
ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಹ್ಯಾಟ್ರಿಕ್ ರುಚಿ ಕಂಡಿದೆ. ಇದೀಗ ಮತ್ತೊಂದು ಪಂದ್ಯಕ್ಕೆ ಫಾಫ್ ಡು ಪ್ಲೆಸಿಸ್ ಪಡೆ ಸಜ್ಜಾಗಿದ್ದು ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಆರ್‌ಸಿಬಿ ಹಾಗೂ ಸಿಎಸ್‌ಕೆ ಸೆಣೆಸಾಟ ಯಾವಾಗಲೂ ಸಾಕಷ್ಟು ಪೈಪೋಟಿಯಿಂದ ಕೂಡಿರುತ್ತಿದ್ದು ಅಭಿಮಾನಿಗಳು ಈ ಕುತೂಹಲಕಾರಿ ಪಂದ್ಯಕ್ಕಾಗಿ ಕಾದು ಕುಳಿತಿದ್ದಾರೆ.
ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಸತತ ಸೋಲುಗಳನ್ನು ಅನುಭವಿಸಿದೆ. ಟೂರ್ನಿಯಲ್ಲಿ ಈವರೆಗೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ರವೀಂದ್ರ ಜಡೇಜಾ ನೇತೃತ್ವದ ತಂಡ ಇನ್ನೂ ಗೆಲುವಿನ ಮುಖ ನೋಡಲು ಸಾಧ್ಯವಾಗಿಲ್ಲ. ಹೀಗಾಗಿ ಸಿಎಸ್‌ಕೆ ತಂಡಕ್ಕೆ ಮಂಗಳವಾರ ಆರ್‌ಸಿಬಿ ವಿರುದ್ಧ ನಡೆಯಲಿರುವ ಪಂದ್ಯ ಬಹಳ ಮಹತ್ವದ್ದಾಗಿದ್ದು ಗೆಲುವಿನ ಅನಿವಾರ್ಯತೆಯಿದೆ.
ಈ ಕುತೂಹಲಕಾರಿ ಪಂದ್ಯದ ಕೆಲ ಪ್ರಮುಖ ಮಾಹಿತಿಗಳು ಇಲ್ಲಿದೆ.
ಸ್ಕ್ವಾಡ್‌ಗಳು: ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 12 ರಂದು ಮಂಗಳವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಡಿವೈ ಪಾಟೀಲ್ ಕ್ರೀಡಾಂಗಣ ಬ್ಯಾಟಿಂಗ್ ವಿಭಾಗಕ್ಕೆ ಹೆಚ್ಚಿನ ನೆರವು ದೊರೆಯಲಿದೆ. ಇಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಶರಣಾಗಿತ್ತು. ಆರಂಭದಲ್ಲಿ ವೇಗಿಗಳು ಉತ್ತಮ ನೆರವು ಪಡೆಯಲಿದ್ದು ನಂತರ ಸ್ಪಿನ್ನರ್‌ಗಳು ಕೂಡ ಮಿಂಚುವ ನಿರೀಕ್ಷೆಯಿದೆ. ಪಂದ್ಯ ಮುಂದುವರಿಯುತ್ತಿದ್ದಂತೆಯೇ ಬ್ಯಾಟರ್‌ಗಳಿಗೆ ನೆರವು ದೊರೆಯಲಿದೆ.
ಸಿಎಸ್‌ಕೆ ಸಂಭಾವ್ಯ ಪ್ಲೇಯಿಂಗ್ XI: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಶಿವಂ ದುಬೆ, ಎಂಎಸ್ ಧೋನಿ (ವಿಕೆಟ್ ಕೀಪರ್), ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್, ಕ್ರಿಸ್ ಜೋರ್ಡಾನ್, ಮುಖೇಶ್ ಚೌಧರಿ
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಡೇವಿಡ್ ವಿಲ್ಲಿ, ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್