RCB vs DC IPL 2024: ಆರ್‌ಸಿಬಿ- ಡೆಲ್ಲಿ ನಡುವೆ ಮೆಗಾಫೈಟ್; ಟಾಸ್ ವರದಿ, ಆಡುವ 11ರ ಬಳಗ
ಮೇ 12 ಭಾನುವಾರ, 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ಸೆಣಸಾಡುತ್ತಿವೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಆರ್‌ಸಿಬಿ ಮತ್ತು ಡೆಲ್ಲಿ ಪಂದ್ಯಕ್ಕೆ ಅತಿಥೇಯ ವಹಿಸಿದೆ.
ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಸರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ಮುನ್ನೆಡೆಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಮೊದಲು ಬ್ಯಾಟಿಂಗ್ ಮಾಡಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಈವರೆಗೆ ಆಡಿರುವ 12 ಪಂದ್ಯಗಳಲ್ಲಿ 6ರಲ್ಲಿ ಜಯಗಳಿಸಿ 6ರಲ್ಲಿ ಸೋತು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಆರ್‌ಸಿಬಿ 12 ಪಂದ್ಯಗಳಲ್ಲಿ 5ರಲ್ಲಿ ಗೆದ್ದು, 7ರಲ್ಲಿ ಸೋತು 10 ಅಂಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಎರಡು ತಂಡಗಳಿಗೂ ಈ ಪಂದ್ಯವನ್ನು ಗೆಲ್ಲುವುದು ಪ್ಲೇ ಆಫ್ ರೇಸ್‌ನಲ್ಲಿ ಉಳಿದುಕೊಳ್ಳಲು ನೆರವಾಗಲಿದೆ.
ಆರ್‌ಸಿಬಿ vs ಡಿಸಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಆರ್‌ಸಿಬಿ vs ಡಿಸಿ ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ತಂಡ : ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್(ವಿ.ಕೀ), ಶಾಯ್ ಹೋಪ್, ಕುಮಾರ್ ಕುಶಾಗ್ರಾ, ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್(ನಾಯಕ), ಕುಲದೀಪ್ ಯಾದವ್, ರಸಿಖ್ ದಾರ್ ಸಲಾಂ, ಮುಕೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ : ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿ.ಕೀ), ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications