RCB vs DC: ಹ್ಯಾಟ್ರಿಕ್ ಸೋಲಿನ ಭೀತಿಯಿಂದ ಪಾರಾದ ಡೆಲ್ಲಿ: ಕೆಎಲ್ ರಾಹುಲ್‌ಗೆ ಗೆಲುವಿನ ಗಿಫ್ಟ್
ಬೆಂಗಳೂರು: ಬರ್ತ್ ಡೇ ಬಾಯ್ ಕೆಎಲ್ ರಾಹುಲ್ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರು ಬಾರಿಸಿದ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19ನೇ ಆವೃತ್ತಿ ಐಪಿಎಲ್ ನ 26ನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿ ಅಬ್ಬರಿಸಿದೆ.
ಗುರಿಯನ್ನು ಹಿಂಬಾಲಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗುತ್ತು. ಆರಂಭಿಕ ಪತುಮ್ ನಿಸ್ಸಂಕಾ ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲೇ ಔಟ್ ಆದರು. ಕರ್ನಾಟಕದ ಸ್ಟಾರ್ ಆಟಗಾರ ಕರುಣ್ ನಾಯರ್ (5), ಸಮೀರ್ ರಿಜ್ವಿ (2) ರನ್ ಕಲೆ ಹಾಕಲು ಪರದಾಟ ನಡೆಸಿದರು.

ರಾಹುಲ್ ಅರ್ಧಶತಕ
ಪವರ್ ಪ್ಲೇನಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಟ್ರಿಸ್ಟನ್ ಸ್ಟಬ್ಸ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಇವರು 44 ಎಸೆತಗಳಲ್ಲಿ 69 ರನ್ ಸೇರಿಸಿತು. ಈ ಹಂತದಲ್ಲಿ ಆರಂಭಿಕ ಆಟಗಾರ ರಾಹುಲ್ 57 ರನ್ ಬಾರಿಸಿ ಔಟ್ ಆದರು. ಇವರು 6 ಬೌಂಡರಿ, 2 ಸಿಕ್ಸರ್ ಬಾರಿಸಿದರು. ರಾಹುಲ್ ತಮ್ಮ ಹುಟ್ಟುಹಬ್ಬದ ದಿನ ಕ್ಲಾಸಿಕ್ ಆಟವನ್ನು ಆಡಿದರು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ (18) ಮೊದಲ ವಿಕೆಟ್‌ಗೆ 52 ರನ್ ಸಿಡಿಸಿದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ದೇವದತ್ ಪಡಿಕ್ಕಲ್ 18 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಡೇವಿಡ್ ಮಿಲ್ಲರ್‌ಗೆ ಕ್ಯಾಚ್ ನೀಡಿದರು. ನಾಯಕ ರಜತ್ ಪಾಟಿದಾರ್ (8) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ.
ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಟ್ರಿಸ್ಟನ್ ಸ್ಟಬ್ಸ್ ಅಜೇಯ 60 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ಇವರು 4 ಬೌಂಡರಿ, 1 ಸಿಕ್ಸರ್ ಬಾರಿಸಿ ಮಿಂಚಿದರು. ನಾಯಕ ಅಕ್ಷರ್ ಪಟೇಲ್ ರಿಟೈಡ್ ಹರ್ಟ್ ಆಗುವ ಮುನ್ನ 26 ರನ್ ಬಾರಿಸಿದ್ದರು. ಡೇವಿಡ್ ಮಿಲ್ಲರ್ 22 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ದಾಟಿಸಿದರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್‌ಗಳಲ್ಲಿ 4 ವಿಕೆಟ್‌ಗೆ 179 ರನ್ ಕಲೆ ಹಾಕಿತು. ಆರ್‌ಸಿಬಿ ತಂಡದ ಪರ ಭುವನೇಶ್ವರ್ ಕುಮಾರ್ 3 ವಿಕೆಟ್ ಕಬಳಿಸಿದರು.

ಫಿಲ್ ಸಾಲ್ಟ್ ಆರ್ಭಟ
ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 63 ರನ್ ಸಿಡಿಸಿ ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಟಿಮ್ ಡೇವಿಡ್ 3 ಬೌಂಡರಿ, 1 ಸಿಕ್ಸರ್ ನೆರವಿನಿಂದ 26 ರನ್ ಬಾರಿಸಿ ಔಟ್ ಆದರು. ಜಿತೇಶ್ ಶರ್ಮಾ 14, ಕೃನಾಲ್ ಪಾಂಡ್ಯ 12 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 175 ರನ್ ಸೇರಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ವೇಗದ ಬೌಲರ್ ಲುಂಗಿ ಎನ್‌ಗಿಡಿ 2, ಸ್ಪಿನ್ ಬೌಲರ್‌ಗಳಾದ ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.
ಅಂಕ ಪಟ್ಟಿ
ಈ ಗೆಲುವಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಆಡಿದ 5 ಪಂದ್ಯಗಳಲ್ಲಿ 3 ಜಯ ಸಾಧಿಸಿದ್ದು, 6 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬೆಂಗಳೂರು ತಂಡ ಆಡಿದ 6 ಪಂದ್ಯಗಳಲ್ಲಿ 4 ಜಯ ದಾಖಲಿಸಿದ್ದು 8 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications