Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs CSK: 2ನೇ ಇನ್ನಿಂಗ್ಸ್‌ನಲ್ಲಿ ಬ್ಯಾಟರ್‌ಗಳನ್ನು ಹಿಡಿಯುವುದು ಕಷ್ಟ: ಟಾಸ್ ಸೋತ ಧೋನಿ ಹೇಳಿಕೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಬಹುನಿರೀಕ್ಷಿತ ಪಂದ್ಯದಲ್ಲಿ ಆರ್‌ಸಿಬಿ ತಂಡ ಟಾಸ್ ಗೆದ್ದಿದ್ದು ನಿರೀಕ್ಷೆಯಂತೆಯೇ ಆರಂಭದಲ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತ ಬಳಿಕ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಟಾಸ್ ಸೋತ ಬಗ್ಗೆ ಅಸಮಾಧಾನ ಇರುವುದು ಅವರ ಮಾತಿನಲ್ಲೇ ವ್ಯಕ್ತವಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿ ರನ್ ರಕ್ಷಣೆ ಮಾಡುವುದು ಬಹಳ ಕಠಿಣ. ಹೀಗಾಗಿ ಇಲ್ಲಿ ಟಾಸ್ ದೊಡ್ಡ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಎಂಎಸ್ ಧೊನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಎರಡನೇ ಪಾಳಯದಲ್ಲಿ ಬೌಲಿಂಗ್ ನಡೆಸಿ ರನ್ ರಕ್ಷಿಸಿಕೊಳ್ಳುವುದು ಬಹಳ ಕಠಿಣ ಎಂದಿದ್ದಾರೆ.

RCB vs CSK: MS Dhoni reaction after lost toss said Hard to contain batters later

"ಇಲ್ಲಿ ರನ್ ರಕ್ಷಣೆ ಮಾಡಿಕೊಳ್ಳುವುದು ಬಹಳ ಕಠಿಣವಾಗಿರುವ ಕಾರಣ ಟಾಸ್ ಬಹಳ ನಿರ್ಣಾಯಕ ಪಾತ್ರವಹಿಸುತ್ತದೆ. ಇಬ್ಬನಿ ಕೂಡ ಇರುವ ಕಾರಣ ಒದಲ ಇನ್ನಿಂಗ್ಸ್‌ನಲ್ಲಿ ಎಷ್ಟು ಸ್ಕೋರ್ ಉತ್ತಮ ಮೊತ್ತವಾಗಬಹುದು ಎಂಬುದನ್ನು ಅಂದಾಜಿಸಲು ಕಷ್ಟಯವಾಗುತ್ತದೆ. ಆದರೆ ನಾವು ಆ ಬಗ್ಗೆ ಹೆಚ್ಚಾಗೊ ಯೋಚನೆ ಮಾಡಲು ಇಷ್ಟ ಪಡುವುದಿಲ್ಲ. ಉತ್ತಮ ಆರಂಭವನ್ನು ಪಡೆದು ಯಶಸ್ಸು ಸಾಧಿಸುವುದು ನಮ್ಮ ಗುರಿ" ಎಂದಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ.

ಆರಂಭಿಕ ಯಶಸ್ಸು ನೀಡಿದ ಸಿರಾಜ್: ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಯ್ ಆಯ್ಕೆ ಮಾಡಿದ ಆರ್‌ಸಿಬಿ ಪರವಾಗಿ ಮೊಹ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದಾರೆ. ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರನ್ನು ಮೂರು ರನ್‌ಗಳಿಗೆ ಕಟ್ಟಿ ಔಟ್ ಮಾಡುವಲ್ಲಿ ಯಶಸ್ವಿಯಾದರು. ವೇಯ್ನ್ ಪಾರ್ನೆಲ್ ಹಿಡಿದ ಅದ್ಭುತ ಕ್ಯಾಚ್‌ಗೆ ಋತು ವಿಕೆಟ್ ಕಳೆದುಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್
ಬೆಂಚ್: ಅನುಜ್ ರಾವತ್, ಡೇವಿಡ್ ವಿಲ್ಲಿ, ಆಕಾಶ್ ದೀಪ್, ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್, ಸೋನು ಯಾದವ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಾನ, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್

ಬೆಂಚ್: ಅಂಬಾಟಿ ರಾಯುಡು, ಮಿಚೆಲ್ ಸ್ಯಾಂಟ್ನರ್, ಶೇಕ್ ರಶೀದ್, ಸುಭ್ರಾಂಶು ಸೇನಾಪತಿ, ಆರ್ ಎಸ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು

Story first published: Monday, April 17, 2023, 20:10 [IST]
Other articles published on Apr 17, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+