RCB vs DC: ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ; ಪಂದ್ಯದ ವಿವರ, ಆಡುವ 11ರ ಬಳಗ
ಶನಿವಾರ, ಏಪ್ರಿಲ್ 15ರಂದು ಬೆಂಗಳೂರಿನಲ್ಲಿ ನಡೆಯಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 20ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಲು ಸಜ್ಜಾಗಿವೆ.
ಐಪಿಎಲ್ 2023ರ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಗೆಲುವಿನ ಶುಭಾರಂಭ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ನಂತರ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿತು. ಬಲಿಷ್ಠ ತಂಡವನ್ನು ಹೊಂದಿದ್ದರೂ ಆಡಿದ ಮೂರು ಪಂದ್ಯಗಳಿಂದ 2 ಅಂಕಗಳನ್ನು ಹೊಂದಿದ್ದಾರೆ. ತಮ್ಮ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 212 ರನ್ ಗಳಿಸಿಯೂ ಕೊನೆಯ ಕಳಪೆ ಬೌಲಿಂಗ್ ಪ್ರದರ್ಶನದಿಂದ ಸೋಲಬೇಕಾಯಿತು.

ಆರ್‌ಸಿಬಿ ತಂಡದ ಪರ ಬ್ಯಾಟಿಂಗ್‌ನಲ್ಲಿ ಅಗ್ರಕ್ರಮಾಂಕದ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಫಾರ್ಮ್‌ನಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ಆದರೆ ತಂಡದ ಮಧ್ಯಮ ಕ್ರಮಾಂಕ ಅಷ್ಟೊಂದು ಉತ್ತಮವಾಗಿಲ್ಲ ಎನ್ನುವುದು ಕಳೆದ ಪಂದ್ಯಗಳಲ್ಲಿ ಸಾಬೀತಾಗಿದೆ.
ಇನ್ನು ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗವು ಪ್ರತಿ ಪಂದ್ಯದಲ್ಲಿ ಒಂದು ಅಥವಾ ಎರಡು ಬದಲಾವಣೆ ಆಗುತ್ತಿವೆ. ನಿರ್ಣಾಯಕ ಹಂತದಲ್ಲಿ ಹೆಚ್ಚಿನ ರನ್ ಬಿಟ್ಟುಕೊಡುತ್ತಿರುವುದು ತಂಡಕ್ಕೆ ದುಬಾರಿಯಾಗುತ್ತಿದೆ. ಲಕ್ನೋ ವಿರುದ್ಧ 213 ರನ್‌ಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್ ಇಂತಹ ಬೌಲರ್‌ಗಳಿದ್ದಾಗಲೂ ಸೋಲಿನ ಸುಳಿಗೆ ಸಿಲುಕಿದೆ.

ಮತ್ತೊಂದೆಡೆ, ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ನಾಲ್ಕು ಪಂದ್ಯಗಳಲ್ಲಿ ನಾಲ್ಕೂ ಪಂದ್ಯಗಳನ್ನು ಸೋತು ಭಾರೀ ಮುಖಭಂಗ ಅನುಭವಿಸಿದೆ. ಡೇವಿಡ್ ವಾರ್ನರ್ ಮಾತ್ರ ಉತ್ತಮ ಪ್ರದರ್ಶನ ತೋರುತ್ತಿದ್ದು, ಉಳಿದ ಆಟಗಾರರು ನೆರವಿಗೆ ಬರಬೇಕಿದೆ. ಡೇವಿಡ್ ವಾರ್ನರ್ ಈವರೆಗೆ ಮೂರು ಅರ್ಧಶತಕಗಳಿಂದ 209 ರನ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಶನಿವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ 11ರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಆಕಾಶ್ ದೀಪ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಫಿಲಿಪ್ ಸಾಲ್ಟ್, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಯಶ್ ಧುಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications