌ಸಿಬಿ: ದೊಡ್ಡ ಮೈಲಿಗಲ್ಲುಗಳ ಮೇಲೆ ಕೊಹ್ಲಿ, ಎಬಿಡಿ, ಧೋನಿ, ರೈನಾ ಕಣ್ಣು

RCB vs CSK, Match 35, Stats and Records Preview: Kohli, AB eye on big records

ಐಪಿಎಲ್ 14ನೇ ಆವೃತ್ತಿಯಲ್ಲಿ ಶುಕ್ರವಾರ ಬೃಹತ್ ಕಾದಾಟ ನಡೆಯಲಿದೆ. ಸಾಕಷ್ಟು ಕುತೂಹಲಕಾರಿ ಮುಖಾಮುಖಿಯಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಕದನ ನಡೆಯಲಿದ್ದು ಅಭಿಮಾನಿಗಳು ಈ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಈ ಎರಡು ತಂಡಗಳ ನಡುವೆ ಸಾಕಷ್ಟು ರೋಚಕ ಸ್ಪರ್ಧೆ ನಡೆದಿದ್ದು ಅಂಥಾದ್ದೇ ಮತ್ತೊಂದು ಜಿದ್ದಾಜಿದ್ದಿನ ಮುಖಾಮುಖಿಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಈ ಪಂದ್ಯದಲ್ಲಿ ಎರಡು ತಂಡಗಳ ಆಟಗಾರರು ಕೂಡ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಂಡ ಮೇಲುಗೈ ಸಾಧಿಸಲು ಎರಡು ತಂಡಗಳ ಆಟಗಾರರು ಕೂಡ ಕಠಿಣ ಸವಾಲೊಡ್ಡಲಿದ್ದಾರೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರುವ ಅವಕಾಶವನ್ನು ಹೊಂದಿದೆ. ಸದ್ಯ 14 ಅಂಕಗಳನ್ನು ಹೊಂದಿರುವವ ಡೆಲ್ಲಿ ಅಂಕಪಟ್ಟಿಯ್ಲಲಿ ಮೊದಲ ಸ್ಥಾನದಲ್ಲಿದೆ. ಚೆನ್ನೈ ಬಳಿ 12 ಅಂಕಗಳಿದೆ. ಮತ್ತೊಂದೆಡೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದ್ದು ಈ ಪಂದ್ಯವನ್ನು ಗೆದ್ದರೆ 12 ಅಂಕಗಳನ್ನು ತನ್ನ ಖಾತೆಗೆ ಸೇರಿಸಿಕೊಳ್ಳಲಿದೆ. ಆದರೆ ಅಂಕಪಟ್ಟಿಯಲ್ಲಿ ಆರ್‌ಸಿಬಿ 3ನೇ ಸ್ಥಾನದಲ್ಲಿಯೇ ಮುಂದುವರಿಯಲಿದೆ. ಯಾಕೆಂದರೆ ರನ್‌ರೇಟ್‌ನಲ್ಲಿ ಆರ್‌ಸಿಬಿ ಸಿಎಸ್‌ಕೆಗಿಂತ ಬಹಳ ಹಿಂದಿದೆ.

ಕೊಹ್ಲಿ, ಗೇಲ್, ಎಬಿಡಿಗಿಂತ ಈತ ಐಪಿಎಲ್‌ನಲ್ಲಿ ಡೇಂಜರಸ್ ಆಟಗಾರ ಎಂದ ಗೌತಮ್ ಗಂಭೀರ್ಕೊಹ್ಲಿ, ಗೇಲ್, ಎಬಿಡಿಗಿಂತ ಈತ ಐಪಿಎಲ್‌ನಲ್ಲಿ ಡೇಂಜರಸ್ ಆಟಗಾರ ಎಂದ ಗೌತಮ್ ಗಂಭೀರ್

ಸಿಎಸ್‌ಕೆ vs ಆರ್‌ಸಿಬಿ, ಹೆಡ್‌ ಟು ಹೆಡ್ ಅಂಕಿಅಂಶ: ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದೆ. ಈ ಮುಖಾಮುಖಿಯಲ್ಲಿ ಎಂಎಸ್ ಧೋನಿ ನೇತೃತ್ವದ ಸಿಎಸ್‌ಕೆ ಸಂಪೂರ್ಣ ಮೇಲುಗೈ ಸಾಧಿಸಿದೆ. ವಿರಾಟ್ ಕೊಹ್ಲಿ ತಂಡದ ವಿರುದ್ಧ 17 ಪಂದ್ಯಗಳಲ್ಲಿ ಸಿಎಸ್‌ಕೆ ಗೆದ್ದಿದ್ದು ಕೊಹ್ಲಿ ಪಡೆ ಗೆದ್ದಿರುವುದು ಕೇವಲ 9 ಬಾರಿ. ಮಳೆಯಿಂದಾಗಿ ಒಂದು ಪಂದ್ಯ ಫಲಿತಾಂಶ ಕಾಣದೆ ರದ್ದಾಗಿತ್ತು.

ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

ಮಿಸ್ಟರ್ ಕೂಲ್ vs ಫೈರ್ ಕಿಂಗ್: ಮೈನಸ್ ಮತ್ತು ಪ್ಲಸ್ ಪಾಯಿಂಟ್? | Oneindia Kannada

ಸಂಭಾವ್ಯ ದಾಖಲೆಗಳು:
*ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್ ಎಂಬ ದಾಖಲೆ ಎಂಎಸ್ ಧೋನಿ ಬಳಿಯೇ ಇತ್ತು. ಆದರೆ ದಿನೇಶ್ ಕಾರ್ತಿಕ್ ಇದನ್ನು ಹಿಂದಿದ್ದಾರೆ. ಈಗ ದಿನೇಶ್ ಕಾರ್ತಿಕ್‌ರನ್ನು ಮತ್ತೊಮ್ಮೆ ಹಿಂದಿಕ್ಕಿ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್ ಎನಿಸಿಕೊಳ್ಳುವ ಅವಕಾಶ ಧೋನಿಗೆ ಇದೆ. ಧೋನಿ 114 ಕ್ಯಾಚ್ ಪಡೆದಿದ್ದರೆ ದಿನೇಶ್ ಕಾರ್ತಿಕ್ 115 ಕ್ಯಾಚ್ ಪಡೆದುಕೊಂಡಿದ್ದಾರೆ.
* ವಿರಾಟ್ ಕೊಹ್ಲಿ ಸದ್ಯ ಅಂತಾ ಹೇಳಿಕೊಳ್ಳುವ ಫಾರ್ಮ್‌ನಲ್ಲಿಲ್ಲ. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಲು ಸಾಧ್ಯವಾಗಿ 66 ರನ್‌ಗಳನ್ನು ಗಳಿಸಿದರೆ ಟಿ20 ಕ್ರಿಕೆಟ್‌ನಲ್ಲಿ ಮಹತ್ವದ ದಾಖಲೆ ಬರೆಯಲಿದ್ದಾರೆ. 10,000 ಟಿ20 ರನ್‌ಗಳನ್ನು ಗಳಿಸಿದ ಪ್ರಥಮ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗುವ ಅವಕಾಶವಿದೆ. ಈ ಸಾಧನೆ ಮಾಡಿದ ವಿಶ್ವದ 5 ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ ಕೊಹ್ಲಿ.
*ವಿರಾಟ್ ಕೊಹ್ಲಿಯ ಮುಂದೆ ಒಂದು ಅಸಾಧ್ಯ ಗುರಿ ಕೂಡ ಇದೆ. ಕೊಹ್ಲಿ ಈ ಪಂದ್ಯದಲ್ಲಿ 105 ರನ್‌ಗಳನ್ನು ಗಳಿಸಲು ಸಾಧ್ಯವಾದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 1000 ರನ್‌ಗಳನ್ನು ಗಳಿಸಿದ ಆಟಗಾರ ಎನಿಸಲಿದ್ದಾರೆ.
*ಆರ್‌ಸಿಬಿ ಪ್ರಮುಖ ಬ್ಯಾಟ್ಸ್‌ಮನ್ ಎನಿ ಡಿವಲಿಯರ್ಸ್ ಕಳೆದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಆದರೆ ಈ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿ ಎಬಿಡಿ 5 ಸಿಕ್ಸರ್ ಸಿಡಿಸಿದರೆ ಐಪಿಎಲ್‌ನಲ್ಲಿ 250 ಸಿಕ್ಸರ್ ಸಿಡಿಸಿದ ಆಟಗಾರ ಎನಿಸಲಿದ್ದಾರೆ. ಈ ಮೂಲಕ ಕ್ರಿಸ್‌ಗೇಲ್ ಜೊತೆಗೆ ಈ ಸಾಧನೆ ಮಾಡಿದ ಎರಡನೇ ಆಟಗಾರ ಎನಿಸಲಿದ್ದಾರೆ.
*ಕಳೆದ ಪಂದ್ಯದಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲವಾಗಿದ್ದ ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಮುಂದೆಯೂ ಕಠಿಣ ಗುರಿಯೊಂದಿದೆ. ಸಿಎಸ್‌ಕೆ ವಿರುದ್ಧ 5 ವಿಕೆಟ್ ಪಡೆಯಲಿ ಸಾಧ್ಯದವಾದರೆ ಸಿರಾಜ್ ಐಪಿಎಲ್‌ನಲ್ಲಿ 50 ವಿಕೆಟ್ ಪಡೆದ ಆಟಗಾರ ಎನಿಸಲಿದ್ದಾರೆ.
*ಐಪಿಎಲ್‌ನಲ್ಲಿ ಅತ್ಯುತ್ತಮ ದಾಖಲೆ ಹೊಂದಿರುವ ಸುರೇಶ್ ರೈನಾ ಮಿಸ್ಟರ್ ಐಪಿಎಲ್ ಎಂದೇ ಖ್ಯಾತರಾಗಿದ್ದಾರೆ. ಈ ಪಂದ್ಯದಲ್ಲಿ ರೈನಾ ಕೇವಲ 5 ರನ್‌ಗಳಿಸಲು ಸಾಧ್ಯವಾದರೆ ಐಪಿಎಲ್‌ನಲ್ಲಿ 5500 ರನ್‌ಗಳಿಸಿದ ಆಟಗಾರ ಎನಿಸಲಿದ್ದಾರೆ.
*ಆಲ್‌ರೌಂಡರ್ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಎರಡು ಸಿಕ್ಸರ್ ಸಿಡಿಸಲು ಸಾಧ್ಯವಾದರೆ ಐಪಿಎಲ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಗೆ ಜಡ್ಡು ಸೇರಿಕೊಳ್ಳಲಿದ್ದಾರೆ.
*ಚೆನ್ನೈ ಸೂಪೊರ್ ಕಿಂಗ್ಸ್ ತಂಡದ ಅನುಭವಿ ಆಟಗಾರ ಅಂಬಾಟಿ ರಾಯುಡು ಈ ಪಂದ್ಯದಲ್ಲಿ 5 ಸಿಕ್ಸರ್ ಸಿಡಿಸಲು ಸಾಧ್ಯವಾದರೆ ಟಿ20 ಮಾದರಿಯಲ್ಲಿ 200 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದಂತಾಗುತ್ತದೆ.

Story first published: Friday, September 24, 2021, 14:51 [IST]
Other articles published on Sep 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X