RCB vs DC ಚಿನ್ನಸ್ವಾಮಿಯಲ್ಲಿ ಹೈವೋಲ್ಟೇಜ್ ಪಂದ್ಯ; ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ, ನೇರಪ್ರಸಾರ, ಸಮಯದ ಮಾಹಿತಿ
ಬೆಂಗಳೂರು: 19ನೇ ಆವೃತ್ತಿ ಐಪಿಎಲ್‌ನ 26ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ಕೆಎಲ್ ರಾಹುಲ್ ಕಣಕ್ಕೆ ಇಳಿಯಲಿದ್ದು, ಇವರ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಇದೇ ಅಂಗಳದಲ್ಲಿ ಆಡಿ ಬೆಳೆದ ಇನ್ನೊಬ್ಬ ಬ್ಯಾಟರ್ ಕರುಣ್ ನಾಯರ್ ಸಹ ಡೆಲ್ಲಿ ತಂಡದಲ್ಲಿದ್ದು, ಇವರಿಗೆ ಶನಿವಾರ ನಡೆಯುವ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಲಭಿಸುತ್ತದಾ ಎಂಬ ಲೆಕ್ಕಾಚಾರ ಆರಂಭವಾಗಿದೆ.
ಆರ್‌ಸಿಬಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕೆ ಇಳಿದಿದ್ದು, ತನ್ನ ಸಾಮರ್ಥ್ಯಕ್ಕೆ ತಕ್ಕ ಆಟವನ್ನೇ ಆಡಿದೆ. ಆರ್‌ಸಿಬಿ ಎರಡನೇ ಬಾರಿ ಪ್ರಶಸ್ತಿ ಗೆಲುವಿನ ನಗೆ ಬೀರಲು ಸಿದ್ಧತೆ ನಡೆಸಿದೆ. ಆರ್‌ಸಿಬಿ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಉತ್ತಮವಾಗಿದ್ದು, ಭರವಸೆ ಹೆಚ್ಚಿದೆ. ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಮಹತ್ವದ ವಿವರ ಇಲ್ಲಿದೆ.

ಪಿಚ್ ವರದಿ
ಬ್ಯಾಟರ್‌ಗಳ ಸ್ವರ್ಗ ಎಂದೇ ಖ್ಯಾತಿ ಪಡೆದಿದ್ದ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಆದರೆ ಸದ್ಯದ ಪರಿಸ್ಥಿತಿಯಲ್ಲಿ ಪಿಚ್ ಬೌಲರ್‌ಗಳಿಗೆ ಸಹಕಾರಿಯಾಗಿದೆ. ಕಳೆದ ಕೆಲವು ಪಂದ್ಯಗಳಲ್ಲಿ ಈ ಪಿಚ್‌ನಲ್ಲಿ ಕಡಿಮೆ ಸ್ಕೋರ್‌ಗಳು ದಾಖಲಾಗಿವೆ. ಈ ಪಿಚ್ ಒಣಗಿರುವುದರಿಂದ ಚೆಂಡು ನಿಧಾನವಾಗಿ ಬ್ಯಾಟ್‌ಗೆ ಬರುತ್ತದೆ. ಹೀಗಾಗಿ ಪಂದ್ಯ ರೋಚಕತೆ ಹೆಚ್ಚಿಸಿದೆ.
ಅಂಕಪಟ್ಟಿಯಲ್ಲಿ ಆರ್‌ಸಿಬಿ, ಡೆಲ್ಲಿ ಯಾವ ಸ್ಥಾನದಲ್ಲಿವೆ?
ಆರ್‌ಸಿಬಿ ತಂಡ ಆಡಿದ 5 ಪಂದ್ಯಗಳಲ್ಲಿ 4 ಜಯ ಸಾಧಿಸಿದ್ದು, 8 ಅಂಕಗಳನ್ನು ಕಲೆ ಹಾಕಿದ್ದು, 3ನೇ ಸ್ಥಾನದಲ್ಲಿದೆ. ಡೆಲ್ಲಿ ಆಡಿದ 4 ಪಂದ್ಯಗಳಲ್ಲಿ 2 ಜಯ, 2 ಸೋಲು ಕಂಡಿದ್ದು, ಆರನೇ ಸ್ಥಾನದಲ್ಲಿದೆ.
ಐಪಿಎಲ್‌ನಲ್ಲಿ ಉಭಯ ತಂಡಗಳ ಮುಖಾಮುಖಿ ಆದಾಗ ಮೇಲುಗೈ ಸಾಧಿಸಿದ್ದು ಯಾರು?
ಉಭಯ ತಂಡಗಳು ಈ ವರೆಗೆ ಐಪಿಎಲ್‌ನಲ್ಲಿ 33 ಬಾರಿ ಮುಖಾಮುಖಿಯಾಗಿದ್ದು, ಆರ್‌ಸಿಬಿ 20, ಡೆಲ್ಲಿ 12 ರಲ್ಲಿ ಗೆಲುವು ದಾಖಲಿಸಿದೆ.
ಆರ್‌ಸಿಬಿ ಪರ ಅತಿ ಹೆಚ್ಚು ರನ್ ಕಲೆ ಹಾಕಿದ ಆಟಗಾರ ಯಾರು?
ವಿರಾಟ್ ಕೊಹ್ಲಿ ಆಡಿದ 5 ಪಂದ್ಯಗಳಲ್ಲಿ 228 ರನ್ ಕಲೆ ಹಾಕಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ರನ್ ಸಾಧಕರು ಯಾರು?
ಡೆಲ್ಲಿ ಪರ ಯುವ ಬ್ಯಾಟರ್ ಸಮೀರ್ ರಿಜ್ವಿ 166 ರನ್ ಸಿಡಿಸಿದ್ದಾರೆ.
ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು?
ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ರಸಿಖ್ ಸಲಾಂ, ಸುಯಶ್ ಶರ್ಮಾ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?
ಪತುಮ್ ನಿಸ್ಸಾಂಕ, ಕೆ. ಎಲ್. ರಾಹುಲ್, ನಿತೀಶ್ ರಾಣಾ, ಅಶುತೋಷ್ ಶರ್ಮಾ, ಸಮೀರ್ ರಿಜ್ವಿ, ಅಕ್ಷರ್ ಪಟೇಲ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಅಕಿಬ್ ನಬಿ, ಲುಂಗಿ ಎನ್ಗಿಡಿ, ಕುಲದೀಪ್ ಯಾದವ್, ಟಿ. ನಟರಾಜನ್, ಮುಖೇಶ್ ಕುಮಾರ್.
ಪಂದ್ಯವನ್ನು ನೇರ ಪ್ರಸಾರದಲ್ಲಿ ನೋಡುವುದು ಹೇಗೆ?
ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೋಡಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್ ಸ್ಟಾರ್‌ನಲ್ಲಿ ವೀಕ್ಷಿಸಬಹುದು.
ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ನಡೆಯುವುದು ಯಾವಾಗ?
ಆರ್‌ಸಿಬಿ, ಡೆಲ್ಲಿ ನಡುವಣ ಪಂದ್ಯ ಶನಿವಾರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಅಲ್ಲದೆ ಟಾಸ್ ಅರ್ಧ ಗಂಟೆ ಮುಂಚಿತವಾಗಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications