Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs DC: ಪಂದ್ಯದ ಸಮಯ, ಪಿಚ್‌ ವರದಿ, ಪ್ಲೇಯಿಂಗ್ ಇಲೆವೆನ್‌ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಿನೇ ದಿನೇ ರೋಚಕತೆ ಹೆಚ್ಚಿಸುತ್ತಿದೆ. ಲೀಗ್ ಹಂತ ಈಗ ಮಹತ್ವ ಪಡೆಯುತ್ತಿದೆ. ಎಲ್ಲ ತಂಡಗಳು ಪ್ಲೇ ಆಫ್‌ ಲೆಕ್ಕಾಚಾರವನ್ನು ಆರಂಭಿಸಿವೆ. ಸೋಮವಾರ ಐಪಿಎಲ್‌ ಲೀಗ್‌ನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಬಿಗ್ ಫೈಟ್ ನಡೆಯಲಿದೆ. ಪ್ಲೇ ಆಫ್‌ ದೃಷ್ಟಿಕೋನದಿಂದ ಈ ಹೋರಾಟ ಮಹತ್ವ ಪಡೆದುಕೊಂಡಿದೆ.

ಈಗಾಗಲೇ ಡೆಲ್ಲಿ, ಆರ್‌ಸಿಬಿ ಲೀಗ್‌ ಹಂತದಲ್ಲಿ ಒಂದು ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಡೆಲ್ಲಿ ಭರ್ಜರಿ ಪ್ರದರ್ಶನ ನೀಡಿ ಜಯ ಸಾಧಿಸಿದೆ. ಆರ್‌ಸಿಬಿ ಈ ಪಂದ್ಯದ ಸೋಲಿನ ಕಹಿಯ ರುಚಿಯನ್ನು ಡೆಲ್ಲಿ ತಂಡಕ್ಕೆ ಉಣಬಡಿಸಲು ಕಾತುರವಾಗಿದೆ. ಆರ್‌ಸಿಬಿ ತಂಡದ ಸೂಪರ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ತಮ್ಮ ತವರು ಮೈದಾನದಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ ಎಲ್ಲರ ಕಣ್ಣುಗಳು ಇವರ ಮೇಲೆ ನೆಟ್ಟಿವೆ.

RCB vs DC

ಆರ್‌ಸಿಬಿ ಹಾಗೂ ಡೆಲ್ಲಿ ತಂಡಗಳು ಐಪಿಎಲ್‌ನಲ್ಲಿ ಒಟ್ಟು 34 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್‌ಸಿಬಿ 20ರಲ್ಲಿ ಜಯ ಸಾಧಿಸಿದೆ. ಡೆಲ್ಲಿ 13ರಲ್ಲಿ ಜಯ ಸಾಧಿಸಿದೆ. ಪಂಜಾಬ್‌ ವಿರುದ್ಧ ದಾಖಲೆಯ ರನ್‌ ಕಲೆ ಹಾಕಿದರೂ ಡೆಲ್ಲಿ ಸೋಲು ಕಂಡಿದ್ದು ತಂಡದ ಚಿಂತೆಯನ್ನು ದ್ವಿಗುಣ ಮಾಡಿದೆ. ಆರ್‌ಸಿಬಿ ವಿರುದ್ಧ ಜಯ ಸಾಧಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಅಕ್ಷರ್ ಪಟೇಲ್‌ ಪಡೆ ಪ್ಲ್ಯಾನ್ ಮಾಡಿಕೊಂಡಿದೆ.

ಪಿಚ್‌ ವರದಿ ಏನು ಹೇಳುತ್ತದೆ?

ಡೆಲ್ಲಿ ಹಾಗೂ ಆರ್‌ಸಿಬಿ ನಡುವಣ ಸೋಮವಾರ ನಡೆಯಲಿರುವ ಪಂದ್ಯ 5ನೇ ಪಿಚ್‌ನಲ್ಲಿ ನಡೆಯಲಿದೆ. ಇದೇ ಮೈದಾನದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಜಿಟಿ 210 ರನ್‌ ಸೇರಿಸಿತ್ತು. ಸವಾಲಿನ ಗುರಿಯನ್ನು ಡಿಸಿ ದಾಖಲಿಸಿತ್ತು. ಈ ಪಿಚ್‌ ಬ್ಯಾಟರ್‌ಗಳಿಗೆ ಸಹಕಾರಿ ಆಗಲಿದೆ.

ಅಂಕ ಪಟ್ಟಿಯಲ್ಲಿ ಆರ್‌ಸಿಬಿ, ಡಿಸಿ ಯಾವ ಸ್ಥಾನದಲ್ಲಿದೆ?

ಆರ್‌ಸಿಬಿ ಇದುವರೆಗೆ 7 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಜಯಗಳಿಸಿ ಒಟ್ಟು 10 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಡೆಲ್ಲಿ ತಂಡವು 7 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳಲ್ಲಿ ಜಯಗಳಿಸಿ ಒಟ್ಟು 6 ಅಂಕಗಳಿಸಿ 7ನೇ ಸ್ಥಾನದಲ್ಲಿದೆ.

ದೆಹಲಿ ಕ್ಯಾಪಿಟಲ್ಸ್ ತಂಡದ ಪ್ಲೇಯಿಂಗ್ ಇಲೆವೆನ್‌ ಹೇಗಿರಲಿದೆ?

ಕೆ ಎಲ್ ರಾಹುಲ್, ಪತುಮ್ ನಿಸ್ಸಾಂಕ, ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಷರ್ ಪಟೇಲ್, ಕೈಲ್ ಜೇಮಿಸನ್, ದುಷ್ಮಂತ ಚಮೀರ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್, ಅಕಿಬ್ ನಬಿ.

ಯಾರಿಗೆಲ್ಲಾ ಆರ್‌ಸಿಬಿ ತಂಡದಲ್ಲಿ ಸ್ಥಾನ ನೀಡಬಹುದು?

ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್/ ಫಿಲ್ ಸಾಲ್ಟ್‌, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ರಸಿಖ್ ಸಲಾಮ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.

19ನೇ ಆವೃತ್ತಿಯ 39ನೇ ಪಂದ್ಯವನ್ನು ಎಲ್ಲಿ ನೋಡಬಹುದು?

ಆರ್‌ಸಿಬಿ ಹಾಗೂ ಡೆಲ್ಲಿ ನಡುವಣ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ನೋಡಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ ಸ್ಟಾರ್‌ನಲ್ಲಿ ವೀಕ್ಷಿಸಬಹುದು.

ಡೆಲ್ಲಿ ಹಾಗೂ ಆರ್‌ಸಿಬಿ ನಡುವಣ ಪಂದ್ಯ ನಡೆಯುವುದು ಯಾವಾಗ?

ಡೆಲ್ಲಿ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುವ ಆರ್‌ಸಿಬಿ, ಡೆಲ್ಲಿ ನಡುವಣ ಪಂದ್ಯ ಸಂಜೆ 7.30ಕ್ಕೆ ನಡೆಯಲಿದ್ದು, ಪಂದ್ಯಕ್ಕೂ ಅರ್ಧ ಗಂಟೆ ಮುನ್ನ ಟಾಸ್ ನಡೆಯಲಿದೆ.

Story first published: Monday, April 27, 2026, 8:38 [IST]
Other articles published on Apr 27, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+