RCB vs DC IPL 2023: ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಬ್ಬರಿಸಲಿರುವ ಮೂವರು ಸಂಭಾವ್ಯ ಬ್ಯಾಟ್ಸ್‌ಮನ್‌ಗಳು
ಶನಿವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಐಪಿಎಲ್‌ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ನಿರ್ಣಾಯಕ ಗೆಲುವಿಗಾಗಿ ಪೈಪೋಟಿ ನಡೆಸಲಿವೆ. ಈ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
ಮೂರು ಬಾರಿಯ ರನ್ನರ್-ಅಪ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಈ ಬಾರಿ ಉತ್ತಮವಾಗಿ ಪ್ರಾರಂಭಿಸಿತು. ಆದರೆ, ನಂತರದ ಎರಡು ಪಂದ್ಯಗಳಲ್ಲಿ ಸತತವಾಗಿ ಸೋತು ನಿರಾಸೆ ಅನುಭವಿಸಿದೆ. ಫಾಫ್ ಡು ಪ್ಲೆಸಿಸ್ ಪಡೆಯ ಬ್ಯಾಟಿಂಗ್ ವಿಭಾಗ ಅತ್ಯುತ್ತಮವಾಗಿದ್ದರೂ, ಬೌಲಿಂಗ್ ವಿಭಾಗದಲ್ಲಿ ಹೆಚ್ಚಿನ ಸುಧಾರಣೆ ಕಾಣಬೇಕಿದೆ. ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಆಗಮಿಸಿರುವುದು ಆರ್‌ಸಿಬಿ ಬೌಲಿಂಗ್ ಪಡೆ ಬಲಿಷ್ಠವಾಗಲಿದೆ.

ಮತ್ತೊಂದೆಡೆ, ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಈ ಋತುವಿನಲ್ಲಿ ಈವರೆಗೆ ಒಂದು ಗೆಲುವು ಕಾಣಲು ಸಾಧ್ಯವಾಗಿಲ್ಲ. ಡೇವಿಡ್ ವಾರ್ನರ್ ಮತ್ತು ಅಕ್ಷರ್ ಪಟೇಲ್ ಹೊರತುಪಡಿಸಿ ಉಳಿದವರಿಂದ ಉತ್ತಮ ಪ್ರದರ್ಶನ ಹೊರಬಂದಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಯುವ ತಂಡವನ್ನು ಹೊಂದಿದ್ದು, ತಮ್ಮ ಮೊದಲ ಗೆಲುವು ಪಡೆಯಲು ಎದುರು ನೋಡುತ್ತಿದ್ದಾರೆ.
ಐಪಿಎಲ್ 2023ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಯಾವುದೇ ತಂಡದ ಗೆಲುವಿನಲ್ಲಿ ಸಮಗ್ರ ಪ್ರದರ್ಶನ ಅತ್ಯಗತ್ಯ. ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುವುದು ಗ್ಯಾರಂಟಿ. ಎರಡೂ ತಂಡಗಳಲ್ಲಿ ಉತ್ತಮ ಬ್ಯಾಟ್ಸ್‌ಮನ್‌ಗಳಿದ್ದು, ಇಂದಿನ ಪಂದ್ಯದಲ್ಲಿ ಅಬ್ಬರಿಸಲಿರುವ ಸಂಭಾವ್ಯ ಮೂವರು ಬ್ಯಾಟರ್‌ಗಳು ಈ ಕೆಳಗಿನಂತಿದ್ದಾರೆ.

1. ಫಾಫ್ ಡು ಪ್ಲೆಸಿಸ್ (ಆರ್‌ಸಿಬಿ)
ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ತಮ್ಮ ತಂಡದ ಪ್ರದರ್ಶನದಲ್ಲಿ ನಿರ್ಣಾಯಕ ಬ್ಯಾಟ್ಸ್‌ಮನ್ ಆಗಿದ್ದಾರೆ. ಈ ಸ್ಫೋಟಕ ಬ್ಯಾಟರ್ ಆಡಿದ ಮೂರು ಪಂದ್ಯಗಳಲ್ಲಿ 173.27 ಸ್ಟ್ರೈಕ್‌ರೇಟ್‌ನೊಂದಿಗೆ 175 ರನ್ ಗಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪಂದ್ಯಗಳಲ್ಲಿ ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ.
ಫಾಫ್ ಡು ಪ್ಲೆಸಿಸ್ ಅವರು ಆರ್‌ಸಿಬಿ ತಂಡದ ಇನ್ನಿಂಗ್ಸ್ ಆರಂಭಿಸಲಿರುವುದರಿಂದ ತಮ್ಮ ಬ್ಯಾಟಿಂಗ್ ಸಾಮರ್ಥ್ಯದ ಮೂಲಕ ದೊಡ್ಡ ಮೊತ್ತ ಗಳಿಸುತ್ತ ಚಿತ್ತ ಹರಿಸುತ್ತಾರೆ. ಹಿಂದಿನ ಪಂದ್ಯಗಳಲ್ಲಿನ ಅವರ ಪ್ರದರ್ಶನವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಮುಂದುವರೆಸುವ ಸಾಧ್ಯತೆ ಇದೆ.

2. ಡೇವಿಡ್ ವಾರ್ನರ್ (ಡೆಲ್ಲಿ ಕ್ಯಾಪಿಟಲ್ಸ್)
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ತಮ್ಮ ತಂಡ ಸತತ ನಾಲ್ಕು ಪಂದ್ಯಗಳನ್ನು ಸೋತರೂ ಡೇವಿಡ್ ವಾರ್ನರ್ ಅವರಿಂದ ರನ್‌ಗಳ ಹರಿದುಬಂದಿವೆ. ಆಡಿದ ನಾಲ್ಕು ಪಂದ್ಯಗಳಲ್ಲಿ 3 ಅರ್ಧಶತಕಗಳೊಂದಿಗೆ 209 ರನ್ ಬಾರಿಸಿದ್ದಾರೆ.
ಅಲ್ಲದೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಡೇವಿಡ್ ವಾರ್ನರ್ ಯಾವಾಗಲೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಅವರ ಬ್ಯಾಟಿಂಗ್‌ಗೆ ಹೇಳಿಮಾಡಿಸಿದಂತೆ ಇದ್ದು, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಅವರಿಂದ ದೊಡ್ಡ ರನ್ ಬರುವ ಸಾಧ್ಯತೆ ಇದೆ.

3. ವಿರಾಟ್ ಕೊಹ್ಲಿ (ಆರ್‌ಸಿಬಿ)
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ 164 ರನ್ ಗಳಿಸಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇದರಲ್ಲಿ ಅವರು ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ, ಅದರಲ್ಲೂ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ವಿರಾಟ್ ಕೊಹ್ಲಿಯ ಅತ್ಯುತ್ತಮ ದಾಖಲೆ ಹೊಂದಿರುವುದು, ಇಂದಿನ ಪಂದ್ಯದಲ್ಲಿ ಅಬ್ಬರಿಸಲಿದ್ದಾರೆ ಎನ್ನುವುದಕ್ಕೆ ಸಾಕ್ಷಿ.
ವಿರಾಟ್ ಕೊಹ್ಲಿ ಕೊನೆಯವರೆಗೂ ಇನ್ನಿಂಗ್ಸ್ ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ ಮತ್ತು ತಂಡದ ಗೆಲುವಿಗೆ ದೊಡ್ಡ ಮೊತ್ತ ಗಳಿಸುವ ಮುನ್ಸೂಚನೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಲಿಷ್ಠ ಬೌಲಿಂಗ್ ದಾಳಿಯ ಎದುರು ಸಮರ್ಥವಾಗಿ ಬ್ಯಾಟ್ ಬೀಸಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬ್ಯಾಟಿಂಗ್‌ನಲ್ಲಿ ಮಿಂಚುವ ಭರವಸೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications