For Quick Alerts
ALLOW NOTIFICATIONS  
For Daily Alerts
 

RCB vs CSK: ಪಂದ್ಯದ ಸಮಯ, ನೇರ ಪ್ರಸಾರ, ಪ್ಲೇಯಿಂಗ್ ಇಲೆವೆನ್ ಬಗ್ಗೆ ಸಂಪೂರ್ಣ ಮಾಹಿತಿ

19ನೇ ಆವೃತ್ತಿ ಐಪಿಎಲ್‌ನ ಹೈವೋಲ್ಟೇಜ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ತಂಡಗಳು ಕಾದಾಟ ನಡೆಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ. ಹಾಲಿ ಚಾಂಪಿಯನ್ ಆರ್‌ಸಿಬಿ ಭರ್ಜರಿ ಫಾರ್ಮ್‌ನಲ್ಲಿದ್ದು, ಎರಡನೇ ಪ್ರಶಸ್ತಿಯ ಕನಸಿನಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್‌ ಲೀಗ್‌ನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್‌ ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿದೆ. ಚೆನ್ನೈ ತಂಡದ ಮುಂದೆ ಸಾಲು ಸಾಲು ಸವಾಲುಗಳಿದ್ದು, ಈ ಸವಾಲುಗಳನ್ನು ಹೇಗೆ ಮೆಟ್ಟಿನಿಲ್ಲುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

RCB vs CSK

ಆರ್‌ಸಿಬಿ ಉದ್ಘಾಟನಾ ಪಂದ್ಯದಲ್ಲಿ ಮನಮೋಹಕ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಜೋಶ್ ಹ್ಯಾಜಲ್‌ವುಡ್ ಅನುಪಸ್ಥಿತಿಯಲ್ಲಿ ತಂಡವನ್ನು ಸೇರಿಕೊಂಡ ಜೇಕಬ್ ಡಫಿ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿದ್ದಾರೆ. ಇವರು ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲೂ ಇದೇ ರೀತಿಯ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಇನ್ನು ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಇನ್ನೊಂದು ವಿಕೆಟ್‌ ಪಡೆಯವಲ್ಲಿ ಸಫಲರಾದರೆ ಐಪಿಎಲ್‌ನಲ್ಲಿ 200 ವಿಕೆಟ್‌ ಪಡೆದ ಸಾಧನೆಯನ್ನು ಮಾಡಲಿದ್ದಾರೆ. ಟಾಪ್ ಆರ್ಡರ್ ಬ್ಯಾಟರ್‌ಗಳಾದ ಫಿಲ್ ಸಾಲ್ಟ್‌, ವಿರಾಟ್‌ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಪಿಚ್ ವರದಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬ್ಯಾಟರ್‌ಗಳ ಸ್ವರ್ಗ ಎಂದೇ ಕರೆಯಲಾಗುತ್ತದೆ. ಈ ಮೈದಾನದಲ್ಲಿ ಹಿಂದಿನ ಆರು ಐಪಿಎಲ್‌ ಪಂದ್ಯಗಳಲ್ಲಿ ಗುರಿಯನ್ನು ಬೆನ್ನಟ್ಟಿದ ತಂಡ 4 ಬಾರಿ ಜಯ ಸಾಧಿಸಿದೆ. ಅಷ್ಟೇ ಅಲ್ಲದೆ ಈ ವೇಳೆ 200ಕ್ಕೂ ಹೆಚ್ಚು ರನ್‌ಗಳು ದಾಖಲಾಗಿದ್ದವು. ಆದ್ದರಿಂದ ಭಾನುವಾರವೂ ಮತ್ತೊಂದು ಹೈ-ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದು. ಭಾನುವಾರ ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

RCB vs CSK: ಸಿಎಸ್‌ಕೆಗೆ ಹ್ಯಾಟ್ರಿಕ್‌ ಸೋಲಿನ ಭೀತಿ: ಎರಡನೇ ಗೆಲುವಿನ ಕನಸಿನಲ್ಲಿ ಆರ್‌ಸಿಬಿ RCB vs CSK: ಸಿಎಸ್‌ಕೆಗೆ ಹ್ಯಾಟ್ರಿಕ್‌ ಸೋಲಿನ ಭೀತಿ: ಎರಡನೇ ಗೆಲುವಿನ ಕನಸಿನಲ್ಲಿ ಆರ್‌ಸಿಬಿ

ಐಪಿಎಲ್‌ನಲ್ಲಿ ಎಷ್ಟು ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ?

ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳು ಐಪಿಎಲ್‌ನಲ್ಲಿ ಒಟ್ಟು 35 ಬಾರಿ ಮುಖಾಮುಖಿಯಾಗಿದ್ದು, 13ರಲ್ಲಿ ಆರ್‌ಸಿಬಿ ಗೆಲುವು ದಾಖಲಿಸಿದ್ದು, ಚೆನ್ನೈ 21 ಪಂದ್ಯಗಳನ್ನು ಗೆದ್ದು ಬೀಗಿದೆ.

ಚೆನ್ನೈ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು?

ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ, ಸುಯಶ್ ಶರ್ಮಾ.

ಯಾವೆಲ್ಲಾ ಆಟಗಾರರಿಗೆ ಚೆನ್ನೈ ಸ್ಥಾನ ನೀಡಬಹುದು?

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ಮ್ಯಾಟ್ ಹೆನ್ರಿ, ನೂರ್ ಅಹ್ಮದ್/ಗುರ್ಜಪ್ನೀತ್ ಸಿಂಗ್, ಅಂಶುಲ್ ಕಾಂಬೋಜ್/ಜೇಮಿ ಓವರ್ಟನ್, ಖಲೀಲ್ ಅಹ್ಮದ್, ರಾಹುಲ್ ಚಹರ್/ಅಕೀಲ್ ಹೊಸೈನ್.

RCB vs CSK: ಚೆನ್ನೈ ವಿರುದ್ಧ ಹೇಗಿದೆ ವಿರಾಟ್‌ ಕೊಹ್ಲಿ ದಾಖಲೆ? RCB vs CSK: ಚೆನ್ನೈ ವಿರುದ್ಧ ಹೇಗಿದೆ ವಿರಾಟ್‌ ಕೊಹ್ಲಿ ದಾಖಲೆ?

ಪಂದ್ಯವನ್ನು ವೀಕ್ಷಿಸುವುದು ಎಲ್ಲಿ?

19ನೇ ಆವೃತ್ತಿ ಐಪಿಎಲ್‌ನ 11ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ ನೆಟ್‌ ವರ್ಕ್‌ನಲ್ಲಿ ನೋಡಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ ಸ್ಟಾರ್‌ನಲ್ಲೂ ವೀಕ್ಷಿಸಬಹುದಾಗಿದೆ.

ಆರ್‌ಸಿಬಿ, ಸಿಎಸ್‌ಕೆ ನಡುವಣ ಪಂದ್ಯ ನಡೆಯುವುದು ಯಾವಾಗ?

ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಣ ಬಿಗ್ ಫೈಟ್ ಚಿನ್ನಸ್ವಾಮಿ ಮೈದಾನದಲ್ಲಿ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.

Story first published: Sunday, April 5, 2026, 1:25 [IST]
Other articles published on Apr 5, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+